ಮೈಸೂರು: ಸಾಂಸ್ಕೃತಿಕ ನಗರ ಮೈಸೂರಿನಲ್ಲಿ ರಿಲಯನ್ಸ್ ಜಿಯೋ ಇಂದು (ಡಿಸೆಂಬರ್ 28) ಟ್ರೂ 5ಜಿ ಸೇವೆಗಳಿಗೆ ಚಾಲನೆ ನೀಡಿದೆ.
ಲಖನೌ, ತಿರುವನಂತಪುರಂ, ನಾಸಿಕ್, ಔರಂಗಾಬಾದ್, ಚಂಡೀಗಢ, ಮೊಹಾಲಿ, ಪಂಚಕುಲ, ಜಿರಾಕ್‌ಪುರ, ಖರಾರ್ ಮತ್ತು ದೇರಾಬಸ್ಸಿಗಳಲ್ಲಿ ಕೂಡ ತನ್ನ ಟ್ರೂ 5ಜಿ ಸೇವೆಗಳ ಪ್ರಾರಂಭದ ಬಗ್ಗೆ ಜಿಯೋ ಘೋಷಣೆ ಮಾಡಿದೆ. ಮೈಸೂರಿನಲ್ಲಿ ಮೊದಲ ಬಾರಿಗೆ 5ಜಿ ಸೇವೆ ಆರಂಭವಾಗಿದ್ದು ಸದ್ಯಕ್ಕೆ ರಿಲಯನ್ಸ್ ಜಿಯೋ ಮಾತ್ರ ಈ ನಿಟ್ಟಿನಲ್ಲಿ ಮುಂದಡಿ ಇಟ್ಟಿದೆ.
ಇಂದಿನಿಂದ ಯಾವುದೇ ಹೆಚ್ಚುವರಿ ವೆಚ್ಚವಿಲ್ಲದೆ 1 ಜಿಬಿಪಿಎಸ್+ ವೇಗದಲ್ಲಿ ಅನಿಯಮಿತ ಡೇಟಾವನ್ನು ಅನುಭವಿಸಲು ಮೈಸೂರಿನಲ್ಲಿರುವ ಜಿಯೋ ಬಳಕೆದಾರರನ್ನು ಜಿಯೋ ವೆಲ್‌ಕಮ್ ಆಫರ್‌ಗೆ ಆಹ್ವಾನಿಸಲಾಗಿದೆ.
“” ಮೈಸೂರು ನಗರದಲ್ಲಿ 5ಜಿ ಆರಂಭಿಸುವುದಕ್ಕೆ ನಾವು ಹೆಮ್ಮೆಪಡುತ್ತೇವೆ. ಟ್ರೂ 5ಜಿ ಸೇವೆಗಳನ್ನು ಹೊರತರಲು ಪ್ರಾರಂಭಿಸಿದಾಗಿನಿಂದ ನಮ್ಮ ಅತಿದೊಡ್ಡ ಆರಂಭದಲ್ಲಿ ಇದು ಒಂದಾಗಿದೆ. 2023ರಿಂದ ಜಿಯೋ ಟ್ರೂ 5ಜಿ ತಂತ್ರಜ್ಞಾನದ ವಿಭಿನ್ನ ಪ್ರಯೋಜನಗಳನ್ನು ಆನಂದಿಸಬಹುದು. ಇದು ನಮ್ಮ ಲಕ್ಷಾಂತರ ಜಿಯೋ ಬಳಕೆದಾರರಿಗೆ ಸಲ್ಲಿಸುವ ಗೌರವವಾಗಿದೆ ಎಂದು ಜಿಯೋ ಹೇಳಿದೆ.
“” ಮೈಸೂರು ನಮ್ಮ ದೇಶದ ಪ್ರಮುಖ ಪ್ರವಾಸೋದ್ಯಮ ಕೇಂದ್ರ ಮತ್ತು ಪ್ರಮುಖ ಶಿಕ್ಷಣ ಕೇಂದ್ರವಾಗಿದೆ. ಜಿಯೋದ ಟ್ರೂ 5ಜಿ ಸೇವೆಗಳ ಪ್ರಾರಂಭದೊಂದಿಗೆ ಈ ಪ್ರದೇಶದ ಗ್ರಾಹಕರು ಕೇವಲ ಉತ್ತಮ ದೂರಸಂಪರ್ಕ ಜಾಲವನ್ನು ಮಾತ್ರವಲ್ಲ, ಜತೆಗೆ ಇ- ಆಡಳಿತ, ಶಿಕ್ಷಣ, ಆಟೋಮೇಷನ್, ಕೃತಕ ಬುದ್ಧಿಮತ್ತೆ, ಗೇಮಿಂಗ್, ಆರೋಗ್ಯ, ಕೃಷಿ, ಐಟಿ ಕ್ಷೇತ್ರಗಳಲ್ಲಿ ಮತ್ತು ಸಣ್ಣ ಮತ್ತು ಮಧ್ಯಮ ಸಂಸ್ಥೆಗಳು ಅಮೋಘ ಬೆಳವಣಿಗೆಯ ಅವಕಾಶಗಳನ್ನು ಪಡೆಯುತ್ತಾರೆ.
ಈ ಪ್ರದೇಶವನ್ನು ಡಿಜಿಟಲೈಸ್ ಮಾಡುವ ನಮ್ಮ ಪ್ರಯತ್ನದಲ್ಲಿ ನಿರಂತರ ಬೆಂಬಲ ನೀಡುತ್ತಿರುವ ಕರ್ನಾಟಕ ಸರ್ಕಾರಕ್ಕೆ ನಾವು ಆಭಾರಿಯಾಗಿದ್ದೇವೆʼʼ ಎಂದು ಕಂಪನಿ ಹೇಳಿಕೊಂಡಿದೆ
ಚಾಮರಾಜನಗರ: ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ರಾಷ್ಟ್ರೀಯ ಉದ್ಯಾನವನ ಬಂಡೀಪುರ ಅರಣ್ಯದಲ್ಲಿ ನೂತನ ವರ್ಷಾಚರಣೆಗೆ ಕಡಿವಾಣ ಹಾಕಲಾಗಿದೆ. ಈ ಬಾರಿ ವಾಸ್ತವ್ಯದ…
ಬೆಂಗಳೂರು: ದೇಶದೆಲ್ಲೆಡೆ ವೈಕುಂಠ ಏಕಾದಶಿ ಸಂಭ್ರಮ ಮನೆ ಮಾಡಿದ್ದು, ವೈಕುಂಠ ಏಕಾದಶಿಯಂದು ಸ್ವರ್ಗದ ಬಾಗಿಲು ತೆರೆಯುತ್ತದೆ ಎಂಬ ನಂಬಿಕೆ ಇದೆ.…
ಕುವೆಂಪು ಮಲೆನಾಡಿನಲಿ ಹುಟ್ಟಿದರು ಮೈಸೂರಿಗೆ ಕಾಲಿಟ್ಟರು ಕವಿಯಾಗಿ ಕನ್ನಡದ ಮೊದಲ ಜ್ಞಾನಪೀಠ ಗಳಿಸಿದರು ಮೂಢನಂಬಿಕೆಯನು ಬದಿಗೊತ್ತಿ ವಿಜ್ಞಾನದ ಬೀಜ ಬಿತ್ತಿ…
ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿವಿ (ಕೆಎಸ್‌ಒಯು) ರಸ್ತೆ ಸಂಪೂರ್ಣ ಹಾಳಾಗಿದ್ದು, ವಾಹನ ಸಂಚಾರಕ್ಕೆ ತೀವ್ರ ತೊಂದರೆಯಾಗಿದೆ. ಮಳೆಗಾಲದಲ್ಲಿ ಈ…
ಹೆಗ್ಗಡದೇವನಕೋಟೆ ತಾಲ್ಲೂಕಿನ ಹಂಪಾಪುರ ಗ್ರಾಮದಿಂದ ಜಿನ್ನಹಳ್ಳಿ -ಮಲಾರದಹುಂಡಿಗೆ ತೆರಳುವ ಮುಖ್ಯ ರಸ್ತೆ ಹಾಳಾಗಿದ್ದು, ವಿಪರೀತ ಹಳ್ಳ-ಕೊಳ್ಳಗಳಿಂದ ಕೂಡಿದೆ. ಹಲವಾರು ಬಾರಿ…
ಹೊಸ ವರ್ಷದ ಆಚರಣೆ ಡಿ.೩೧ರ ರಾತ್ರಿ ಮತ್ತು ಜನವರಿ ೧ ರಂದು ನಡೆಯುತ್ತದೆ. ಯುವ ಜನತೆಗೆ ಹೊಸ ವರ್ಷದ ಆಚರಣೆ…