ಹನೂರು: ರಾಜ್ಯೋತ್ಸವದ ಸಂದರ್ಭದಲ್ಲಿ ನಮ್ಮವರೇ ಆದ ಜೀರಿಗೆ ಗದ್ದೆ ಗ್ರಾಮದ ಮಾದಮ್ಮ ಅವರಿಗೆ ರಾಜ್ಯೋತ್ಸವ ಪ್ರಶಸ್ತಿ ಹಾಗೂ ಸಿಂಗನಲ್ಲೂರು ಗ್ರಾಮದ ಮೊಮ್ಮಗ ಪ್ರಖ್ಯಾತ ಚಿತ್ರನಟ, ಮಾನವತವಾದಿ ಪುನೀತ್ ರಾಜಕುಮಾರ್ ಅವರಿಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ನೀಡಿರುವುದು ಹೆಮ್ಮೆಯ ಸಂಗತಿಯಾಗಿದೆ ಎಂದು ಶಾಸಕ ಆರ್ ನರೇಂದ್ರ ತಿಳಿಸಿದರು.
ಪಟ್ಟಣದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ತಾಲೂಕು ಆಡಳಿತ ಹಾಗೂ ರಾಷ್ಟ್ರೀಯ ಹಬ್ಬಗಳ ಆಚರಣ ಸಮಿತಿಯು ಆಯೋಜಿಸಲಾಗಿದ್ದ 67ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಈ ಬಾರಿ ವಿಶಿಷ್ಟವಾಗಿ ಓರ್ವ ಪೌರಕಾರ್ಮಿಕ ಮಹಿಳೆಯನ್ನು ಗುರುತಿಸಿ ಸರ್ಕಾರ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಿರುವುದು ಕೂಡ ಅಭಿನಂದನೆಯ ವಿಚಾರ. ಕನ್ನಡ ಭಾಷೆಗೆ ತನ್ನದೇ ಆದ ಇತಿಹಾಸವಿದೆ. ಶಾಸ್ತ್ರೀಯ ಸ್ಥಾನಮಾನವೂ ಕೂಡ ಸಿಕ್ಕಿದೆ. ಶಾಸ್ತ್ರೀಯ ಸ್ಥಾನಮಾನವನ್ನು ನೀಡಿರುವ ಭಾಷೆಗೆ ಕೇಂದ್ರ ಸರ್ಕಾರ ಅನುದಾನವನ್ನು ನೀಡಬೇಕಾಗಿದೆ.
ಅನುಷ್ಠಾನವಾಗಿರುವುದು ಬಿಟ್ಟರೆ ಭಾಷೆ ಅಭಿವೃದ್ಧಿಗೆ ಯಾವುದೇ ಕ್ರಮ ಕೈಗೊಂಡಿಲ್ಲ. ಕೇಂದ್ರ ಸರ್ಕಾರ ಕನ್ನಡದಲ್ಲಿ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಬೇಕು. ಆದರೆ ಕರ್ನಾಟಕ ವಿಚಾರದಲ್ಲಿ ಭಾಷಾ ತಾರತಮ್ಯವನ್ನು ಮಾಡಲಾಗುತ್ತಿದೆ. ಇದರಿಂದ ಕರ್ನಾಟಕದ ಉದ್ಯೋಗಿಗಳಿಗೆ ಅನ್ಯಾಯವಾಗುತ್ತಿದೆ. ಇತರೆ ರಾಜ್ಯಗಳಿಗೆ ಹೋಲಿಸಿದರೆ ಕನ್ನಡಿಗರೇ ಕನ್ನಡವನ್ನು ನಿರ್ಲಕ್ಷಿಸುತ್ತಿದ್ದಾರೆ. ಆಗಾಗಬಾರದು ಶಾಲೆಗಳಲ್ಲಿ ಇಂಗ್ಲೀಷ್ ವ್ಯಾಮೋಹ ಹೆಚ್ಚುತ್ತಿದೆ. ಬೆಂಗಳೂರು ಕೆಲವಡೆ ಶಾಲೆಗಳಲ್ಲಿ ಕನ್ನಡ ಮಾತನಾಡಿದರೆ ದಂಡ ವಿಧಿಸುತ್ತಿದ್ದಾರೆ ಇದು ವಿಷಾನಿಯ ಎಂದು ನುಡಿದ ಅವರು ತಾಲೂಕಿನ ಕಾಡಂಚಿನ ಗ್ರಾಮಗಳಾದ ಗೋಪಿನಾಥಮ್, ತೋಮಿಯರ್ ಪಾಳ್ಯ ಇನ್ನಿತರಡೆ ತಮಿಳು ಭಾಷಿಕರ ಪ್ರಭಾವವಿರುವ ಗಡಿ ಗ್ರಾಮಗಳಲ್ಲೂ ಕೂಡ ವಿದ್ಯಾರ್ಥಿಗಳು ಕನ್ನಡದಲ್ಲಿ 125ಕ್ಕೆ 125 ಅಂಕಗಳನ್ನು ಗಳಿಸಿರುವುದು ಮೆಚ್ಚುಗೆಯ ಸಂಗತಿ ಎಂದರು.
ಮುಖ್ಯ ಭಾಷಣಕಾರರಾಗಿ ಆಗಮಿಸಿದ ಗೋಪಿನಾಥಂ ಸರ್ಕಾರಿ ಪ್ರೌಢಶಾಲೆಯ ಮಹೇಂದ್ರ ಪಾಟೀಲ್ ಮಾತನಾಡಿ, ಕನ್ನಡ ಏಕೀಕರಣಕ್ಕೆ ಆಲೂರು ವೆಂಕಟರಾಯರು ಅಡಿಗಲ್ಲು ಇಟ್ಟವರು. ಅವರ ತುರುವಾಯ ಕನ್ನಡಪರ ಹೋರಾಟಗಾರರ ಅವಿರತ ಶ್ರಮದಿಂದ ಮೈಸೂರು ಅಭಿದಾನದೊಂದಿಗೆ ಮೈಸೂರು ರಾಜ್ಯ ಉದಯವಾಯಿತು. ಮೈಸೂರು ರಾಜ್ಯ ಬಳಿಕ ಕರ್ನಾಟಕ ರಾಜ್ಯವಾಗಿ ಅಭಿದಾನ ಹೊಂದಿತು. ಕನ್ನಡ ಭಾಷೆಗೆ ಶ್ರೇಷ್ಠವಾದ ಸ್ಥಾನಮಾನವಿದೆ. ಕನ್ನಡವನ್ನು ಬಳಸಿದರೆ ಸಾಕು ಅದು ಉಳಿಯುತ್ತದೆ ಎಂದರು.
ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಕನ್ನಡದಲ್ಲಿ 125ಕ್ಕೆ 125 ಮತ್ತು 124 ಅಂಕಗಳಿಸಿದ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಗೌರವಿಸಲಾಯಿತು.
ಕನ್ನಡ ಗೀತೆಗಳಿಗೆ ನೃತ್ಯ: ಕನ್ನಡ ರಾಜ್ಯೋತ್ಸವದ ಅಂಗವಾಗಿ ಪಟ್ಟಣದ ವಿವಿಧ ಶಾಲೆಯ ವಿದ್ಯಾರ್ಥಿಗಳು ಕನ್ನಡ ನಾಡು, ನುಡಿ, ಜಲ ಅಭಿಮಾನವನ್ನು ಸಾರುವ ಗೀತೆಗಳಿಗೆ ನೃತ್ಯ ಪ್ರದರ್ಶಿಸಿ ನೆರೆದಿದ್ದವರ ಗಮನ ಸೆಳೆದರು.
ಈ ಸಂದರ್ಭದಲ್ಲಿ ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಚಂದ್ರಮ್ಮ, ಉಪಾಧ್ಯಕ್ಷ ಗಿರೀಶ್, ಸದಸ್ಯರಾದ ಸುದೇಶ್, ಹರೀಶ್, ಸಂಪತ್ ಕುಮಾರ್, ಮುಮ್ತಾಜ್ ಬೇಗಂ, ಸೋಮಶೇಖರ್, ಮಹೇಶ್, ಕ್ಷೇತ್ರ ಶಿಕ್ಷಣಾಧಿಕಾರಿ ಶಿವರಾಜು, ಪಶುಪಾಲನ ಇಲಾಖೆಯ ಸಿದ್ದರಾಜು, ಪಟ್ಟಣ ಪಂಚಾಯತಿ ಮುಖ್ಯಾಧಿಕಾರಿ ಮೂರ್ತಿ, ಕೃಷಿ ಅಧಿಕಾರಿ ರಘುವೀರ್, ಶಿಕ್ಷಣ ಇಲಾಖೆಯ ಕಿರಣ್, ಕಂದಾಯ ನಿರೀಕ್ಷಕ ಮಹದೇವಸ್ವಾಮಿ, ಗ್ರಾಮ ಲೆಕ್ಕಿಗ ಶೇಷಣ್ಣ,ದೈಹಿಕ ಶಿಕ್ಷಣ ಸಂಯೋಜಕ ಮಹದೇವ್, ಶಿಕ್ಷಕ ವೃಂದದವರು, ವಿದ್ಯಾರ್ಥಿಗಳು, ಸಾರ್ವಜನಿಕರು ಉಪಸ್ಥಿತರಿದ್ದರು.
ಕೆ.ಆರ್.ಪೇಟೆ : ತಾಲ್ಲೂಕಿನ ಬೂಕನಕೆರೆ ಹೋಬಳಿಯ ಮುದುಗೆರೆ ಗ್ರಾಮದ ಬಳಿ ರೈತರ ಸಾಕು ಪ್ರಾಣಿಗಳನ್ನು ತಿಂದು ಹಾಕುತ್ತಾ ರೈತರಿಗೆ ನಿತ್ಯ…
ಮೈಸೂರು : ವಿಶ್ವವಿಖ್ಯಾತ ಮೈಸೂರು ಶ್ರೀ ಚಾಮರಾಜೇಂದ್ರ ಮೃಗಾಲಯದಲ್ಲಿ ಚುರುಕಿನ ಚಟುವಟಿಕೆಯಿಂದ ಸದಾ ಸಂದರ್ಶಕರ ಗಮನ ಸೆಳೆಯುತ್ತಿದ್ದ ಸುಮಾರು ಸುಮಾರು…
ಮೈಸೂರು : ಗುರುವಾರ ಸಂಜೆ ಮೈಸೂರಿನ ಅಂಬಾವಿಲಾಸ ಅರಮನೆ ಮುಂಭಾಗ ಸಂಭವಿಸಿದ ಹಿಲೀಯಂ ಸಿಲಿಂಡರ್ ಸ್ಪೋಟ ಪ್ರಕರಣ ಸಂಬಂಧ ನಗರದ…
ಎಚ್.ಡಿ.ಕೋಟೆ : ತಾಲ್ಲೂಕಿನಲ್ಲಿ ಶೈಕ್ಷಣಿಕ ಪ್ರಗತಿಗೆ ಅಗತ್ಯವಾದ ಮಾದರಿ ಕಾರ್ಯಕ್ರಮಗಳನ್ನು ಹಗಲಿರುಳು ಎನ್ನದೆ ಶಿಕ್ಷಣ ಇಲಾಖೆಯವರು ನಡೆಸುತ್ತಿದ್ದಾರೆ ಎಂದು ಶಾಸಕ…
ಹನೂರು : ಕರ್ನಾಟಕದ ನಯಾಗಾರ ಎಂದೇ ಪ್ರಖ್ಯಾತಿ ಪಡೆದಿರುವ ಹೊಗೇನಕಲ್ ಜಲಪಾತ ನೋಡಲು ತಮಿಳುನಾಡಿನ ಭಾಗದಿಂದ ಪ್ರವಾಸಿಗರ ದಂಡೇ ಹರಿದುಬರುತ್ತಿದ್ದು,…
ಹೈದರಾಬಾದ್ : ಪುಷ್ಪ-2 ಸಿನಿಮಾ ವಿಶೇಷ ಪ್ರದರ್ಶನದ ವೇಳೆ ಉಂಟಾದ ಕಾಲ್ತುಳಿತ ಪ್ರಕರಣದಲ್ಲಿ ವರ್ಷದ ಬಳಿಕ ಇದೀಗ ಪೊಲೀಸರು ಕೋರ್ಟ್ಗೆ…