ಬೆಂಗಳೂರು: ಬೆಂಗಳೂರು ಮತ್ತು ಮೈಸೂರು ಮಧ್ಯೆ ಸೋಮವಾರ (ಜ. 16)ದಿಂದ ಎಲೆಕ್ಟ್ರಿಕ್ ಬಸ್ ಸಂಚಾರ ಆರಂಭಗೊಳ್ಳಲಿದೆ.
ಕೆಎಸ್‌ಆರ್‌ಟಿಸಿಯು ಕೇಂದ್ರ ಸರ್ಕಾರದ ಫೇಮ್ -2 ಯoಜನೆಯಡಿ ಮೊದಲ ಬಾರಿಗೆ ಅಂತರ ನಗರ (ಬೆಂಗಳೂರು -ಮೈಸೂರು) ಮಧ್ಯೆ ಎಲೆಕ್ಟ್ರಿಕ್ ಬಸ್ ಸಂಚಾರ ಪ್ರಾರಂಭಿಸಲಿದೆ. ಈಗಾಗಲೇ ಶುಕ್ರವಾರ ಪ್ರಾಯೋಗಿಕವಾಗಿ ಯಶಸ್ವಿಯಾಗಿದೆ. ಮುಂದಿನ ಒಂದು ತಿಂಗಳಲ್ಲಿ ಬೆಂಗಳೂರಿನಿಂದ ದಾವಣಗೆರೆ, ಚಿಕ್ಕಮಗಳೂರು, ಶಿವಮೊಗ್ಗ, ಮಡಿಕೇರಿ ಮತ್ತು ವಿರಾಜಪೇಟೆಗಳಿಗೆ ಎಲೆಕ್ಟ್ರಿಕ್ ಬಸ್ ಸಂಚಾರ ಪ್ರಾರಂಭಗೊಳ್ಳಲಿದೆ.
ಓಲೆಕ್ಟ್ರಾ ಗ್ರೀನ್ಟೆಕ್ ಕಂಪೆನಿಯಿಂದ ಜಿಸಿಸಿ(ಗ್ರಾಸ್ ಕಾಸ್ಟ್ ಕಂಟ್ರಾಕ್ಟ್) ಮಾದರಿಯಲ್ಲಿ 50 ಬಸ್‌ಗಳನ್ನು ಕೆಎಸ್‌ಆರ್‌ಟಿಸಿ ಪಡೆಯುತ್ತಿದ್ದು, ಇದರ ಮೊದಲ ಬಸ್ ಈ ಮಾರ್ಗದಲ್ಲಿ ಸಂಚರಿಸಲಿದೆ. ಉಳಿದ 49 ಬಸ್‌ಗಳು ವಿವಿಧ ಹಂತದಲ್ಲಿ ಮಾರ್ಗಕ್ಕಿಳಿಯಲಿದ್ದು ಅವು ಮೈಸೂರು, ಮಡಿಕೇರಿ, ವಿರಾಜಪೇಟೆ, ದಾವಣಗೆರೆ, ಶಿವಮೊಗ್ಗ ಮತ್ತು ಚಿಕ್ಕಮಗಳೂರು ಮಧ್ಯೆ ಸಂಚರಿಸಲಿದೆ ಎಂದು ಕೆಎಸ್‌ಆರ್‌ಟಿಸಿ ವ್ಯವಸ್ಥಾಪಕ ನಿರ್ದೇಶಕ ವಿ.ಅನ್ಬುಕುಮಾರ್ ತಿಳಸಿದ್ದಾರೆ.
ಈ ಬಸ್‌ನ ಬ್ಯಾಟರಿಯನ್ನು ಒಮ್ಮೆ ಚಾರ್ಜ್ ಮಾಡಿದರೆ 320ಕಿಲೋ ಮೀಟರ್ ಸಂಚರಿಸುತ್ತದೆ. ಆರು ಕಡೆ ಚಾರ್ಜಿಂಗ್ ಘಟಕಗಳನ್ನು ತೆರೆಯಲಾಗಿದ್ದು, ಅಲ್ಲಿ ಒಂದು ಗಂಟೆ ಚಾರ್ಜ್ ಮಾಡಿಕೊಂಡು ಮತ್ತೆ ರಾಜಧಾನಿಗೆ ವಾಪಸ್ ಬರಲಿದೆ ಎಂದು ವಿವರಿಸಿದರು.
ಬೆಂಗಳೂರು: ಇರಾನ್-ಇಸ್ರೇಲ್ ನಡುವಿನ ಸಂಘರ್ಷ ಏರ್ಪಟ್ಟಿರುವ ಪರಿಣಾಮ ಕನ್ನಡಿಗರ ರಕ್ಷಣೆಗೆ ತುರ್ತು ಕ್ರಮ ಕೈಗೊಳ್ಳಿ ಎಂದು ಪ್ರಧಾನಿ ನರೇಂದ್ರ ಮೋದಿ…
ನಾಪೋಕ್ಲು: ಕಾನೂನು ವ್ಯವಸ್ಥೆ ಕಾಪಾಡುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ವಾಗ್ದಾಳಿ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆಮಹದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತೊಳಸಿಕೆರೆ ಗ್ರಾಮದ…
ಬೆಂಗಳೂರು: ಈ ಬಾರಿಯ ಬಜೆಟ್ ಅಧಿವೇಶನದಲ್ಲಿ ಸರ್ಕಾರದ ಲೋಪದೋಷಗಳನ್ನು ಚರ್ಚಿಸಲಾಗುವುದು. ರಾಜ್ಯದ ಆರ್ಥಿಕ ದುಸ್ಥಿತಿಯ ವಿರುದ್ಧ ಹೋರಾಟ ಮಾಡಲಾಗುವುದು ಎಂದು…
ಕೊಡಗು: ನಾಳೆ ವರ್ಷದ ಮೊದಲ ಚಂದ್ರಗ್ರಹಣ ಹೋಳಿ ಹುಣ್ಣಿಮೆಯ ದಿನದಂದು ಸಂಭವಿಸುತ್ತಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ ಹಲವು ದೇವಾಲಯಗಳ ಪೂಜಾ…
ಮಂಡ್ಯ: ಜಿಲ್ಲೆಯ ಮದ್ದೂರು ತಾಲ್ಲೂಕಿನ ಗೆಜ್ಜಲಗೆರೆ, ಗೊರವನಹಳ್ಳಿ, ಚಾಮನಹಳ್ಳಿ, ಸೋಮನಹಳ್ಳಿ ಸೇರಿದಂತೆ ವಿವಿಧ ಪ್ರದೇಶಗಳನ್ನು ಸ್ಥಳೀಯರ ಆಶಯಗಳಿಗೆ ವಿರುದ್ಧವಾಗಿ ಮದ್ದೂರು…