ಮೈಸೂರು: ನಗರ ಕಾಂಗ್ರೆಸ್ ಭವನದಲ್ಲಿ ವರುಣಾ ವಿಧಾನಸಭಾ ಕ್ಷೇತ್ರದ ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಗಳ ಸಮಿತಿ ಪದಾಧಿಕಾರಿಗಳ ಪದಗ್ರಹಣ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ
ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ ಅವರು ಪಕ್ಷ ಸಂಘಟನೆ ಮಾಡಬೇಕು. ಪಕ್ಷದಲ್ಲಿ ಜವಾಬ್ದಾರಿ ಹೊತ್ತಿರುವವರ ಪಾತ್ರ ಬಹಳ ಮುಖ್ಯವಾಗಿದೆ. ಕಾರ್ಯಕರ್ತರನ್ನು ಕಡೆಗಣಿಸದೆ ಎಲ್ಲರೊಂದಿಗೆ ಬೆರೆತು ಸಂಘಟಿಸಿದರೆ ಪಕ್ಷಕ್ಕೆ ಶಕ್ತಿ ಬರಲಿದೆ. ಬದಲಾದ ರಾಜಕೀಯ ಪರಿಸ್ಥಿತಿಯಲ್ಲಿ ಸಂಘಟನೆ ದೊಡ್ಡ ಸವಾಲು. ಬೇರೆ ಪಕ್ಷಗಳ ನಾಯಕರು ಮಾಡುವ ಅಪಪ್ರಚಾರಕ್ಕೆ ಪ್ರತ್ಯುತ್ತರ ಕೊಡಬೇಕು. ಪಂಚಾಯತ್ ರಾಜ್ ಕನಸು ಕಾಂಗ್ರೆಸ್ ಕನಸಾಗಿತ್ತು. ಸ್ಥಳೀಯ ಜನರಿಗೆ ಅಧಿಕಾರ ಸಿಗುವಂತೆ ಮಾಡಲು ಅಧಿಕಾರ ವಿಕೇಂದ್ರೀಕರಣ ವ್ಯವಸ್ಥೆ ತರಲಾಯಿತು. ಮೂರು ಹಂತದ ಪಂಚಾಯತ್ ರಾಜ್ ವ್ಯವಸ್ಥೆ ಜಾರಿಗೆ ತಂದಿದ್ದರಿಂದ ಲಕ್ಷಾಂತರ ನಾಯಕರು ಹುಟ್ಟಲು ಕಾರಣವಾಗಿದೆ.
ಪಕ್ಷದ ಸಂಘಟನೆ ಹೆಚ್ಚು ಮಾಡಬೇಕು. ಚುನಾವಣೆ ದಿನಗಳು ಹತ್ತಿರ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಬಿಜೆಪಿ ಸರ್ಕಾರದ ವೈಫಲ್ಯಗಳನ್ನು ಮನೆ ಮನಗೆ ತಲುಪಿಸಬೇಕು. ಶ್ರೀಮಂತರು,ಮೇಲ್ವರ್ಗದವರ ಪರ ಇದ್ದಾರೆ. ಹಿಂದೂತ್ವದ ಹೆಸರಿನಲ್ಲಿ ರಾಜಕೀಯ ಮಾಡಿ ಸಮಾಜದಲ್ಲಿ ಅಶಾಂತಿ ಮೂಡಿಸುವ ಕೆಲಸ ಮಾಡುತ್ತಿದ್ದಾರೆ ಎಂದರು.
ಅಧ್ಯಕ್ಷರಾಗಿ ತೇಜು ಅವರನ್ನು ನೇಮಕ ಮಾಡಲಾಯಿತು.
ಅಧ್ಯಕ್ಷತೆಯನ್ನು ಜಿಲ್ಲಾ ಅಧ್ಯಕ್ಷ ಡಾ.ಬಿ.ಜೆ.ವಿಜಯಕುಮಾರ್ ವಹಿಸಿದ್ದರು.
* ಪ್ರಧಾನಿ ಮೋದಿ ಆರಂಭದ ವರ್ಷಗಳಲ್ಲಿ ಇಸ್ರೇಲ್ -ಇರಾನ್ ಜೊತೆಗೆ ಉತ್ತಮ ಸಂಬಂಧವನ್ನೇ ಮುಂದುವರಿಸಿದ್ದರು * ಈಗ ಧಿಡೀರ್‌ನೇ ಯೂ…
ಮೈಸೂರು ವಿಶ್ವವಿದ್ಯಾನಿಲಯದ ಪ್ರಸಾರಾಂಗದಿಂದ ಮರುಮುದ್ರಣ; ಓದುಗರಿಗೆ ಲಭ್ಯ ಮೈಸೂರು: ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರಾದ ಕುವೆಂಪು ಮತ್ತು ಮಾಸ್ತಿ ವೆಂಕಟೇಶ್ ಅಯ್ಯಂಗಾರ್…
ಗಿರೀಶ್ ಹುಣಸೂರು ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದಿಂದ ಹಲವು ಸಲಹೆ ಮೈಸೂರು: ಬೇಸಿಗೆಯ ಈ ಋತುಮಾನದಲ್ಲಿ ಹೆಚ್ಚುತ್ತಿರುವ ತೀವ್ರ ತಾಪಮಾನ,…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಮಲೆ ಮಹದೇಶ್ವರ ಬೆಟ್ಟದ ಶ್ರೀ…
ಬೆಂಗಳೂರು: ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿ ಹಾಗೂ ಅದಕ್ಕೆ ಪೂರಕ ವ್ಯವಸ್ಥೆಯನ್ನು ಸೃಷ್ಟಿಸುವ ದಿಸೆಯಲ್ಲಿ ಕೇಂದ್ರದ ಬೃಹತ್ ಕೈಗಾರಿಕೆ…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ1 ಆರೋಪಿ ಪವಿತ್ರಾ ಗೌಡ ಅವರಿಗೆ ಈಗ ಜೈಲಿನ ಊಟವೇ ಗತಿಯಾಗಿದೆ. ಈ…