ಮೈಸೂರು: ಹಿಮಾಲಯ ಕಾಮೋಡಿಟೀಸ್, ಗುಡ್ವಿಲ್ ವೆಲ್ತ್ ಮ್ಯಾನೇಜ್ಮೆಂಟ್, ಗುಡ್ವಿಲ್ ಕಾಂ ಟ್ರೇಡ್ಸ್ ಎಂಬ ಹೆಸರಿನ ಕಂಪೆನಿಗಳ ಮೂಲಕ ಷೇರು ಮಾರುಕಟ್ಟೆಯಲ್ಲಿ ಹಣವನ್ನು ಹೂಡಿಕೆ ಮಾಡಿ ಮೋಸ ಹೋಗಿರುವವರು ಸೂಕ್ತ ದಾಖಲಾತಿಗಳೊಂದಿಗೆ ನಗರದ ಸೆನ್ ಕ್ರೈಂ ಪೊಲೀಸರನ್ನು ಸಂಪರ್ಕಿಸಲು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ದಟ್ಟಗಳ್ಳಿಯ ಸೋಮನಾಥನಗರದ ವಿಶ್ವಮಾನವ ಜೋಡಿರಸ್ತೆಯ ಆದಿತ್ಯ ಸರ್ಕಲ್ ಬಳಿ ಇರುವ ಜಿ.ಎನ್.ಕೃಷ್ಣಮೂರ್ತಿ ಹಾಗೂ ಆತನ ಪತ್ನಿ ಡಯಾನ ಎಂಬವರು ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡಿದರೆ ಹೆಚ್ಚಿನ ಲಾಭಾಂಶವನ್ನು ನೀಡುವುದಾಗಿ ತಿಳಿಸಿ ೨೦೧೪ರಿಂದ ೨೦೨೧ರವರೆಗೆ ಜನರಿಂದ ಒಟ್ಟು ೨,೧೪,೮೪,೫೦೦ ರೂ. ಹೂಡಿಕೆ ಮಾಡಿಸಿ, ಲಾಂಭಾಂಶವನ್ನು ನೀಡದೆ, ಹೂಡಿಕೆ ಹಣವನ್ನೂ ವಾಪಸ್ ನೀಡದೆ ಮೋಸ ಮಾಡಿರುವ ಬಗ್ಗೆ ಮೈಸೂರು ನಗರ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಆರೋಪಿ ಜಿ.ಎನ್.ಕೃಷ್ಣಮೂರ್ತಿ ಅವರನ್ನು ಅ.೧೩ರಂದು ಬಂಧಿಸಿ ವಿಚಾರಣೆ ಮಾಡಲಾಗಿ ಈತ ಇತರೆ ಆರೋಪಿಗಳಾದ ಲಕ್ಷ್ಮೀಶ ಹಾಗೂ ರಘುಕುಮಾರ್ ಎಂಬವರ ಜತೆ ಸೇರಿಕೊಂಡು ಹಿಮಾಲಯ ಕಮೋಡಿಟೀಸ್, ಗುಡ್ವಿಲ್ ವೆಲ್ತ್ ಮ್ಯಾನೇಜ್ಮೆಂಟ್, ಗುಡ್ವಿಲ್ ಕಾಂ ಟ್ರೇಡ್ಸ್ ಎಂಬ ಕಂಪೆನಿಗಳನ್ನು ವಿವಿಧ ಸ್ಥಳಗಳಲ್ಲಿ ತೆರೆದು ಈ ಕಂಪೆನಿಗಳ ಮೂಲಕ ಸಾರ್ವಜನಿಕರಿಂದ ಕೋಟ್ಯಂತರ ರೂ.ಗಳನ್ನು ಹೂಡಿಕೆ ಮಾಡಿಸಿಕೊಂಡು ಮೋಸ ಮಾಡಿರುವುದು ತಿಳಿದು ಬಂದಿರುತ್ತದೆ. ಆದ್ದರಿಂದ ಮೇಲ್ಕಂಡ ವ್ಯಕ್ತಿಗಳು ಮತ್ತು ಕಂಪೆನಿಗಳ ಮೇಲೆ ಹಣ ಹೂಡಿಕೆ ಮಾಡಿ ಮೋಸ ಹೋಗಿರುವ ಸಾರ್ವಜನಿಕರು ಅವಶ್ಯ ದಾಖಲಾತಿಗಳೊಂದಿಗೆ ಮೈಸೂರು ನಗರ ಸೆನ್ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ರವರನ್ನು ಸಂಪರ್ಕಿಸಲು ತಿಳಿಸಿದೆ.
ಬೆಂಗಳೂರು: ಜೆಡಿಎಸ್ ಪಕ್ಷ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆಗೆ ತಯಾರಿ ನಡೆಸುತ್ತಿದ್ದು, ಜಿಬಿಎಗೆ ಪಕ್ಷದ ಅಧ್ಯಕ್ಷರನ್ನು ನೇಮಕ ಮಾಡಿ ಆದೇಶ…
ಗುಂಡ್ಲುಪೇಟೆ: ಪಂಚ ಗ್ಯಾರಂಟಿಗಳ ಘೋಷಣೆಯೊಂದಿಗೆ ಅಧಿಕಾರಕ್ಕೇರಿದ ಕಾಂಗ್ರೆಸ್ ಸರ್ಕಾರದಿಂದ ರಾಜ್ಯದ ಅಭಿವೃದ್ಧಿ ಸಂಪೂರ್ಣವಾಗಿ ಕುಸಿದಿದೆ. ಈ ನಡುವೆ ಗ್ಯಾರಂಟಿಗಳಿಂದ ಸರ್ಕಾರಕ್ಕೆ…
ಇಸ್ರೇಲ್: ಭಾರತ ಮತ್ತು ಇಸ್ರೇಲ್ ನಡುವಿನ ಕಾರ್ಯತಂತ್ರದ ಸಂಬಂಧಗಳನ್ನು ಬಲಪಡಿಸುವಲ್ಲಿ ಅಸಾಧಾರಣ ಕೊಡುಗೆಗಾಗಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬುಧವಾರ…
ಉದಯಪುರ: ಉದಯಪುರದ ಅರಮನೆಯಲ್ಲಿ ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣ ಅವರು ಇಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಇಂದು ಬೆಳಿಗ್ಗೆ…
ಮೈಸೂರು: ಪಟ್ಟಣದ ಸಿಲ್ಕ್ ಫಿಲೇಚರ್ ಆವರಣದಲ್ಲಿ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗಿರುವ ಸರ್ಕಾರದ ನಿರ್ಧಾರಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗಿದೆ. ಈ ಬಗ್ಗೆ…
ಬಜೆಟ್ ಪೂರ್ವ ಸಭೆಯಲ್ಲಿ ಪ್ರಸ್ತಾಪಗೊಂಡ ಹಸಿರು ಗೋಡೆ ಯೋಜನೆ ರಾಜ್ಯದ ಪರಿಸರ ರಕ್ಷಣೆಗೆ ಆಪದ್ಬಾಂಧವನಂತಿದೆ. ಉತ್ತರ ಕರ್ನಾಟಕದಲ್ಲಿ ಮರುಭೂಮೀಕರಣ ತಡೆಗಟ್ಟಲು…