ಹನೂರು: ತಾಲ್ಲೂಕಿನ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಳೇ ಮಾರ್ಟಳ್ಳಿ ಗ್ರಾಮದಲ್ಲಿ ತೆರೆಯಲಾಗಿರುವ ಮಹಿಳಾ ಸ್ವಯಂ ಉದ್ಯೋಗ ಕಲಿಕಾ ಕೇಂದ್ರವನ್ನು ರಾಜ್ಯಹಿಂದುಳಿದ ವರ್ಗಗಳ ಕಾರ್ಯಕಾರಿಣಿ ಸದಸ್ಯರಾದ ಜನಧ್ವನಿ ಬಿ ವೆಂಕಟೇಶ್ ಅವರು ಉದ್ಘಾಟಿಸಿದರು.
ನಂತರ ಹಿಂದುಳಿದ ವರ್ಗಗಳ ರಾಜ್ಯ ಕಾರ್ಯಕಾರಿಣಿ ಸದಸ್ಯ ಜನಧ್ವನಿ ಬಿ ವೆಂಕಟೇಶ್ ಮಾತನಾಡಿ ತಾಲ್ಲೂಕಿನಲ್ಲಿಯೇ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂಬ ಖ್ಯಾತಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಅತಿ ಹೆಚ್ಚು ಮಹಿಳೆಯರು ಇರುವುದರಿಂದ ಬಿಜೆಪಿ ಒಬಿಸಿ ಮೋರ್ಚಾ ಹಾಗೂ ಕುರುವಿಲ್ ಫೌಂಡೇಶನ್ ಸಹಯೋಗದೊಂದಿಗೆ ಕಲಿಕಾ ಕೇಂದ್ರವನ್ನು ತೆರೆಯಲಾಗಿದ್ದು,ಈ ಕೇಂದ್ರದಲ್ಲಿ ಐವತ್ತು ಮಹಿಳೆಯರ ಒಂದು ತಂಡ 7ದಿನಗಳ ಕಾಲ ತರಬೇತಿ ಪಡೆಯಲಿದೆ. ತರಬೇತಿ ಸಂದರ್ಭದಲ್ಲಿ ಬೇಕಾಗಿರುವ ಕಚ್ಚಾ ಸಾಮಗ್ರಿಗಳನ್ನು ಒದಗಿಸಿಕೊಡಲಾಗುತ್ತಿದೆ. ಆಟಿಕೆಗಳು,ಗೃಹೋಪಯೋಗಿ ವಸ್ತುಗಳು ಬ್ಯಾಗ್ ಗಳು ಸೇರಿದಂತೆ ವಿವಿಧ ಪದಾರ್ಥಗಳು ಸಿದ್ಧಪಡಿಸಿದ ನಂತರ ಅದಕ್ಕೆ ಬೆಲೆ ನಿಗದಿಪಡಿಸಿ ಮಾರಾಟ ಮಾಡಲಾಗುವುದು ಬಂದಂತಹ ಲಾಭದಿಂದ ಮಹಿಳೆಯರು ಆರ್ಥಿಕವಾಗಿ ಸಬಲರಾಗಬಹುದು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಮಹಿಳಾ ಮೋರ್ಚಾ ಅಧ್ಯಕ್ಷೆ ಮೀನಾ, ಕುರಟ್ಟಿ ಹೊಸೂರು ಗ್ರಾ ಪಂ ಅಧ್ಯಕ್ಷೆ ಲಕ್ಷ್ಮಿ ನಟರಾಜು ಮುಖಂಡರುಗಳಾದ ಸಮನ್ಸ್, ವಡ್ಡರದೊಡ್ಡಿ ಕುಮಾರ್ ಹಾಜರಿದ್ದರು.





