Mysore
29
few clouds

Social Media

ಶನಿವಾರ, 07 ಮಾರ್ಚ್ 2026
Light
Dark

ಹಿಂದೂತ್ವದ ಹೆಸರಿನಲ್ಲಿ ಸಮಾಜ ಒಡೆಯುವ ಕೆಲಸ : ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ

ಮೈಸೂರು: ನಗರ ಕಾಂಗ್ರೆಸ್ ಭವನದಲ್ಲಿ ವರುಣಾ ವಿಧಾನಸಭಾ ಕ್ಷೇತ್ರದ ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಗಳ ಸಮಿತಿ ಪದಾಧಿಕಾರಿಗಳ ಪದಗ್ರಹಣ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ
ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ ಅವರು ಪಕ್ಷ ಸಂಘಟನೆ ಮಾಡಬೇಕು. ಪಕ್ಷದಲ್ಲಿ ಜವಾಬ್ದಾರಿ ಹೊತ್ತಿರುವವರ ಪಾತ್ರ ಬಹಳ ಮುಖ್ಯವಾಗಿದೆ. ಕಾರ್ಯಕರ್ತರನ್ನು ಕಡೆಗಣಿಸದೆ ಎಲ್ಲರೊಂದಿಗೆ ಬೆರೆತು ಸಂಘಟಿಸಿದರೆ ಪಕ್ಷಕ್ಕೆ ಶಕ್ತಿ ಬರಲಿದೆ. ಬದಲಾದ ರಾಜಕೀಯ ಪರಿಸ್ಥಿತಿಯಲ್ಲಿ ಸಂಘಟನೆ ದೊಡ್ಡ ಸವಾಲು. ಬೇರೆ ಪಕ್ಷಗಳ ನಾಯಕರು ಮಾಡುವ ಅಪಪ್ರಚಾರಕ್ಕೆ ಪ್ರತ್ಯುತ್ತರ ಕೊಡಬೇಕು. ಪಂಚಾಯತ್ ರಾಜ್ ಕನಸು ಕಾಂಗ್ರೆಸ್ ಕನಸಾಗಿತ್ತು. ಸ್ಥಳೀಯ ಜನರಿಗೆ ಅಧಿಕಾರ ಸಿಗುವಂತೆ ಮಾಡಲು ಅಧಿಕಾರ ವಿಕೇಂದ್ರೀಕರಣ ವ್ಯವಸ್ಥೆ ತರಲಾಯಿತು.‌ ಮೂರು ಹಂತದ ಪಂಚಾಯತ್ ರಾಜ್ ವ್ಯವಸ್ಥೆ ಜಾರಿಗೆ ತಂದಿದ್ದರಿಂದ ಲಕ್ಷಾಂತರ ನಾಯಕರು ಹುಟ್ಟಲು ಕಾರಣವಾಗಿದೆ.
ಪಕ್ಷದ ಸಂಘಟನೆ ಹೆಚ್ಚು ಮಾಡಬೇಕು. ಚುನಾವಣೆ ದಿನಗಳು ಹತ್ತಿರ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಬಿಜೆಪಿ ಸರ್ಕಾರದ ವೈಫಲ್ಯಗಳನ್ನು ಮನೆ ಮನಗೆ ತಲುಪಿಸಬೇಕು. ಶ್ರೀಮಂತರು,ಮೇಲ್ವರ್ಗದವರ ಪರ ಇದ್ದಾರೆ. ಹಿಂದೂತ್ವದ ಹೆಸರಿನಲ್ಲಿ ರಾಜಕೀಯ ಮಾಡಿ ಸಮಾಜದಲ್ಲಿ ಅಶಾಂತಿ ಮೂಡಿಸುವ ಕೆಲಸ ಮಾಡುತ್ತಿದ್ದಾರೆ ಎಂದರು.
ಅಧ್ಯಕ್ಷರಾಗಿ ತೇಜು ಅವರನ್ನು ನೇಮಕ ಮಾಡಲಾಯಿತು.

ಅಧ್ಯಕ್ಷತೆಯನ್ನು ಜಿಲ್ಲಾ ಅಧ್ಯಕ್ಷ ಡಾ.ಬಿ.ಜೆ.ವಿಜಯಕುಮಾರ್ ವಹಿಸಿದ್ದರು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!