ಜಿಲ್ಲೆಗಳು

ಮಾರ್ಚ್‌ 1ರಿಂದ ಸರ್ಕಾರಿ ನೌಕರರ ಅನಿರ್ದಿಷ್ಟ ಮುಷ್ಕರ

ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಚಂದ್ರಶೇಖರ್ ಹೇಳಿಕೆ

ಚಾಮರಾಜನಗರ: ಒಪಿಎಸ್ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಮಾರ್ಚ್‌ 1  ರಿಂದ ಕರ್ತವ್ಯಕ್ಕೆ ಗೈರಾಗುವ ಮೂಲಕ ಅನಿರ್ದಿಷ್ಟ ಮುಷ್ಕರ ನಡೆಸಲಾಗುವುದು ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಚಂದ್ರಶೇಖರ್ ಹೇಳಿದರು.
ನಗರದಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 2023-24ನೇ ಸಾಲಿನ ಬಜೆಟ್‌ನಲ್ಲಿ ಸರ್ಕಾರಿ ನೌಕರರ ವೇತನ, ಭತ್ಯೆ ಪರಿಷ್ಕರಣೆಗೆ ಸಂಬಂಧಿಸಿದಂತೆ ಯಾವುದೇ ಪ್ರಸ್ತಾಪ ಮಾಡದಿರುವುದು ಬೇಸರ ಮೂಡಿಸಿದೆ ಎಂದರು.
ಮುಷ್ಕರ ಸಂದರ್ಭದಲ್ಲಿ ನೌಕರರೆಲ್ಲರೂ ಮನೆಯಲ್ಲೇ ಇದ್ದುಕೊಂಡು ಡಿಪಿ ಹಾಗೂ ಸ್ಟೇಟಸ್‌ನಲ್ಲಿ ಬಿತ್ತಿಪತ್ರಗಳನ್ನು ಹಾಕುವ ಮೂಲಕ ಪ್ರತಿಭಟನೆ ನಡೆಸಲಾಗುವುದು. 6ನೇ ವೇತನ ಆಯೋಗದ ಮಾದರಿಯಂತೆ  7ನೇ ವೇತನ ಆಯೋಗದಿಂದ  ಶೀಘ್ರ ಮಧ್ಯಂತರ ವರದಿ ಪಡೆದು ವಿಧಾನಸಭಾ ಚುನಾವಣೆ ನೀತಿಸಂಹಿತೆ ಜಾರಿಗೂ ಮೊದಲು ಫಿಟ್‌ಮೆಂಟ್ ಸೌಲಭ್ಯ ಜಾರಿಗೊಳಿಸಬೇಕು ಎಂದು ಒತ್ತಾಯಿಸಿದರು.
ಪಂಜಾಬ್, ರಾಜಾಸ್ತಾನ, ಹಿವಾಚಲಪ್ರದೇಶಗಳ ಮಾದರಿಯಲ್ಲಿ ಎನ್‌ಪಿಎಸ್ ರದ್ದುಪಡಿಸಿ ಒಪಿಎಸ್ ಪಿಂಚಣಿ ಸೌಲಭ್ಯ ಜಾರಿಗೊಳಿಸಬೇಕು. ಈ ಮೂಲಕ ನೌಕರರ ಸಂಧ್ಯಾಕಾಲದ ಬದುಕಿಗೆ ಆಸರೆಯಾಗಬೇಕೆಂದು ಮನವಿ ಮಾಡಿದರು.
ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಹದೇವಸ್ವಾಮಿ, ಉಪಾಧ್ಯಕ್ಷ ಶಿವಮೂರ್ತಿ, ಯೋಗೇಶ್, ಖಜಾಂಚಿ ಮಹದೇವಯ್ಯ, ಕೃಷ್ಣಮೂರ್ತಿ, ರಾಜ್ಯ ಪರಿಷತ್ ಸದಸ್ಯ ಮಲ್ಲಿಕಾರ್ಜುನ ಕುಂಟೋಜಿ ಸುದ್ದಿಗೋಷ್ಠಿಯಲ್ಲಿ ಹಾಜರಿದ್ದರು.

andolanait

Recent Posts

ಸಂಸದ ಯದುವೀರ್‌ ಪ್ರಯತ್ನದ ಫಲಶ್ರುತಿ : ತಂಬಾಕು ಮಾರಾಟಕ್ಕೆ ಅನುಮತಿ

ಅಧಿಸೂಚನೆ ಹೊರಡಿಸಿದ ಕೇಂದ್ರ ಸರ್ಕಾರ ಮೈಸೂರು : ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ತಂಬಾಕು ಬೆಳೆಗಾರರ ಸಮಸ್ಯೆಗಳು ಹಾಗೂ ಮಾರಾಟ…

6 hours ago

ಅರಮನೆ ಫಲಪುಷ್ಪ ಪ್ರದರ್ಶನ | ಸಂಗೀತ ಸಂಜೆಯಲ್ಲಿ ಪ್ರೇಕ್ಷಕರು ತಲ್ಲೀನ

ಮೈಸೂರು : ಮೈಸೂರು ಅರಮನೆ ಮಂಡಳಿ ವತಿಯಿಂದ ಕ್ರಿಸ್‌ಮಸ್ ಹಾಗೂ ಹೊಸವರ್ಷದ ಪ್ರಯುಕ್ತ 10 ದಿನಗಳ ‘ಅರಮನೆ ಫಲಪುಷ್ಪ ಪ್ರದರ್ಶನ’…

8 hours ago

ಎತ್ತಿನ ಗಾಡಿಗೆ ಸಾರಿಗೆ ಬಸ್‌ ಡಿಕ್ಕಿ : ಎತ್ತು ಸಾವು

ಹಲಗೂರು : ಎತ್ತಿನ ಗಾಡಿ ತೆರಳುತ್ತಿದ್ದ ವೇಳೆ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಎತ್ತು ಸ್ಥಳದಲ್ಲೇ ಮೃತಪಟ್ಟ ಘಟನೆ…

8 hours ago

ಮುತ್ತತ್ತಿ : ಕಾವೇರಿ ನದಿ ಸೆಳೆತಕ್ಕೆ ಸಿಲುಕಿ ಯುವಕ ಸಾವು

ಹಲಗೂರು : ಇಲ್ಲಿಗೆ ಸಮೀಪದ ಮುತ್ತತ್ತಿ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದ ವೇಳೆ ನೀರಿನ ಸೆಳೆತಕ್ಕೆ ಸಿಲುಕಿ ಯುವಕ ಮೃತಪಟ್ಟಿರುವ ಘಟನೆ…

8 hours ago

ಪೊಲೀಸ್‌ ಭದ್ರತೆಯಲ್ಲಿ ದೇಗುಲ ಪ್ರವೇಶಿಸಿದ ದಲಿತ ಮಹಿಳೆಯರು : ಶಾಂತಿ ಸಭೆಯಲ್ಲಿ ಪಂಚ ಬೇಡಿಕೆ

ಭಾರತೀನಗರ : ಇಲ್ಲಿಗೆ ಸಮೀಪದ ಕೆ.ಶೆಟ್ಟಹಳ್ಳಿ ಗ್ರಾಮದಲ್ಲಿ ಪೊಲೀಸರ ಭದ್ರತೆಯೊಂದಿಗೆ ಗ್ರಾಮದ ಪರಿಶಿಷ್ಟ ಜಾನಾಂಗದ ಮಹಿಳೆಯರು, ಪುರುಷರು ದೇವಾಲಯಗಳಿಗೆ ಪ್ರವೇಶಿಸಿದರು.…

8 hours ago

ಅಕ್ರಮ ವಿದ್ಯುತ್‌ ಸಂಪರ್ಕ: 31 ಪ್ರಕರಣ ದಾಖಲು, 2.17 ಲಕ್ಷ ರೂ. ದಂಡ

ಮೈಸೂರು : ಅಕ್ರಮವಾಗಿ ವಿದ್ಯುತ್‌ ಸಂಪರ್ಕ ಪಡೆದಿರುವ ಸಂಬಂಧ ಯಶಸ್ವಿ ಕಾರ್ಯಾಚರಣೆ ನಡೆಸಿದ ಚಾಮುಂಡೇಶ್ವರಿ ವಿದ್ಯುತ್‌ ಸರಬರಾಜು ನಿಗಮ ನಿಯಮಿತ(ಚಾವಿಸನಿನಿ)…

8 hours ago