Mysore
27
scattered clouds

Social Media

ಬುಧವಾರ, 24 ಡಿಸೆಂಬರ್ 2025
Light
Dark

ಜ. 25, 26ರಂದು ಸಚಿವ ವಿ.ಸೋಮಣ್ಣ ಪ್ರವಾಸ

ಚಾಮರಾಜನಗರ: ವಸತಿ, ಮೂಲಸೌಲಭ್ಯ ಅಭಿವೃದ್ದಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ವಿ. ಸೋಮಣ್ಣ ಅವರು ಜ.25 ಹಾಗೂ 26ರಂದು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ.
ಜ.25ರಂದು ರಾತ್ರಿ 7 ಗಂಟೆಗೆ ನಗರಕ್ಕೆ ಆಗಮಿಸಿ ಪೊಲೀಸ್ ಅತಿಥಿ ಗೃಹದಲ್ಲಿ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿ, ಬಳಿಕ ವಾಸ್ತವ್ಯ ಹೂಡುವರು.
ಜ.26ರಂದು ಬೆಳಿಗ್ಗೆ 8.30ಕ್ಕೆ ಜಿಲ್ಲಾಡಳಿತ ಭವನದ ಆವರಣದಲ್ಲಿ ಶ್ರೀ ಬಸವೇಶ್ವರರ ಪುತ್ತಳಿ ನಿರ್ಮಾಣದ ಭೂಮಿಪೂಜೆಯಲ್ಲಿ ಭಾಗವಹಿಸುವರು. 9ಗಂಟೆಗೆ ಡಾ. ಬಿ.ಆರ್. ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಗಣರಾಜ್ಯೋತ್ಸವ ಸಮಾರಂಭ, 10.30ಕ್ಕೆ ಡಾ. ರಾಜ್‌ಕುಮಾರ್ ಜಿಲ್ಲಾ ರಂಗಮಂದಿರದಲ್ಲಿ ‘ಆಂದೋಲನ’ ದಿನಪತ್ರಿಕೆಯ 50 ವರ್ಷಗಳನ್ನು ಪೂರೈಸಿರುವ ಹಿನ್ನೆಲೆಯಲ್ಲಿ ವಿಶೇಷ ಸಂಚಿಕೆ ಬಿಡುಗಡೆ ಮಾರಂಭದಲ್ಲಿ ಪಾಲ್ಗೊಳ್ಳುವರು. 11.15ಕ್ಕೆ ವಿಸಿ ಹೊಸೂರಿಗೆ ಆಗಮಿಸಿ ಅಂಕನಶೆಟ್ಟಿಪುರ, ಬಸವನಪುರ ಹಾಗೂ ವೆಂಕಟಯ್ಯನಛತ್ರ, ಹೊಸೂರು ಗ್ರಾಮಗಳಲ್ಲಿನ ಸಿಸಿ ರಸ್ತೆ ಕಾಮಗಾರಿಗಳಿಗೆ ಚಾಲನೆ ನೀಡುವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು. ಮಧ್ಯಾಹ್ನ 1 ಗಂಟೆಗೆ ಕೊಳ್ಳೇಗಾಲಕ್ಕೆ ಆಗಮಿಸುವರು. ಮಧ್ಯಾಹ್ನ 2 ಗಂಟೆಗೆ ಬೆಂಗಳೂರಿಗೆ ತೆರಳುವರು ಎಂದು ಪ್ರಕಟಣೆ ತಿಳಿಸಿದೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!