ಹನೂರು: ತಾಲೂಕಿನ ನೆಲ್ಲೂರು, ಹೂಗ್ಯಂ, ನಾಗಣ್ಣನಗರ ಹಾಗೂ ಜಾಗೇರಿ ಸಾಗುವಳಿ ಜಮೀನು ಸಮಸ್ಯೆ ಸಂಬಂಧ ಬೆಂಗಳೂರಿನಲ್ಲಿ ಬುಧವಾರ ಜಿಲ್ಲಾ ಉಸ್ತುವಾರಿ ಸಚಿವ ಸೋಮಣ್ಣ ಅಧ್ಯಕ್ಷತೆಯಲ್ಲಿ ಹಾಗೂ ಜಿಲ್ಲಾಧಿಕಾರಿ ಸಮ್ಮುಖದಲ್ಲಿ ನಡೆದ ಸಭೆಯಲ್ಲಿ ಅಗತ್ಯ ಕ್ರಮಕೈಗೊಳ್ಳಲಾಗಿದೆ ಎಂದು ಶಾಸಕ ಆರ್.ನರೇಂದ್ರ ತಿಳಿಸಿದರು.
ಪಟ್ಟಣದ ಪಿಡಬ್ಯುಡಿ ವಸತಿ ಗೃಹದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನೆಲ್ಲೂರು ಗ್ರಾಮದಲ್ಲಿ 8 ಎಕರೆ ದರ್ಖಾಸ್ ಜಮೀನು ಇದೆ. ಆದರೆ ಆ ಜಾಗವನ್ನು ಅರಣ್ಯ ಇಲಾಖೆ ವಶಪಡಿಸಿಕೊಂಡಿದ್ದು, ಕಂದಕವನ್ನು ನಿರ್ಮಿಸಲಾಗಿದೆ. ಹಾಗಾಗಿ ಈ ಬಗ್ಗೆ ಸರ್ವೇ ಕಾರ್ಯ ನಡೆಸಲು ತಹಸೀಲ್ದಾರ್ ಅವರಿಗೆ ಸೂಚನೆ ನೀಡಲಾಗಿದೆ. ಆದ್ದರಿಂದ ಮುಂದಿನ ದಿನಗಳಲ್ಲಿ ಈ ಜಾಗವನ್ನು ನಿವೇಶನವನ್ನಾಗಿ ಪರಿವರ್ತಿಸಿ ಜನರಿಗೆ ನೀಡಲಾಗುವುದು. ಜೊತೆಗೆ ಜಾಗೇರಿಯ ಅರಣ್ಯ ಪ್ರದೇಶದಲ್ಲಿ 3 ಸಾವಿರ ಎಕರೆಯಲ್ಲಿ ರೈತರು ಹಲವು ವರ್ಷಗಳಿಂದ ಸ್ವಾಧೀನದಲ್ಲಿದ್ದು, ಕೃಷಿ ಮಾಡುತ್ತಿದ್ದಾರೆ. ಆದರೆ ಸಾಗುವಳಿ ಚೀಟಿ ನೀಡುವಲ್ಲಿ ಅರಣ್ಯ ಇಲಾಖೆಯಿಂದ ಸಮಸ್ಯೆಯಾಗುತ್ತಿದೆ. ಈ ಸಂಬಂಧ ಸಭೆಯಲ್ಲಿ ಚರ್ಚಿಸಲಾಗಿದ್ದು, ಫೆ.15 ರೊಳಗೆ ಸಂಪೂರ್ಣ ಸರ್ವೇ ಮಾಡಿ ಅದರ ವರದಿಯನ್ನು ಸಲ್ಲಿಸಲು ಕಂದಾಯ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಲಾಗಿದೆ.
ಅಲ್ಲದೇ ಹೂಗ್ಯಂ ಗ್ರಾಮದ ಸರ್ವೇ ನಂಬರ್ 239ರಲ್ಲಿ 2 ಸಾವಿರ ಎಕರೆಯಲ್ಲಿ ಈ ಹಿಂದೆ ರೈತರು ರೈತರು ಸಾಗುವಳಿ ಮಾಡುತ್ತಿದ್ದರು. ಆದರೆ ಇದೀಗ ಅರಣ್ಯ ಇಲಾಖೆ ಸ್ವಾಧೀನ ಪಡಿಸಿಕೊಂಡಿದೆ. ಇನ್ನು ನಾಗಣ್ಣ ನಗರದಲ್ಲಿ 2 ಎಕರೆಯಲ್ಲಿ ಕೃಷಿ ಮಾಡುತ್ತಿರುವ ರೈತರು ಹಾಗೂ ದಾಖಲೆಗಳಲ್ಲಿ ವ್ಯತ್ಯಾಸವಿದೆ. ಆದ್ದರಿಂದ ಸರ್ವೇ ಮಾಡಿ ತಿದ್ದುಪಡಿ ಮಾಡುವಂತೆ ತಿಳಿಸಲಾಗಿದೆ.
ತಾಲೂಕಿನ ಚಂಗಡಿ ಗ್ರಾಮದ ಸ್ಥಳಾಂತರ ಪ್ರಕ್ರಿಯೆ ಪೂರ್ಣಗೊಂಡು 2 ವರ್ಷವೇ ಕಳೆದಿದ್ದು, ಗ್ರಾಮದ ಜನರಿಗೆ ಪುನರ್ವಸತಿ ಕಲ್ಪಿಸಲು ಸ್ಥಳವನ್ನು ಗುರ್ತಿಸಲಾಗಿದೆ.ಆದರೆ ಸರ್ಕಾರದಿಂದ ಇನ್ನು ಅನುದಾನ ಬಿಡುಗಡೆಯಾಗಿಲ್ಲ.ಆದ್ದರಿಂದ ಸರ್ಕಾರದಿಂದ ಅನುದಾನ ಬಿಡುಗಡೆ ಒತ್ತಾಯಿಸಲಾಗಿದೆ ಎಂದು ತಿಳಿಸಿದರು.
ವೈಡ್ ಆಂಗಲ್ ಬಾ.ನಾ.ಸುಬ್ರಹ್ಮಣ್ಯ ವರ್ಷದ ಕೊನೆಯ ವಾರ ತೆರೆಗೆ ಬಂದಿರುವ ಚಿತ್ರಗಳಲ್ಲಿ ಒಂದು ‘ಮಾರ್ಕ್’. ಚಿತ್ರದ ಮುಖ್ಯ ಪಾತ್ರ ಮಾರ್ಕಾಂಡೇಯ…
2025ರಲ್ಲಿ ವಿಧಿವಶರಾದ ಗಣ್ಯರ ಮಾಹಿತಿ ಜನವರಿ... ನಾ.ಡಿಸೋ’ಜಾ: ಕನ್ನಡದ ಪ್ರಸಿದ್ಧ ಬರಹಗಾರ ಮತ್ತು ಕಾದಂಬರಿಕಾರ ನಾ ಡಿ’ಸೋಜಾ ಅವರು ಜನವರಿ…
ಎಚ್.ಎಸ್.ದಿನೇಶ್‌ಕುಮಾರ್ ಮೈಸೂರು: ಸರ್ಕಾರಿ ಕಚೇರಿಯಲ್ಲಿ ಕೆಲಸ ನಿರ್ವಹಿಸುವವರು ಎಚ್ಚರಿಕೆ ವಹಿಸಿದಲ್ಲಿ ನಡೆಯ ಬಹುದಾದ ವಂಚನೆಗಳನ್ನು ಹೇಗೆ ತಪ್ಪಿಸಬಹುದು ಎಂಬುದಕ್ಕೆ ವಿಧಾನಪರಿಷತ್…
ಮೈಸೂರು : ಪ್ರವಾಸಿಗರ ದಂಡೇ ನೆರೆಯುತ್ತಿದ್ದ ಸ್ಥಳದಲ್ಲೇ ಹೀಲಿಯಂ ಬಲೂನ್‌ಗಾಗಿ ಬಳಸುತ್ತಿದ್ದ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿ,…
ಕೆ.ಆರ್.ಪೇಟೆ : ರಸ್ತೆಯಲ್ಲಿ ರಾಗಿ ಒಕ್ಕಣೆ ಮಾಡುತ್ತಿದ್ದ ಸಂದರ್ಭದಲ್ಲಿ ರಾಗಿಯ ಮೇಲೆ ಕಾರು ಚಲಿಸಿದಾಗ ಕಾರು ಮಗುಚಿ ಬಿದ್ದ ಪರಿಣಾಮ…
ಮೈಸೂರು : ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಅದೃಷ್ಟವಶಾತ್ ಯಾವುದೇ ಹೆಚ್ಚಿನ ಅನಾಹುತ ಸಂಭವಿಸಿಲ್ಲ. ವಿಜಯನಗರದ ಕೊಡವ…