ಮೈಸೂರು: ಕೇಂದ್ರ ಬಜೆಟ್‌ನಲ್ಲಿ ರೈಲ್ವೆ ಇಲಾಖೆಗೆ ಹೆಚ್ಚಿನ ಅನುದಾನ ಒದಗಿಸಿದ್ದರೂ ಜೀವನದ ಅಂಚಿನಲ್ಲಿರುವ ‘ಹಿರಿಯ ನಾಗರಿಕರಿಗೆ ರೈಲ್ವೆ ಪ್ರಯಾಣದ ಟಿಕೆಟ್‌ನಲ್ಲಿ ಹಿಂದೆ ಇದ್ದ ರಿಯಾಯಿತಿಯನ್ನು ಘೋಷಿಸಿಲ್ಲ. ಹಿರಿಯ ನಾಗರಿಕರಿಗೆ, ರೈಲ್ವೆ ಟಿಕೆಟ್ ರಿಯಾಯಿತಿ ಮುಂದುವರಿಸಬೇಕೆಂದು ಕರ್ನಾಟಕ ರಾಜ್ಯ ಹಿರಿಯ ನಾಗರಿಕರ ಸಂಘದ ಉಪಾಧ್ಯಕ್ಷ ಬಿ.ಆರ್.ಉಮಾಕಾಂತ್ ಮನವಿ ಮಾಡಿದ್ದಾರೆ.
ಬಹಳ ವರ್ಷಗಳಿಂದಲೂ ಹಿರಿಯ ನಾಗರಿಕರಿಗೆ ರೈಲ್ವೆ ಪ್ರಯಾಣದಲ್ಲಿ ರಿಯಾಯಿತಿ ಇತ್ತು, ಕರೊನಾ ಸಂದರ್ಭದಲ್ಲಿ ರಿಯಾಯಿತಿ ಸ್ಥಗಿತಗೊಳಿಸಲಾಗಿತ್ತು. ಈಗ ರೈಲುಗಳ ಓಡಾಟ, ಜನಸಂದಣಿ ಎಲ್ಲಾ ಮೊದಲಿನಂತೆೆಯೇ ಇದೆ, ಆದರೂ ಹಿಂದೆ ಇದ್ದ ಪ್ರಮುಖವಾದ ರೈಲ್ವೆ ಟಿಕೆಟ್‌ನಲ್ಲಿ ರಿಯಾಯಿತಿಯ ಮೂಲಭೂತ ಹಕ್ಕನ್ನು ಕೇಂದ್ರ ಸರ್ಕಾರ ಕಿತ್ತುಕೊಂಡಿದೆ. ಇನ್ನಾದರೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೇಂದ್ರ ಸರ್ಕಾರಕ್ಕೆ ಹಿರಿಯ ನಾಗರಿಕರಿಗೆ ರೈಲ್ವೆ ಟಿಕೆಟ್ ರಿಯಾಯಿತಿಯನ್ನು ಪುನಾ ಘೊಷಿಸಬೇಕೆಂದು ಮೈಸೂರು ಜಿಲ್ಲಾ ಘಟಕದ ಹಿರಿಯ ನಾಗರಿಕರ ಸಂಘ ಒತ್ತಾಯಿಸಿದೆ.
ಬೆಂಗಳೂರು: ರಾಜ್ಯದಲ್ಲಿ ನುಸುಳುಕೋರರು, ಬಾಂಗ್ಲಾದೇಶದವರು, ರೋಹಿಂಗ್ಯಾಗಳು ಯಾರು ಅಂತ ತನಿಖೆ ಮಾಡಿ, ಬಳಿಕ ಪುನರ್ ವಸತಿ ಕಲ್ಪಿಸಬೇಕು ಎಂದು ಶಾಸಕ…
ಸ್ವಿಟ್ಜರ್ಲೆಂಡ್: ಹೊಸ ವರ್ಷಾಚರಣೆ ವೇಳೆ ಸ್ವಿಟ್ಜರ್ಲೆಂಡ್‌ನಲ್ಲಿ ಸಂಭವಿಸಿದ ಭೀಕರ ಸ್ಫೋಟದಲ್ಲಿ 40 ಮಂದಿ ಸಾವನ್ನಪ್ಪಿದ್ದು, 100ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.…
ಬೆಂಗಳೂರು: ಹೊಸ ವರ್ಷದ ಹಿನ್ನೆಲೆಯಲ್ಲಿ ಒಂದೇ ದಿನ 8.93 ಲಕ್ಷ ಜನರು ನಮ್ಮ ಮೆಟ್ರೋದಲ್ಲಿ ಪ್ರಯಾಣಿಸಿದ್ದು, 3.08 ಕೋಟಿ ರೂ…
ಬೆಂಗಳೂರು: ಹೊಸ ವರ್ಷಕ್ಕೆ ಕಾಲಿಡುತ್ತಿದ್ದಂತೆ ರಾಜ್ಯ ಸರ್ಕಾರ ಸಾರಿಗೆ ನೌಕರರಿಗೆ ಬಿಗ್ ಶಾಕ್ ನೀಡಿದೆ. 2026ರ ಜನವರಿ.1ರಿಂದ ಮುಂದಿನ ಆರು…
ಬೆಂಗಳೂರು: ಹೈಕಮಾಂಡ್ ತೀರ್ಮಾನಿಸಿದರೆ ರಾಜಕೀಯ ಪದೋನ್ನತಿ ಆಗುತ್ತದೆ. ಎಲ್ಲರ ರೀತಿಯಲ್ಲಿ ನನಗೂ ಆಕಾಂಕ್ಷೆ ಇದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್…
ಬೆಂಗಳೂರು: ಕೋಗಿಲು ಲೇಔಟ್‌ನಲ್ಲಿ ಅಕ್ರಮ ಶೆಡ್ ತೆರವಿನ ಹಿನ್ನೆಲೆಯಲ್ಲಿ ಮನೆ ಕೊಡಲು ರಾಜ್ಯ ಸರ್ಕಾರ ಮುಂದಾಗಿದ್ದು, ನಿರಾಶ್ರಿತರಿಗೆ ನಾಳೆಯೇ ಜಿಬಿಎ,…