ಮೈಸೂರು : ಕೈಗಾರಿಕೆ ಹಾಗೂ ಶಿಕ್ಷಣ ಕ್ಷೇತ್ರಗಳಲ್ಲಿ ಸಾಕಷ್ಟು ಮುನ್ನಡೆ ಸಾಧಿಸುತ್ತಿರುವ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಬಹುರಾಷ್ಟ್ರೀಯ ಕಂಪನಿಯಾದ ಐಎಸ್‍ಎಂಸಿ 23 ಸಾವಿರ ಕೋಟಿ ರೂಪಾಯಿ ಬಂಡವಾಳ ಹೂಡಿಕೆ ಮಾಡಲು ಮುಂದೆ ಬಂದಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಮುರುಗೇಶ್ ನಿರಾಣಿ ಪ್ರಕಟಿಸಿದ್ದಾರೆ.
ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಹಬ್ಬದ ಪ್ರಯುಕ್ತ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ಹಾಗೂ ಮೈಸೂರು ಜಿಲ್ಲಾ ಕೈಗಾರಿಕಾ ಕೇಂದ್ರ ಜಂಟಿಯಾಗಿ ಏರ್ಪಡಿಸಿದ್ದ ಕೈಗಾರಿಕಾ ದಸರಾ ಉದ್ಘಾಟಿಸಿ ಅವರು ಮಾತನಾಡಿದರು. ಐಎಸ್‍ಎಂಸಿ ಕಂಪನಿಯು ಸುಮಾರು 23 ಸಾವಿರ ಕೋಟಿ ರೂಪಾಯಿ ಹೂಡಿಕೆ ಮಾಡುತ್ತಿದ್ದು, ಸೆಮಿಕಂಡಕ್ಟರ್ ಪ್ಯಾಬ್ ಸ್ಥಾಪಿಸಲು ರಾಜ್ಯಸರ್ಕಾರೊಂದಿಗೆ ಎಂಒಯುಗೆ ಸಹಿ ಹಾಕಿದೆ. ಇದರಿಂದ ಈ ಭಾಗದಲ್ಲಿ ಸಾವಿರಾರು ಉದ್ಯೋಗಗಳು ಸೃಷ್ಟಿಯಾಗಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.
ಉತ್ತರ ಕರ್ನಾಟಕದಲ್ಲಿ ವಿಶೇಷವಾಗಿ ನಮ್ಮ ಶಿಕ್ಷಣ ಸಂಸ್ಥೆ ಸೇರಿದಂತೆ ಮತ್ತಿತರ ಕಡೆ ಕಡ್ಡಾಯವಾಗಿ ನಾಲ್ವಡಿ ಕೃಷ್ಣರಾಜ ಒಡೆಯರ್ ಮತ್ತು ವಿಶ್ವೇಶ್ವರಯ್ಯನವರ ಪ್ರತಿಮೆಗಳನ್ನ ಸ್ಥಾಪನೆ ಮಾಡಿ ಅವರ ಅದರ್ಶಗಳನ್ನು ಅನುಸರಿಸುತ್ತಿದ್ದೇವೆ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಹಾಗೂ ಸಹಕಾರ ಸಚಿವ ಸೋಮಶೇಖರ್, ಶಾಸಕರಾದ ಹರ್ಷವರ್ಧನ,
ಎಲ್.ನಾಗೇಂದ್ರ, ಮೈಸೂರು ಮಹಾನಗರ ಪಾಲಿಕೆ ಮೇಯರ್ ಶಿವಕುಮಾರ್, ಜಿಲ್ಲಾಧಿಕಾರಿ ಬಗಾದಿ ಗೌತಮ್ ಮತ್ತಿತರರು ಉಪಸ್ಥಿತರಿದ್ದರು.
ಅನಗತ್ಯವಾಗಿ ಮತ್ತು ಅಪ್ರಚೋದಿತವಾಗಿ ಇರಾನ್ ವಿರುದ್ಧ ಯುದ್ಧಕ್ಕಿಳಿದ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸ್ಥಿತಿ ಈಗ ಮಹಾಭಾರತದ ಅಭಿಮನ್ಯುವಿನ ಪರಿಸ್ಥಿತಿಯಂತಾಗಿದೆ.…
೨೦೨೬ರ ಐದು ರಾಜ್ಯಗಳ ವಿಧಾನಸಭೆ ಚುನಾವಣೆಯ ಅಖಾಡ ಈಗ ಸಿದ್ಧವಾಗಿದೆ. ಕೇಂದ್ರದಲ್ಲಿ ಆಡಳಿತ ನಡೆಸುತ್ತಿರುವ ಎನ್‌ಡಿಎ ಮೈತ್ರಿಕೂಟದ ಬಿಜೆಪಿ ಮತ್ತು…
ಅನಿಲ್ ಅಂತರಸಂತೆ ಹಳ್ಳಿ ಸೊಗಡಿನ ದೇಸಿ ಕಂಠಸಿರಿಯಲ್ಲಿ ಇವರ ಜಾನ ಪದ ಹಾಡುಗಳನ್ನು ಕೇಳುವುದೇ ಬಲು ಹಿತಕರ. ಮೂಲತಃ ಎಚ್.ಡಿ.ಕೋಟೆ…
ಇಂತಹ ಸಂದರ್ಭಗಳಲ್ಲಿ ಮೌನವಾಗಿರುವುದು ಅಪರಾಧದಲ್ಲಿ ಪಾಲುಗಾರರಾದಂತೆಯೇ ಸಂಧ್ಯಾರಾಣಿ, ಲೇಖಕಿ ಮತ್ತು ಚಿತ್ರ ಸಾಹಿತಿ ‘ರ’ ಚಿತ್ರದ ಹಾಡಿನ ಬಗ್ಗೆ ವಿರೋಧ,…
ಶೇಷಾದ್ರಿ ಗಂಜೂರು ಮಧ್ಯಪ್ರಾಚ್ಯದಿಂದ ಪ್ರತಿನಿತ್ಯ ವಿಸ್ತರಿಸುತ್ತಿರುವ ಉದ್ವಿಗ್ನತೆಯನ್ನು ಗಮನಿಸಿದರೆ, ಇಸ್ರೇಲಿನ ಆಕ್ರಮಣಕಾರಿ ಧೋರಣೆ, ಅಮೆರಿಕದ ಟ್ರಂಪ್ ದುರಾಡಳಿತದ ತರ್ಕರಹಿತ ನಡೆಗಳು…
ನವೀನ್ ಡಿಸೋಜ ಮಡಿಕೇರಿ: ವನ್ಯಜೀವಿ-ಮಾನವ ಸಂಘರ್ಷ ತಡೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಈ ಬಾರಿಯ ಬಜೆಟ್‌ನಲ್ಲಿ ಕರ್ನಾಟಕ ಮಾನವ -…