ಜಿಲ್ಲೆಗಳು

ವರುಣ ಕ್ಷೇತ್ರದಲ್ಲಿ ವಿಜಯೇಂದ್ರ ಗೆದ್ದರೆ ರಾಜಕೀಯ ಸನ್ಯಾಸ : ಮದನ್‌ರಾಜ್‌ ಸವಾಲು

ಮೈಸೂರು: ಮಾಜಿ ಮುಖ್ಯಮಂತ್ರಿ ಬಿ. ಎಸ್‌ ಯಡಿಯೂರಪ್ಪನವರ ಪುತ್ರ ವಿಜಯೇಂದ್ರ ಅವರು ವರ್ಷಕ್ಕೊಮ್ಮೆ ಮಾತ್ರ ಜಾತ್ರೆಗಳ ಸಂದರ್ಭದಲ್ಲಿ ಆಗಮಿಸಿ ಜನರು ಸೇರುವ ಸ್ಥಳದಲ್ಲಿ ದೊಡ್ಡ ಸುದ್ದಿಯಾಗುವ ರೀತಿ ಮಾತನಾಡಿ ಹೋಗುತ್ತಾರೆ. ವರುಣಾ ಕ್ಷೇತ್ರಕ್ಕೆ ಅವರ ಕೊಡುಗೆ ಏನು ಇಲ್ಲ. ಬಿಜೆಪಿ ಪಕ್ಷದಿಂದ ಅವರು ಸ್ಪರ್ಧಿಸಿದರೆ ಸೋಲುವುದು ಖಚಿತ, ಒಂದು ವೇಳೆ ಅವರು ಸ್ಪರ್ಧಿಸಿ ಜಯಗಳಿಸಿದ್ದೇ ಆದಲ್ಲಿ ನಾನು ರಾಜಕೀಯ ಸನ್ಯಾಸ ಸ್ವೀಕರಿಸುವುದಾಗಿ ಟಿ. ನರಸೀಪುರ ಪುರಸಭೆ ಅಧ್ಯಕ್ಷರಾದ ಮದನ್‌ರಾಜ್‌ ಸವಾಲು ಹಾಕಿದ್ದಾರೆ.

ಬುಧವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಈ ವಿಚಾರವಾಗಿ ಮಾಹಿತಿ ನೀಡಿದ್ದಾರೆ. ವಿಜಯೇಂದ್ರ ಅವರು ಬಂದಾಗಲೆಲ್ಲಾ ಜಾತಿಯ ಹೆಸರಲ್ಲಿ ಕ್ಷೇತ್ರದಲ್ಲಿ ವಿಷ ಬೀಜ ಬಿತ್ತಿ ಹೋಗುತ್ತಿದ್ದಾರೆ. ಆದರೆ ಕ್ಷೇತ್ರದ ಜನರು ಇದಕ್ಕೆ ಬಲಿಯಾಗುವುದಿಲ್ಲ ಎಂದರು.  ಪತ್ರಿಕಾಗೋಷ್ಠಿಯಲ್ಲಿ ಪುರಸಭಾ ಸದಸ್ಯರಾದ ಮಂಜುನಾಥ್, ಕಾಂಗ್ರೆಸ್ ಮುಖಂಡ ಮಲ್ಲೇಶ್, ಶ್ರೀಕಂಠ ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದರು.

andolanait

Recent Posts

3,705 ಕೋಟಿ ರೂ. ಪರಿಹಾರ ಕೋರಿ ಕೇಂದ್ರಕ್ಕೆ ಮೆಮೊರಾಂಡಂ ಸಲ್ಲಿಸಿದ ರಾಜ್ಯ ಸರ್ಕಾರ

ಬೆಂಗಳೂರು : ಕರ್ನಾಟಕದಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಹಿನ್ನೆಲೆಯಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಗಂಭೀರವಾಗುತ್ತಿದ್ದು, ಮೊದಲ ಹಂತದಲ್ಲಿ ಘೋಷಿಸಲಾದ 101…

44 mins ago

ಹನೂರು | ಮಳೆಯ ನೀರಿನಲ್ಲಿ ಕೊಚ್ಚಿ ಹೋಗಿ ಕಾರ್ಮಿಕ ಸಾವು

ಹನೂರು : ಕೆಲಸಕ್ಕೆ ಹೋಗಿ ವಾಪಸ್ ಬರುವಾಗ ಮಳೆಯ ನೀರಿನಲ್ಲಿ ಕೊಚ್ಚಿ ಹೋಗಿ ಗಾರೆ ಕಾರ್ಮಿಕರೊಬ್ಬರು ಮೃತಪಟ್ಟಿರುವ ಘಟನೆ ಹನೂರು…

1 hour ago

ಗ್ರಾಮದ ಸ್ವಚ್ಛತೆ ನೋಡಿಕೊಳ್ಳುವವರೇ ಅನೈರ್ಮಲ್ಯಕ್ಕೆ ಕಾರಣ?

ನಂಜನಗೂಡು : ಗ್ರಾಮದ ಸ್ವಚ್ಛತೆಯ ಜವಾಬ್ದಾರಿ ಹೊತ್ತವರೇ ಪಂಚಾಯಿತಿ ಆವರಣವನ್ನೆ ಮೂತ್ರಾಲಯವಾಗಿಸಿ ಅನೈರ್ಮಲ್ಯಕ್ಕೆ ಕಾರಣರಾದರೆ ಬೇರೆಯವರಿಗೆ ಸ್ವಚ್ಚತೆ ಕಾಪಾಡುವ ಬಗ್ಗೆ…

3 hours ago

ಮಹಾಪ್ರವಾಹಕ್ಕೆ ನೇಪಾಳ ತತ್ತರ: ನಾಪತ್ತೆಯಾದವರ ಸಂಖ್ಯೆ 6100ಕ್ಕೆ ಏರಿಕೆ

ಕಠ್ಮಂಡು: ಮಹಾ ಪ್ರವಾಹಕ್ಕೆ ನೇಪಾಳ ತತ್ತರಿಸಿದೆ. ಪ್ರವಾಹ ಹಾಗೂ ಭೂಕುಸಿತದಿಂದ ನಾಪತ್ತೆಯಾದವರ ಸಂಖ್ಯೆ 6,100ಕ್ಕೆ ಏರಿಕೆಯಾಗಿದೆ. ಇದೀಗ ಹೈಡ್ರೋ ಪವರ್…

8 hours ago

ಓದುಗರ ಪತ್ರ: ಇನ್ಸ್‌ಪೆಕ್ಟರ್ ಧನಂಜಯರ ಹೇಳಿಕೆಯಲ್ಲಿ ತಪ್ಪಿಲ್ಲ

ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…

15 hours ago

ಓದುಗರ ಪತ್ರ: ದಸರಾ ಬಂದಾಗ ಮಾತ್ರ ಮೈಸೂರಿಗೆ ಸಿಂಗಾರ

ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…

15 hours ago