ಜಿಲ್ಲೆಗಳು

ಜ.16 : ಮೈಸೂರು -ಬೆಂಗಳೂರು ಮಧ್ಯೆ ಎಲೆಕ್ಟ್ರಿಕ್ ಬಸ್ ಸಂಚಾರ

ಬೆಂಗಳೂರು: ಬೆಂಗಳೂರು ಮತ್ತು ಮೈಸೂರು ಮಧ್ಯೆ ಸೋಮವಾರ (ಜ. 16)ದಿಂದ ಎಲೆಕ್ಟ್ರಿಕ್ ಬಸ್ ಸಂಚಾರ ಆರಂಭಗೊಳ್ಳಲಿದೆ.
ಕೆಎಸ್‌ಆರ್‌ಟಿಸಿಯು ಕೇಂದ್ರ ಸರ್ಕಾರದ ಫೇಮ್ -2 ಯoಜನೆಯಡಿ ಮೊದಲ ಬಾರಿಗೆ ಅಂತರ ನಗರ (ಬೆಂಗಳೂರು -ಮೈಸೂರು) ಮಧ್ಯೆ ಎಲೆಕ್ಟ್ರಿಕ್ ಬಸ್ ಸಂಚಾರ ಪ್ರಾರಂಭಿಸಲಿದೆ. ಈಗಾಗಲೇ ಶುಕ್ರವಾರ ಪ್ರಾಯೋಗಿಕವಾಗಿ ಯಶಸ್ವಿಯಾಗಿದೆ. ಮುಂದಿನ ಒಂದು ತಿಂಗಳಲ್ಲಿ ಬೆಂಗಳೂರಿನಿಂದ ದಾವಣಗೆರೆ, ಚಿಕ್ಕಮಗಳೂರು, ಶಿವಮೊಗ್ಗ, ಮಡಿಕೇರಿ ಮತ್ತು ವಿರಾಜಪೇಟೆಗಳಿಗೆ ಎಲೆಕ್ಟ್ರಿಕ್ ಬಸ್ ಸಂಚಾರ ಪ್ರಾರಂಭಗೊಳ್ಳಲಿದೆ.
ಓಲೆಕ್ಟ್ರಾ ಗ್ರೀನ್ಟೆಕ್ ಕಂಪೆನಿಯಿಂದ ಜಿಸಿಸಿ(ಗ್ರಾಸ್ ಕಾಸ್ಟ್ ಕಂಟ್ರಾಕ್ಟ್) ಮಾದರಿಯಲ್ಲಿ 50 ಬಸ್‌ಗಳನ್ನು ಕೆಎಸ್‌ಆರ್‌ಟಿಸಿ ಪಡೆಯುತ್ತಿದ್ದು, ಇದರ ಮೊದಲ ಬಸ್ ಈ ಮಾರ್ಗದಲ್ಲಿ ಸಂಚರಿಸಲಿದೆ. ಉಳಿದ 49 ಬಸ್‌ಗಳು ವಿವಿಧ ಹಂತದಲ್ಲಿ ಮಾರ್ಗಕ್ಕಿಳಿಯಲಿದ್ದು ಅವು ಮೈಸೂರು, ಮಡಿಕೇರಿ, ವಿರಾಜಪೇಟೆ, ದಾವಣಗೆರೆ, ಶಿವಮೊಗ್ಗ ಮತ್ತು ಚಿಕ್ಕಮಗಳೂರು ಮಧ್ಯೆ ಸಂಚರಿಸಲಿದೆ ಎಂದು ಕೆಎಸ್‌ಆರ್‌ಟಿಸಿ ವ್ಯವಸ್ಥಾಪಕ ನಿರ್ದೇಶಕ ವಿ.ಅನ್ಬುಕುಮಾರ್ ತಿಳಸಿದ್ದಾರೆ.
ಈ ಬಸ್‌ನ ಬ್ಯಾಟರಿಯನ್ನು ಒಮ್ಮೆ ಚಾರ್ಜ್ ಮಾಡಿದರೆ 320ಕಿಲೋ ಮೀಟರ್ ಸಂಚರಿಸುತ್ತದೆ. ಆರು ಕಡೆ ಚಾರ್ಜಿಂಗ್ ಘಟಕಗಳನ್ನು ತೆರೆಯಲಾಗಿದ್ದು, ಅಲ್ಲಿ ಒಂದು ಗಂಟೆ ಚಾರ್ಜ್ ಮಾಡಿಕೊಂಡು ಮತ್ತೆ ರಾಜಧಾನಿಗೆ ವಾಪಸ್ ಬರಲಿದೆ ಎಂದು ವಿವರಿಸಿದರು.

andolanait

Recent Posts

ಓದುಗರ ಪತ್ರ: ಗ್ರಹಣ..!

ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…

7 mins ago

ಓದುಗರ ಪತ್ರ: ಪೆಟ್ರೋಲ್ ಬಂಕ್‌ಗಳಲ್ಲಿ ಮೋಸ: ಗರಿಷ್ಟ ಕ್ರಮ ಕೈಗೊಳ್ಳಲಿ

ರಾಜ್ಯದ ೮೦೫ ಪೆಟ್ರೋಲ್ ಬಂಕ್‌ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್‌ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…

9 mins ago

ಓದುಗರ ಪತ್ರ: ಉದ್ಯೋಗ ಸೃಷ್ಟಿ : ಫ್ಲಿಪ್‌ಕಾರ್ಟ್ ನಡೆ ಸ್ವಾಗತಾರ್ಹ

ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…

10 mins ago

ಸುಗಮ ಸಂಗೀತದ ಅದ್ಬುತ ಗಾಯಕ ಮಡಿಕೇರಿ ನಾಗೇಂದ್ರ

ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…

3 hours ago

ಸುಮ್ಮನಿದ್ದರೂ ಪರಿಣಮಿಸುವ ರಂಗಭೂಮಿಯ ಝೆನ್ ಗುರು – ಜಂಬೆ ಮೇಷ್ಟ್ರು

ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…

3 hours ago

ಮಕ್ಕಳ ಮನದಂಗಳದಲ್ಲಿ ಗಾಂಧಿ ಚಿಂತನೆಯ ಬೇರುಗಳು

ಪ್ರತಿ ಭಾರತೀಯರ ಎದೆ ಬಡಿತದ ಚೇತನ ಗಾಂಧೀಜಿ:  ಕೈಯಲ್ಲೊಂದು ಕೋಲು ಹಿಡಿದು, ದುಂಡು ಕನ್ನಡಕ ಧರಿಸಿ, ಸತ್ಯ, ಅಹಿಂಸೆಯ ಅಸದಿಂದ…

3 hours ago