ಜಿಲ್ಲೆಗಳು

ಜೈನ ಕ್ಷೇತ್ರ: ಪ್ರವಾಸಿತಾಣ ಅನುಮತಿ ರದ್ದತಿಗೆ ಆಗ್ರಹಿಸಿ ನಾಳೆ ಪ್ರತಿಭಟನೆ

ಮೈಸೂರು: ಜಾರ್ಖಂಡ್ ರಾಜ್ಯದ ಗಿರಿಡಿ ಜಿಲ್ಲೆಯಲ್ಲಿರುವ ಜೈನರ ಪವಿತ್ರ ಪ್ರಾಚೀನ ತೀರ್ಥಂಕರರ ಮೋಕ್ಷ ತಾಣವಾದ ಶ್ರೀ ಸಮ್ಮೇದ ಶಿಖರ್ಜಿಯನ್ನು ಪ್ರವಾಸೋದ್ಯಮ ಇಲಾಖೆಯು ಪ್ರವಾಸಿ ತಾಣಕ್ಕೆ ಅನುಮತಿ ನೀಡಿರುವುದನ್ನು ರದ್ದುಪಡಿಸಬೇಕು ಎಂದು ಮೈಸೂರಿನ ಶ್ರೀ ದಿಗಂಬರ ಜೈನ ಸಮಾಜ ಆಗ್ರಹಿಸಿದೆ.
ಜಿಲ್ಲಾ ಪತ್ರಕರ್ತರ ಭವನದಲ್ಲಿ ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಮಾಜದ ಅಧ್ಯಕ್ಷ ಎಸ್.ಡಿ.ಮಹೇಶ್ ಪ್ರಸಾದ್, ಅಹಿಂಸಾ ತತ್ವವನ್ನು ಸಾರಿದ ಜೈನಧರ್ಮದ ೨೪ ತೀರ್ಥಂಕರರ ಲ್ಲಿ ೨೦ ತೀರ್ಥಂಕರರು ತಮ್ಮ ಕೋಟ್ಯಂತರ ಮುನಿ ಸಂಘಗಳ ಜತೆ ಮೋಕ್ಷ ಪಡೆದಂತಹ ಅತ್ಯಂತ ಪ್ರಾಚೀನ ಹಾಗೂ ಪವಿತ್ರ ಸ್ಥಳವೇ ಶ್ರೀ ಸಮ್ಮೇದ ಶಿಖರ್ಜಿ. ಈ ಪವಿತ್ರ ತಾಣವನ್ನು ಪ್ರವಾಸಿ ತಾಣ ವಾಗಿಸಲು ಅನುಮತಿ ನೀಡಿರುವುದು ಸರಿಯಲ್ಲ. ಕೂಡಲೇ ಜಾರ್ಖಂಡ್ ರಾಜ್ಯ ಸರ್ಕಾರ ಆದೇಶವನ್ನು ರದ್ದುಪಡಿಸಬೇಕು ಎಂದು ಒತ್ತಾಯಿಸಿದರು.
ಶ್ರೀ ಸಮ್ಮೇದ ಶಿಖರ್ಜಿಯನ್ನು ಪ್ರವಾಸಿ ತಾಣವಾಗಿ ಮಾಡಲು ಹೊರಟಿರುವುದನ್ನು ಖಂಡಿಸಿ ನಗರದ ಗಾಂಧಿ ವೃತ್ತದಲ್ಲಿ ಡಿ.೧೯ರಂದು ಬೆಳಿಗ್ಗೆ ೧೦ರಿಂದ ೧೧ ಗಂಟೆಯವರೆಗೆ ಮೌನ ಪ್ರತಿಭಟನೆ ಮಾಡಿ ನಂತರ ಮೆರವಣಿಗೆಯಲ್ಲಿ ಸಾಗಿ ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಲಾಗುವುದು ಎಂದು ತಿಳಿಸಿದರು. ಸಮಾಜದ ಉಪಾಧ್ಯಕ್ಷ ಭರತ್ ರಾಜ್, ಕಾರ್ಯದರ್ಶಿ ಸುನಿಲ್ ಕುಮಾರ್, ಮಹಿಳಾ ಅಧ್ಯಕ್ಷರಾದ ಲತಾ ಸುದರ್ಶನ್ ಮತ್ತಿತರರು ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದರು.

andolanait

Recent Posts

ಸಂಭ್ರಮದಿಂದ ಹೊಸ ವರ್ಷವನ್ನು ಬರಮಾಡಿಕೊಂಡ ಮೈಸೂರಿಗರು

ಮೈಸೂರು: ಜಗತ್ಪ್ರಸಿದ್ಧ ಮೈಸೂರು ಅರಮನೆ ಆವರಣದಲ್ಲಿ ಜಗಮಗಿಸುವ ದೀಪಾಲಂಕಾರ, ಫಲಪುಷ್ಪ ಪ್ರದರ್ಶನದ ಸೊಬಗಿನ ಮಧ್ಯೆ ಪಾರಂಪರಿಕ ಪೊಲೀಸ್‌ ಬ್ಯಾಂಡ್‌ನ ಸದ್ದಿನೊಂದಿಗೆ…

6 hours ago

ವಿದ್ಯುತ್ ಶಾರ್ಟ್ ಸರ್ಕ್ಯೂಟ್: ಕಾಫಿ ಪುಡಿ ಅಂಗಡಿ ಬೆಂಕಿಗಾಹುತಿ

ಕೊಳ್ಳೇಗಾಲ: ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಸಂಭವಿಸಿ ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ರಸ್ತೆಯಲ್ಲಿರುವ ಸಾಕಮ್ಮಾಸ್ ಕಾಫಿ ಪುಡಿ ಅಂಗಡಿ ಬುಧವಾರ ರಾತ್ರಿ ಸಂಪೂರ್ಣ…

7 hours ago

ಮೈಸೂರು, ಚಾ.ನಗರ, ಮಂಡ್ಯ, ಕೊಡಗು ಎಸ್‌ಪಿಗಳ ವರ್ಗ

ಮೈಸೂರು: ರಾಜ್ಯದ ವಿವಿಧೆಡೆ ಸೇವೆ ಸಲ್ಲಿಸುತ್ತಿದ್ದ 25 ಮಂದಿ ಐಪಿಎ ಅಧಿಕಾರಿಗಳನ್ನು ರಾಜ್ಯ ಸರ್ಕಾರ ವರ್ಗಾವಣೆಗೊಳಿಸಿ ಆದೇಶ ನೀಡಿದೆ. ಅವರಲ್ಲಿ…

7 hours ago

ಕೊಡಗು ಜಿಲ್ಲೆಯ ನೂತನ ಪೊಲೀಸ್‌ ವರಿಷ್ಠಾಧಿಕಾರಿಯಾಗಿ ಬಿಂದುಮಣಿ ನೇಮಕ

ಕೊಡಗು: ಕರ್ನಾಟಕ ಸರ್ಕಾರದ ಆದೇಶದಂತೆ ಕೊಡಗಿನ ಪೊಲೀಸ್‌ ವರಿಷ್ಠಾಧಿಕಾರಿ ರಾಮರಾಜನ್‌ ಅವರನ್ನು ಬೆಳಗಾವಿ ಜಿಲ್ಲೆಗೆ ವರ್ಗಾವಣೆ ಮಾಡಲಾಗಿದೆ. ಖಾಲಿಯಾದ ಸ್ಥಳಕ್ಕೆ…

7 hours ago

ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್‌ ಸೇರಿದ ಟೇಲ್ಸ್ ಬೈ ಪರಿ ಕೃತಿಯ ಪುಟ್ಟ ಲೇಖಕಿ ಪರಿಣಿತಾ

ಬೆಂಗಳೂರು: ಸಣ್ಣ ವಯಸ್ಸಿನಿಂದಲೇ ಬರವಣಿಗೆ ರೂಢಿಸಿಕೊಂಡು 9ನೇ ವಯಸ್ಸಿಗೆ 'ಟೇಲ್ಸ್ ಬೈ ಪರಿ' ಪುಸ್ತಕವನ್ನು ಬರೆದು ಹೆಸರು ಮಾಡಿರುವ ನಮ್ಮ…

11 hours ago

ಅಕ್ರಮ ನಿವಾಸಿಗಳಿಗೆ ಮನೆ: ಸರ್ಕಾರದ ವಿರುದ್ಧ ವಿ.ಸೋಮಣ್ಣ ಆಕ್ರೋಶ

ನವದೆಹಲಿ: ಕೋಗಿಲು ಲೇಔಟ್‌ನಲ್ಲಿ ಅಕ್ರಮ ನಿವಾಸಿಗಳಿಗೆ ಮನೆ ನೀಡುತ್ತಿದ್ದಾರೆ. ಇದು ರಾಜ್ಯ ಸರ್ಕಾರದ ದಡ್ಡತನದ ಪರಮಾವಧಿ ಎಂದು ಕೇಂದ್ರ ಸಚಿವ…

11 hours ago