ಜಿಲ್ಲೆಗಳು

ಜಾಮಿಯಾ ಮಸೀದಿಯನ್ನು ವಿವಾದವನ್ನಾಗಿಸುತ್ತಿರುವ ಆರೋಪ : ಕಾನೂನು ಕ್ರಮಕ್ಕೆ ಅಬ್ದುಲ್ ಮಜೀದ್ ಆಗ್ರಹಿಸಿ

ಮೈಸೂರು : ಪೂಜಾ ಸ್ಥಳಗಳ ಕಾಯ್ದೆಯನ್ನು ಉಲ್ಲಂಘಿಸಿ ಶ್ರೀರಂಗಪಟ್ಟಣದ ಇತಿಹಾಸ ಪ್ರಸಿದ್ಧ ಜಾಮಿಯಾ ಮಸೀದಿಯನ್ನು ವಿವಾದವನ್ನಾಗಿಸುತ್ತಿರುವ ಸಂಘ ಪರಿವಾರ ಈ ಭಾಗದಲ್ಲಿ ಕೋಮು ವಿದ್ವೇಷ ಹರಡಿ ಸೌಹಾರ್ದತೆಗೆ ಧಕ್ಕೆ ತರುತ್ತಿದೆ. ಈ ವಿಚಾರದಲ್ಲಿ ಪೊಲೀಸ್ ಉನ್ನತಾಧಿಕಾರಿಗಳು ಕಟ್ಟುನಿಟ್ಟಿನ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ರಾಜ್ಯಾಧ್ಯಕ್ಷರಾದ ಅಬ್ದುಲ್ ಮಜೀದ್ ಅವರು ಪತ್ರಿಕಾ ಪ್ರಕಟಣೆಯ ಮೂಲಕ ಆಗ್ರಹಿಸಿದ್ದಾರೆ.

ಸಂಘ ಪರಿವಾರ ಪೂಜಾ ಸ್ಥಳಗಳ ಕಾಯ್ದೆಯನ್ನು ಪದೇ ಪದೇ ಉಲ್ಲಂಘನೆ ಮಾಡುತ್ತಲೇ ಬರುತ್ತಿದೆ. 1991ರ ಪೂಜಾ ಸ್ಥಳಗಳ ಕಾಯ್ದೆ ಪ್ರಕಾರ ಯಾವುದೇ ಪೂಜಾ ಸ್ಥಳದ ವಿಚಾರದಲ್ಲಿ 1947, ಆಗಸ್ಟ್ 15ಕ್ಕೆ ಅನ್ವಯಿಸುವಂತೆ ಯಥಾಸ್ಥಿತಿ ಕಾಪಾಡಬೇಕಾಗುತ್ತದೆ. ಪೂಜಾ ಸ್ಥಳಗಳನ್ನು ವಿವಾದವಾಗಿಸುವುದು, ಪರಿವರ್ತಿಸಲು ಪ್ರಯತ್ನಿಸುವುದು, ಕೆಡವಲು ಸಂಚು ರೂಪಿಸುವುದು ಅಪರಾಧವಾಗುತ್ತದೆ. ಇಂತಹ ಕೃತ್ಯಗಳ ವಿರುದ್ಧ ಪೊಲೀಸರು ಸ್ವಯಂ ಪ್ರೇರಿತರಾಗಿ ಕೇಸು ದಾಖಲಿಸಿಕೊಂಡು ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಮಜೀದ್ ಅವರು ತಮ್ಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಶ್ರೀರಂಗಪಟ್ಟಣದಲ್ಲಿ ಜನರು ಸೌಹಾರ್ದತೆಯಿಂದ ಬದುಕುತ್ತಿದ್ದಾರೆ. ಆದರೆ ಶೋಭಾಯಾತ್ರೆ ಹೆಸರಲ್ಲಿ, ಹನುಮ ಜಯಂತಿಯ ನೆಪದಲ್ಲಿ ಕೋಮು ಸೌಹಾರ್ದತೆಯನ್ನು ಕದಡಿ ತನ್ನ ರಾಜಕೀಯ ಲಾಭಕ್ಕೆ ಪಟ್ಟಣವನ್ನು ಕೋಮುದಳ್ಳುರಿಗೆ ತಳ್ಳುವ ನೀಚ ಕೆಲಸಕ್ಕೆ ಸಂಘ ಪರಿವಾರ ಕೈ ಹಾಕಿದೆ ಎಂದು ಆರೋಪಿಸಿದ ಮಜೀದ್ ಅವರು, ಪೊಲೀಸರು ಈ ಬಗ್ಗೆ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಬೇಕು, ಆದರೆ ಸಂಘ ಪರಿವಾರದ ದ್ವೇಷದ ಕೃತ್ಯಗಳಿಗೆ ಬೆಂಬಲವಾಗಿ ಸ್ವತಃ ಕೋಮುವಾದಿ ಬಿಜೆಪಿ ಪಕ್ಷದ ಸರ್ಕಾರವೇ ನಿಂತಿರುವುದರಿಂದ ಪೊಲೀಸರು ಸ್ವತಂತ್ರವಾಗಿ ಕಾರ್ಯ ನಿರ್ವಹಿಸಿ ಕಾನೂನು ಕಾಪಾಡಲು ಸಾಧ್ಯವಾಗುತ್ತಿಲ್ಲ ಎಂದು ಮಜೀದ್ ಆರೋಪಿಸಿದರು.

ಶ್ರೀರಂಗಪಟ್ಟಣದ ಪ್ರಕರಣದಲ್ಲಿ ಮುಸ್ಲಿಮರ ಮನೆ ಮೇಲೆ ಹಾರಿಸಿದ್ದ ಹಸಿರು ಧ್ವಜವನ್ನು ಕಿತ್ತೆಸೆದು ವಿಕೃತಿ ಮೆರೆದಿದ್ದ ಸಂಘ ಪರಿವಾರದ ಸದಸ್ಯನ ಮೇಲೆ ಪೊಲೀಸರು ಕ್ರಮ ಕೈಗೊಂಡಾಗ ಪೊಲೀಸರ ವಿರುದ್ಧವೇ ಸಂಘ ಪರಿವಾರದ ಗೂಂಡಾಗಳು ಪ್ರತಿಭಟನೆ ನಡೆಸಿ, ಕ್ರಮ ಕೈಗೊಂಡ ಪೊಲೀಸರ ವಿರುದ್ಧವೇ ಕ್ರಮ ಜರುಗಿಸಲಾಗುವುದು ಎನ್ನುವ ಭರವಸೆಯನ್ನು ಪೊಲೀಸ್ ಉನ್ನತಾಧಿಕಾರಿಗಳಿಂದಲೇ ಪಡೆದುಕೊಂಡಿದ್ದಾರೆ. ಹೀಗಿರುವಾಗ ಪೊಲೀಸರು ಕ್ರಮ ಕೈಗೊಳ್ಳಲು ಹಿಂಜರಿಯುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಅವರು ಪ್ರಕಟಣೆಯಲ್ಲಿ ಹೇಳಿದ್ದಾರೆ.

ಬಿಜೆಪಿ ಸರ್ಕಾರ ತನ್ನ ರಾಜಕೀಯ ಕುತಂತ್ರಗಳನ್ನು ಬದಿಗೆ ಸರಿಸಿ ಪೂಜಾ ಸ್ಥಳಗಳ ಕಾಯ್ದೆ ಅನುಗುಣವಾಗಿ ಸಂವಿಧಾನ ಬದ್ಧವಾಗಿ ನಡೆದುಕೊಳ್ಳಬೇಕು ಎಂದು ಅಬ್ದುಲ್ ಮಜೀದ್ ಅವರು ತಮ್ಮ ಹೇಳಿಕೆಯ ಮೂಲಕ ಸರ್ಕಾರವನ್ನು ಒತ್ತಾಯಿಸಿದ್ದಾರೆ.

andolanait

Recent Posts

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

15 hours ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

18 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

18 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

18 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

19 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

19 hours ago