ಮಂಡ್ಯ; ಡಾ.ಜೀಶಂಪ ಸಾಹಿತ್ಯ ವೇದಿಕೆ, ರಾಜರ್ಷಿ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಯುವಸೇನೆ, ಕನ್ನಂಬಾಡಿ ಹಾಗೂ ಕಾವೇರಿ ಪ್ರಭ ದಿನಪತ್ರಿಕೆಯ ಸಹಯೋಗದಲ್ಲಿ ಚಂದ್ರಮಾನ ಯುಗಾದಿ ಸಂಭ್ರಮದ ಅಂಗವಾಗಿ ಕನ್ನಡ ಅಕ್ಷರ ಜಾತ್ರೆ ಸಾಹಿತ್ಯ ಸಮ್ಮೇಳನವನ್ನು ಮಾ.19 ರಂದು ನಗರದ ಕರ್ನಾಟಕ ಸಂಘದಲ್ಲಿ ಆಯೋಜಿಸಲಾಗಿದೆ. ಆಸಕ್ತರಿಂದ ಕವಿಗೋಷ್ಠಿಗೆ ಕವನವನ್ನು ಆಹ್ವಾನಿಸಿದೆ.
ಆಸಕ್ತರು 20 ಸಾಲಿನ ಎರಡು ಕವನಗಳು, ಕಿರು ಪರಿಚಯ, ಫೋಟೋ, ಮೊಬೈಲ್ ಸಂಖ್ಯೆ ಹಾಗೂ ವಿಳಾಸವನ್ನು ಫೆ.15ರೊಳಗೆ ಕಳುಹಿಸಬೇಕು. ವ್ಯಾಟ್ಸಾಪ್‌ನಲ್ಲಿ ಮೊದಲು ನೋಂದಣಿ ಮಾಡಿಕೊಂಡು, ನಂತರ ಅಂಚೆ ಮೂಲಕ ಕಳುಹಿಸಬೇಕು.
ಕವನಗಳು ಕನ್ನಡ ನಾಡು-ನುಡಿ, ಜಲ-ಸಂಪನ್ಮೂಲ, ಪರಿಸರ, ತಾಯಿ, ಚಂದ್ರಮಾನ ಯುಗಾದಿ ವಿಷಯವನ್ನು ಒಳಗೊಂಡಿರಬೇಕು. ಆಯ್ಕೆಯಾದ ಕವಿತೆಗಳನ್ನು ಪುಸ್ತಕ ರೂಪದಲ್ಲಿ ಹೊರತರಲಾಗುವುದು. 50 ಮಂದಿ ಕವಿಗಳಿಗೆ ಕವಿಗೋಷ್ಠಿಯಲ್ಲಿ ಅವಕಾಶ ಕಲ್ಪಿಸಲಾಗುವುದು. ಹತ್ತು ಮಂದಿ ಉತ್ತಮ ಕವನಗಳಿಗೆ ರಾಜ್ಯ ಮಟ್ಟದ ‘ಕಾವ್ಯಶ್ರೀ’, ಇಪ್ಪತ್ತು ಮಂದಿ ಸಾಧಕರಿಗೆ ‘ಕನ್ನಡರತ್ನ’, ಹತ್ತು ಮಂದಿ ಸಾಧಕರಿಗೆ ‘ಯುಗಾದಿ ಪುರಸ್ಕಾರ’ ಹಾಗೂ ಹತ್ತು ಮಂದಿಗೆ ಜೀವಮಾನದಲ್ಲಿ ಸಾಧನೆ ಮಾಡಿದ ಹತ್ತು ಮಂದಿಗೆ ಕರ್ನಾಟಕ ಸೇವಾ ರತ್ನರಾಜ್ಯ ಮಟ್ಟದ ಪ್ರಶಸ್ತಿ ನೀಡಲಾಗುವುದು.
ಕವಿಗಳು, ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದವರು ವಿವಿಧ ಪ್ರಶಸ್ತಿ ಹಾಗೂ ಕವಿಗೋಷ್ಠಿಗೆ ಫೆ.15ರೊಳಗೆ ಹೆಸರು ನೋಂದಾಯಿಸಿಕೊಳ್ಳಬಹುದು. ವ್ಯಾಟ್ಸಾಪ್ ನಂ. 9448424380 ಗೆ ಕಳುಹಿಸಬೇಕಾಗಿ ಕೃಷ್ಣ ಸ್ವರ್ಣಸಂದ್ರ ಕೋರಿದ್ದಾರೆ.
ಮೈಸೂರು: ಈ ಬಾರಿಯ ಮೈಸೂರು ದಸರಾ ಮೆರವಣಿಗೆಗೆ ಸೇನೆ ಹಾಗೂ ವಾಯುಸೇನೆಯನ್ನು ಆಹ್ವಾನಿಸಲು ನಿರ್ಧರಿಸಲಾಗಿದೆ ಎಂದು ಸಿಎಂ ಡಿ.ಕೆ. ಶಿವಕುಮಾರ್…
ಹುಣಸೂರು: ತಾಲೂಕಿನ ನಂಜಾಪುರ ಗ್ರಾಮದಲ್ಲಿ ಖಾಸಗಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬೇಸತ್ತ ಯುವಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಾಲೂಕಿನ ನಂಜಾಪುರದಲ್ಲಿ…
ಮೈಸೂರು: ರೈತರಿಗೆ ಬರ ಪರಿಹಾರ ನೀಡುವ ವಿಚಾರವಾಗಿ ಮಾತನಾಡಿರುವ ಡಿಸಿಎಂ ಪರಮೇಶ್ವರ್, ರಾಜ್ಯದ 101 ತಾಲೂಕುಗಳನ್ನು ಬರ ತಾಲೂಕುಗಳೆಂದು ಘೋಷಣೆ…
ರಾಜ್ಯದ ೧೭೫ ತಾಲ್ಲೂಕುಗಳು ಭೀಕರ ಬರಕ್ಕೆ ತತ್ತರಿಸಿ, ಶೇಕಡಾ ೮೦ ಕ್ಕೂ ಹೆಚ್ಚು ಬೆಳೆ ನಷ್ಟದಿಂದ ಅನ್ನದಾತರು ಸಂಪೂರ್ಣ ಕಂಗಾಲಾಗಿದ್ದರೂ…
೧೯೮೬ರ ಆಗಸ್ಟ್ ೨೯ರಂದು (ಜಗದ್ಗುರು ವೀರಸಿಂಹಾಸನ ಮಹಾಸಂಸ್ಥಾನ ಮಠದ ೨೩ ನೇ ಮಠಾಧಿಪತಿ) ಶಿವರಾತ್ರಿ ರಾಜೇಂದ್ರ ಶ್ರೀಗಳ ಅಮೃತ ಮಹೋತ್ಸವದ…
ರಾಜ್ಯದಲ್ಲಿ ಸೈಬರ್ ವಂಚನೆ ಪ್ರಕರಣಗಳು ಹೆಚ್ಚುತ್ತಿದ್ದು, ಕಳೆದ ಏಳು ತಿಂಗಳ ಅವಧಿಯಲ್ಲಿ ಸುಮಾರು ರೂ.೬೦೦ ಕೋಟಿಯಷ್ಟು ಹಣ ಸೈಬರ್ ವಂಚಕರ…