Mysore
22
overcast clouds

Social Media

ಭಾನುವಾರ, 02 ಆಗಸ್ಟ್ 2026
Light
Dark

ಪುನೀತ್ ರಾಜ್ ಕುಮಾರ್ ರವರಿಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡಿರುವುದು ಸಂತಸದ ವಿಚಾರ: ಸಮಾಜ ಸೇವಕ ನಿಶಾಂತ್

ಹನೂರು: ಕ್ಷೇತ್ರ ವ್ಯಾಪ್ತಿಯ ವರನಟ ಡಾ. ರಾಜ್ ಕುಮಾರ್ ರವರ ಸುಪುತ್ರ ನಟ ಪುನೀತ್ ರಾಜ್ ಕುಮಾರ್ ರವರಿಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡಿರುವುದು ಸಂತಸದ ವಿಚಾರ ಎಂದು ಸಮಾಜ ಸೇವಕ ನಿಶಾಂತ್ ತಿಳಿಸಿದರು.

ಪಟ್ಟಣದ ನಿಶಾಂತ್ ಮಹಾಮನೆಯಿಂದ ಸತ್ತೇಗಾಲ ಹ್ಯಾಂಡ್ ಪೋಸ್ಟ್ ವರೆಗೆ ಬೈಕ್ ರ್ಯಾಲಿಗೆ ಚಾಲನೆ ನೀಡಿ ಅವರು ಮಾತನಾಡಿದರು.

ನೆಲ ಜಲ ಭಾಷೆ ಉಳಿಸಲು ಪ್ರತಿಯೊಬ್ಬ ಕನ್ನಡಿಗರು ಶ್ರಮಿಸಬೇಕು. ಕರ್ನಾಟಕದಲ್ಲಿ ಕನ್ನಡಿಗನೇ ಸಾರ್ವಭೌಮ,ಈ ಕನ್ನಡ ನಾಡು ಶ್ರೀಗಂಧದ ಬೀಡು ನಮ್ಮ ಕರ್ನಾಟಕದ ವಿಚಾರಧಾರೆಗಳನ್ನು ಕ್ಷೇತ್ರದ ಪ್ರತಿಯೊಬ್ಬರಿಗೂ ತಿಳಿಸುವ ನಿಟ್ಟಿನಲ್ಲಿ ಇಂದು ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಕನ್ನಡಿಗರು ಕೇವಲ ರಾಜ್ಯೋತ್ಸವಕ್ಕೆ ಸೀಮಿತವಾಗದೆ ವರ್ಷವೆಲ್ಲಾ ನಿತ್ಯೋತ್ಸವ ಮಾಡಬೇಕು ಎಂದು ತಿಳಿಸಿದರು.

ಈ ವೇಳೆ ನೂರಾರು ನಿಶಾಂತ್ ಅಭಿಮಾನಿಗಳು ಬೈಕ್ ರ್ಯಾಲಿಯಲ್ಲಿ ಪಾಲ್ಗೊಂಡಿದ್ದರು.

ಈ ವೇಳೆ ಜಿ ಕೆ ಹೊಸೂರು ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಬಸವರಾಜು, ಬೈಲೂರು ಗ್ರಾಪಂ ಉಪಾಧ್ಯಕ್ಷ ಸದಾನಂದ ಮೂರ್ತಿ, ಮುಖಂಡರುಗಳಾದ ಕಿರಣ್, ಬಾಬು,ಸ್ವಾಮಿ ಯುವ ಮುಖಂಡರುಗಳಾದ ಚೇತನ್, ತೇಜು, ಗೌತಮ್ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!