ಜಿಲ್ಲೆಗಳು

ಮೈಸೂರಿನಲ್ಲಿ ಜಿಯೋ 5 ಜಿ ಸೇವೆ ಆರಂಭ

ಮೈಸೂರು: ಸಾಂಸ್ಕೃತಿಕ ನಗರ ಮೈಸೂರಿನಲ್ಲಿ ರಿಲಯನ್ಸ್ ಜಿಯೋ ಇಂದು (ಡಿಸೆಂಬರ್ 28) ಟ್ರೂ 5ಜಿ ಸೇವೆಗಳಿಗೆ ಚಾಲನೆ ನೀಡಿದೆ.

ಲಖನೌ, ತಿರುವನಂತಪುರಂ, ನಾಸಿಕ್, ಔರಂಗಾಬಾದ್, ಚಂಡೀಗಢ, ಮೊಹಾಲಿ, ಪಂಚಕುಲ, ಜಿರಾಕ್‌ಪುರ, ಖರಾರ್ ಮತ್ತು ದೇರಾಬಸ್ಸಿಗಳಲ್ಲಿ ಕೂಡ ತನ್ನ ಟ್ರೂ 5ಜಿ ಸೇವೆಗಳ ಪ್ರಾರಂಭದ ಬಗ್ಗೆ ಜಿಯೋ ಘೋಷಣೆ ಮಾಡಿದೆ. ಮೈಸೂರಿನಲ್ಲಿ ಮೊದಲ ಬಾರಿಗೆ 5ಜಿ ಸೇವೆ ಆರಂಭವಾಗಿದ್ದು ಸದ್ಯಕ್ಕೆ ರಿಲಯನ್ಸ್ ಜಿಯೋ ಮಾತ್ರ ಈ ನಿಟ್ಟಿನಲ್ಲಿ ಮುಂದಡಿ ಇಟ್ಟಿದೆ.

ಇಂದಿನಿಂದ ಯಾವುದೇ ಹೆಚ್ಚುವರಿ ವೆಚ್ಚವಿಲ್ಲದೆ 1 ಜಿಬಿಪಿಎಸ್‌+ ವೇಗದಲ್ಲಿ ಅನಿಯಮಿತ ಡೇಟಾವನ್ನು ಅನುಭವಿಸಲು ಮೈಸೂರಿನಲ್ಲಿರುವ ಜಿಯೋ ಬಳಕೆದಾರರನ್ನು ಜಿಯೋ ವೆಲ್‌ಕಮ್ ಆಫರ್‌ಗೆ ಆಹ್ವಾನಿಸಲಾಗಿದೆ.

“” ಮೈಸೂರು ನಗರದಲ್ಲಿ 5ಜಿ ಆರಂಭಿಸುವುದಕ್ಕೆ ನಾವು ಹೆಮ್ಮೆಪಡುತ್ತೇವೆ. ಟ್ರೂ 5ಜಿ ಸೇವೆಗಳನ್ನು ಹೊರತರಲು ಪ್ರಾರಂಭಿಸಿದಾಗಿನಿಂದ ನಮ್ಮ ಅತಿದೊಡ್ಡ ಆರಂಭದಲ್ಲಿ ಇದು ಒಂದಾಗಿದೆ. 2023ರಿಂದ ಜಿಯೋ ಟ್ರೂ 5ಜಿ ತಂತ್ರಜ್ಞಾನದ ವಿಭಿನ್ನ ಪ್ರಯೋಜನಗಳನ್ನು ಆನಂದಿಸಬಹುದು. ಇದು ನಮ್ಮ ಲಕ್ಷಾಂತರ ಜಿಯೋ ಬಳಕೆದಾರರಿಗೆ ಸಲ್ಲಿಸುವ ಗೌರವವಾಗಿದೆ ಎಂದು ಜಿಯೋ ಹೇಳಿದೆ.

“” ಮೈಸೂರು ನಮ್ಮ ದೇಶದ ಪ್ರಮುಖ ಪ್ರವಾಸೋದ್ಯಮ ಕೇಂದ್ರ ಮತ್ತು ಪ್ರಮುಖ ಶಿಕ್ಷಣ ಕೇಂದ್ರವಾಗಿದೆ. ಜಿಯೋದ ಟ್ರೂ 5ಜಿ ಸೇವೆಗಳ ಪ್ರಾರಂಭದೊಂದಿಗೆ ಈ ಪ್ರದೇಶದ ಗ್ರಾಹಕರು ಕೇವಲ ಉತ್ತಮ ದೂರಸಂಪರ್ಕ ಜಾಲವನ್ನು ಮಾತ್ರವಲ್ಲ, ಜತೆಗೆ ಇ- ಆಡಳಿತ, ಶಿಕ್ಷಣ, ಆಟೋಮೇಷನ್, ಕೃತಕ ಬುದ್ಧಿಮತ್ತೆ, ಗೇಮಿಂಗ್, ಆರೋಗ್ಯ, ಕೃಷಿ, ಐಟಿ ಕ್ಷೇತ್ರಗಳಲ್ಲಿ ಮತ್ತು ಸಣ್ಣ ಮತ್ತು ಮಧ್ಯಮ ಸಂಸ್ಥೆಗಳು ಅಮೋಘ ಬೆಳವಣಿಗೆಯ ಅವಕಾಶಗಳನ್ನು ಪಡೆಯುತ್ತಾರೆ.
ಈ ಪ್ರದೇಶವನ್ನು ಡಿಜಿಟಲೈಸ್ ಮಾಡುವ ನಮ್ಮ ಪ್ರಯತ್ನದಲ್ಲಿ ನಿರಂತರ ಬೆಂಬಲ ನೀಡುತ್ತಿರುವ ಕರ್ನಾಟಕ ಸರ್ಕಾರಕ್ಕೆ ನಾವು ಆಭಾರಿಯಾಗಿದ್ದೇವೆʼʼ ಎಂದು ಕಂಪನಿ ಹೇಳಿಕೊಂಡಿದೆ

andolanait

Recent Posts

ಓದುಗರ ಪತ್ರ: ಪೌರಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣೆ ಸ್ವಾಗತಾರ್ಹ

ಮೈಸೂರು ನಗರದಲ್ಲಿ ಸ್ವಚ್ಛತಾ ಕಾರ್ಯ ನಿರ್ವಹಿಸುತ್ತಿರುವ ಸ್ವಚ್ಛತೆಯ ಜೀವನಾಡಿಗಳಾಗಿರುವ ಪೌರಕಾರ್ಮಿಕರಿಗೆ, ಮೈಸೂರು ಮಹಾನಗರ ಪಾಲಿಕೆ ವತಿಯಿಂದ ಮಣಿಪಾಲ್ ಆಸ್ಪತ್ರೆಯಲ್ಲಿ ಆಯೋಜಿಸಿದ್ದ…

4 hours ago

ಓದುಗರ ಪತ್ರ: ನಿಜವಾದ ಭಾವೈಕ್ಯತೆಯ ಸಂಗಮ

ಮಂಡ್ಯ ಜಿಯ ಮದ್ದೂರಿನಲ್ಲಿ ಭಾನುವಾರ ಗಣೇಶೋತ್ಸವ ಕಾರ್ಯಕ್ರಮದಲ್ಲಿ ಮುಸ್ಲಿಮರೇ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು, ಗೌರಿ -ಗಣೇಶ ಮೂರ್ತಿಗಳನ್ನು ಹೊತ್ತ ಟ್ರ್ಯಾಕ್ಟರ್…

4 hours ago

ಓದುಗರ ಪತ್ರ: ನಾಡಿಗೆ ಮಾದರಿ!

ನಾಡಿಗೆ ಮಾದರಿ! ವಿವಿಧ ಧರ್ಮ ಸಮುದಾಯಗಳ ಮನಸುಗಳ ಅಕ್ಕರೆಯಲಿ ಬೆಸೆವ ಸ್ನೇಹ ಸೌಹಾರ್ದ ಸಾಮರಸ್ಯದ ಪ್ರತೀಕ, ಹಬ್ಬ ಉತ್ಸವಗಳು! ನಾಡಿಗೆ…

4 hours ago

ಓದುಗರ ಪತ್ರ: ಪ್ರೀತಿಯ ಅಣ್ಣ ಪ್ರತಾಪ್ ಸಿಂಹ…

ನಾವಿಬ್ಬರು ಪ್ರೊ. ಬಿ. ಪಿ. ಮಹೇಶ್ ಚಂದ್ರ ಗುರುಗಳ ಶಿಷ್ಯರು. ನಮ್ಮಿಬ್ಬರಿಗೂ ಪ್ರೊ. ಗುರು ಇಷ್ಟ. ನೀನು ಮಂಗಳೂರು ವಿವಿ,…

4 hours ago

ದಸರಾ ಬರುತ್ತಿದೆ, ಮೈಸೂರು ಸಿದ್ಧವಾಗುತ್ತಿದೆಯೇ?

ಶ್ರೇಯಸ್ ದೇವನೂರು ಅಭಿವೃದ್ಧಿಯ ಹೆಸರಿನಲ್ಲಿ ಅರ್ಧ ಕಾಮಗಾರಿ, ಸಂಚಾರದ ಹೆಸರಿನಲ್ಲಿ ಹೆಚ್ಚುತ್ತಿರುವ ಸಂಕಷ್ಟ  ಮೈಸೂರು ದಸರಾ ಎಂದರೆ ಕೇವಲ ಹತ್ತು…

4 hours ago

ಫಾಲ್ಕೆ ಪ್ರಶಸ್ತಿ ಕಲಾಸೇವೆಗೆ ಸಂದ ಗೌರವ: ಅನಂತ್ ನಾಗ್‌

ಸಂದರ್ಶನ: ಬಾನಾಸು  ಇಂದು ಗುಜರಾತಿನ ಕೆವಾಡಿಯಾದಲ್ಲಿ ೭೨ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ನಡೆಯಲಿದೆ. ಚಿತ್ರರಂಗಕ್ಕೆ ಸಲ್ಲಿಸಿದ ಅಮೋಘ ಸೇವೆಗಾಗಿ…

4 hours ago