ಚಾಮರಾಜನಗರ: ವಸತಿ, ಮೂಲಸೌಲಭ್ಯ ಅಭಿವೃದ್ದಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ವಿ. ಸೋಮಣ್ಣ ಅವರು ಜ.25 ಹಾಗೂ 26ರಂದು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ.
ಜ.25ರಂದು ರಾತ್ರಿ 7 ಗಂಟೆಗೆ ನಗರಕ್ಕೆ ಆಗಮಿಸಿ ಪೊಲೀಸ್ ಅತಿಥಿ ಗೃಹದಲ್ಲಿ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿ, ಬಳಿಕ ವಾಸ್ತವ್ಯ ಹೂಡುವರು.
ಜ.26ರಂದು ಬೆಳಿಗ್ಗೆ 8.30ಕ್ಕೆ ಜಿಲ್ಲಾಡಳಿತ ಭವನದ ಆವರಣದಲ್ಲಿ ಶ್ರೀ ಬಸವೇಶ್ವರರ ಪುತ್ತಳಿ ನಿರ್ಮಾಣದ ಭೂಮಿಪೂಜೆಯಲ್ಲಿ ಭಾಗವಹಿಸುವರು. 9ಗಂಟೆಗೆ ಡಾ. ಬಿ.ಆರ್. ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಗಣರಾಜ್ಯೋತ್ಸವ ಸಮಾರಂಭ, 10.30ಕ್ಕೆ ಡಾ. ರಾಜ್‌ಕುಮಾರ್ ಜಿಲ್ಲಾ ರಂಗಮಂದಿರದಲ್ಲಿ ‘ಆಂದೋಲನ’ ದಿನಪತ್ರಿಕೆಯ 50 ವರ್ಷಗಳನ್ನು ಪೂರೈಸಿರುವ ಹಿನ್ನೆಲೆಯಲ್ಲಿ ವಿಶೇಷ ಸಂಚಿಕೆ ಬಿಡುಗಡೆ ಮಾರಂಭದಲ್ಲಿ ಪಾಲ್ಗೊಳ್ಳುವರು. 11.15ಕ್ಕೆ ವಿಸಿ ಹೊಸೂರಿಗೆ ಆಗಮಿಸಿ ಅಂಕನಶೆಟ್ಟಿಪುರ, ಬಸವನಪುರ ಹಾಗೂ ವೆಂಕಟಯ್ಯನಛತ್ರ, ಹೊಸೂರು ಗ್ರಾಮಗಳಲ್ಲಿನ ಸಿಸಿ ರಸ್ತೆ ಕಾಮಗಾರಿಗಳಿಗೆ ಚಾಲನೆ ನೀಡುವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು. ಮಧ್ಯಾಹ್ನ 1 ಗಂಟೆಗೆ ಕೊಳ್ಳೇಗಾಲಕ್ಕೆ ಆಗಮಿಸುವರು. ಮಧ್ಯಾಹ್ನ 2 ಗಂಟೆಗೆ ಬೆಂಗಳೂರಿಗೆ ತೆರಳುವರು ಎಂದು ಪ್ರಕಟಣೆ ತಿಳಿಸಿದೆ.
ನಂಜನಗೂಡು : ಜಾತೀಯತೆ ಎಂಬುದು ಸಂಪೂರ್ಣವಾಗಿ ತೊಲಗಬೇಕು. ಎಲ್ಲ ಸಮುದಾಯದವರು ನಮ್ಮವರೇ ಎಂದು ತಿಳಿದಾಗ ಮಾತ್ರ ಜಾತೀಯತೆ ದೂರವಾಗಲು ಸಾಧ್ಯ…
ಮೈಸೂರು : ನಿರಂತರ ರಂಗ ತಂಡದ ‘ನಿರಂತರ ರಂಗ ಉತ್ಸವ-2025-26’ರ ಐದು ದಿನಗಳ ರಂಗೋತ್ಸವದ ಕೊನೆಯ ದಿನ ‘ಕೊಡಲ್ಲ ಅಂದ್ರೆ…
ಬೆಂಗಳೂರು : ನಗರದ ಹೊರವಲಯದ ಆನೇಕಲ್‌ನಲ್ಲಿ ಭಾನುವಾರ ಭೀಕರ ಸರಣಿ ಅಪಘಾತವಾಗಿದೆ. ವೇಗವಾಗಿ ನುಗ್ಗಿ ಬಂದ ಬೃಹತ್ ಕಂಟೈನರ್ ಲಾರಿಯೊಂದು…
ಮಂಡ್ಯ : ಮೌಢ್ಯಗಳನ್ನು ಜನರು ತಿರಸ್ಕರಿಸಿ ಬಸವಾದಿ ಶರಣರು ತಿಳಿಸಿರುವುದನ್ನು ಪಾಲನೆ ಮಾಡಬೇಕು. ವಿದ್ಯಾವಂತರಲ್ಲಿ ಕಂದಾಚಾರ ಹಾಗೂ ಮೌಢ್ಯತೆ ಇರುವುದು…
ಮೈಸೂರು : ನಗರದ ಕರ್ನಾಟಕ ವಸ್ತುಪ್ರದರ್ಶನ ಪ್ರಾಧಿಕಾರದ ಆವರಣದಲ್ಲಿ ಲಲಿತ ಕಲೆ ಮತ್ತು ಕರಕುಶಲ ಹಾಗೂ ಮಹಿಳಾ ಉದ್ದಿಮೆ ಉಪ…
ಬೆಂಗಳೂರು : ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬಂಧನ ಭೀತಿ ಎದುರಿಸುತ್ತಿರುವ ಬಿಜೆಪಿ ಶಾಸಕ ಬೈರತಿ ಬಸವರಾಜು, ಕಳೆದೆರಡು…