ಹನೂರು : ತಾಲ್ಲೂಕಿನ ಚಂಗವಾಡಿ ಗ್ರಾಮದ ನಾಯಕ ಜನಾಂಗದ ಯುವ ಮುಖಂಡರುಗಳು ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷ ತೊರೆದು ಬಿಜೆಪಿ ಜಿಲ್ಲಾ ಒಬಿಸಿ ಸಂಯೋಜಕ ಜನಧ್ವನಿ ಬಿ ವೆಂಕಟೇಶ್ ಅವರ ನೇತೃತ್ವದಲ್ಲಿ ಬಿಜೆಪಿ ಸೇರ್ಪಡೆಗೊಂಡರು.
ಇದೇ ಸಂದರ್ಭದಲ್ಲಿ ಯುವ ಮುಖಂಡ ಮಣಿ ಕಂಠ ಮಾತನಾಡಿ ಈ ದೇಶದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಭ್ರಷ್ಟಾಚಾರ ಮುಕ್ತ ಆಡಳಿತ, ಹಾಗೂ ರಾಜ್ಯದಲ್ಲಿ ಮುಖ್ಯ ಮಂತ್ರಿಗಳಾದ ಬಸವರಾಜ ಬೊಮ್ಮಾಯಿ ರವರು ಜನಪರ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಉತ್ತಮ ಆಡಳಿತ ನಡೆಸುತ್ತಿದ್ದಾರೆ. ದೀನ ದಲಿತರ ಅಲ್ಪಸಂಖ್ಯಾತರ ಏಳಿಗೆಗೆ ಸದಾ ಶ್ರಮಿಸುತ್ತಿದ್ದಾರೆ. ಇದೇ ನಿಟ್ಟಿನಲ್ಲಿ ಜನ ಧ್ವನಿ ಬಿ ವೆಂಕಟೇಶ್ ಅವರು ಹನೂರು ವಿಧಾನಸಭಾ ಕ್ಷೇತ್ರದಲ್ಲಿ ಋಣ ಸಂದಾಯ ಕಣ್ಣಿನ ಶಿಬಿರ, ಆರೋಗ್ಯ ಶಿಬಿರ, ಕುಡಿಯುವ ನೀರು, ಪಡಿತರ ಪೂರೈಕೆ ಸೇರಿದಂತೆ ಹತ್ತು ಹಲವು ಜನಪರ ಕಾರ್ಯಕ್ರಮಗಳನ್ನು ಹಮ್ಮಿ ಕೊಂಡಿರುವುದರಿಂದ ಇವರ ಕಾರ್ಯವೈಖರಿಯನ್ನು ಮೆಚ್ಚಿ ಪಕ್ಷ ಸೇರ್ಪಡೆಗೊಂಡಿದ್ದೇವೆ. ಮುಂದಿನ ದಿನಗಳಲ್ಲಿ ಬಿಜೆಪಿ ಸಂಘಟನೆಗೆ ಒತ್ತು ನೀಡಿ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಗೆಲ್ಲಿಸುವುದೇ ನಮ್ಮ ಗುರಿ ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ಹತ್ತಕ್ಕೂ ಹೆಚ್ಚು ಯುವ ಮುಖಂಡರುಗಳು ಬಿಜೆಪಿ ಸೇರ್ಪಡೆಗೊಂಡರು.
ಮೈಸೂರು: ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್…
ಮಹಾದೇಶ್ ಎಂ ಗೌಡ ಹನೂರು: ಅಂತರ ರಾಜ್ಯ ನೆರೆಯ ತಮಿಳುನಾಡಿಗೆ ಸಂಪರ್ಕ ಕಲ್ಪಿಸುವ ರಾಮಾಪುರ ರಸ್ತೆಯಲ್ಲಿ ನಿತ್ಯ ಗಜರಾಜ ಎಂಟ್ರಿ…
ಬೆಂಗಳೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಚಿತಾವಣೆಯಿಂದ ಬಳ್ಳಾರಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತನ ಹೆಣ ಬಿದ್ದಿದೆ ಎಂದು ಹೇಳಿಕೆ…
ಬೆಂಗಳೂರು: ನಾಯಕತ್ವ ಬದಲಾವಣೆ ಚರ್ಚೆಗೆ ಹೈಕಮಾಂಡ್ ಸ್ಪಷ್ಟನೆ ಕೊಡಬೇಕು ಎಂದು ಮಾಜಿ ಸಚಿವ ಕೆ.ಎನ್.ರಾಜಣ್ಣ ಒತ್ತಾಯಿಸಿದ್ದಾರೆ. ಜನವರಿ.16ಕ್ಕೆ ಸಿಹಿಸುದ್ದಿ ಬರಲಿದೆ…
ಹಾಸನ: ಪತಿ ಎರಡನೇ ಮದುವೆಯಾಗಿದ್ದನ್ನು ಪ್ರಶ್ನಿಸಿದ್ದಕ್ಕೆ ಮೊದಲ ಪತ್ನಿಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಆಲೂರು ತಾಲ್ಲೂಕಿನ ಯಡೂರು ಗ್ರಾಮದಲ್ಲಿ…
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಪತ್ನಿ ವಿರುದ್ಧ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರುದಾರ ಸ್ನೇಹಮಯಿ ಕೃಷ್ಣ…