ಜಿಲ್ಲೆಗಳು

ಜನಧ್ವನಿ ಬಿ.ವೆಂಕಟೇಶ್ ನೇತೃತ್ವದಲ್ಲಿ ಬಿಜೆಪಿ ಪಕ್ಷಕ್ಕೆ ಹಲವರ ಸೇರ್ಪಡೆ

ಹನೂರು :ತಾಲೂಕಿನ ದಿನಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ದೊರೆ ದೊಡ್ಡಿ ಗ್ರಾಮದ ಯುವ ಮುಖಂಡರುಗಳು ಜನಧ್ವನಿ ಬಿ ವೆಂಕಟೇಶ್ ಅವರ ನೇತೃತ್ವದಲ್ಲಿ ಬಿಜೆಪಿ ಸೇರ್ಪಡೆಗೊಂಡರು.

ಈ ಸಂದರ್ಭದಲ್ಲಿ ಯುವ ಮುಖಂಡ ರಮೇಶ್ ನಾಯ್ಕ ಮಾತನಾಡಿ ಜನ ಧ್ವನಿ ಬಿ ವೆಂಕಟೇಶ್ ರವರು ಹನೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಹಲವು ಜನಪರ ಕಾರ್ಯಕ್ರಮಗಳನ್ನು ಹಮ್ಮಿಕೊಂಡು, ಕೈಲಾಗದವರಿಗೆ, ಹಿಂದುಳಿದ ವರ್ಗದ ಸಮಾಜದವರಿಗೆ ನೆರವು ನೀಡುತ್ತಿದ್ದಾರೆ.

ನೂರಕ್ಕೂ ಹೆಚ್ಚು ಕಣ್ಣಿನ ತಪಾಸಣಾ ಶಿಬಿರಗಳನ್ನು ಹಮ್ಮಿಕೊಳ್ಳುವ ಮೂಲಕ ಬಡವರಿಗೆ ನೆರವಾಗಿದ್ದಾರೆ, ನಿರುದ್ಯೋಗಿಗಳಿಗೆ ಉದ್ಯೋಗ ಕೊಡಿಸುವ ನಿಟ್ಟಿನಲ್ಲಿ ಬೃಹತ್ ಉದ್ಯೋಗ ಮೇಳ ಆಯೋಜಿಸಿ ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಉದ್ಯೋಗ ಕಲ್ಪಿಸಿದ್ದಾರೆ. ಕುಡಿಯುವ ನೀರಿನ ಸಮಸ್ಯೆ ಇರುವ ಗ್ರಾಮಗಳಿಗೆ ಸ್ವಂತ ಹಣದಿಂದ ಬೋರ್ವೆಲ್ ಕೊರೆಸಿದ್ದಾರೆ ಇವರ ಜನಪ್ರಿಯತೆ ನೋಡಿ ಬಿಜೆಪಿ ಸೇರ್ಪಡೆಯಾಗುತ್ತಿದ್ದೇವೆ ಎಂದು ಸಂತಸ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಮುಖಂಡರುಗಳಾದ ಗಣೇಶ್ ನಾಯ್ಕ ಸಿದ್ದರಾಜು ನಾಯ್ಕ ಕೃಷ್ಣನಾಯ್ಕ ಸೇರಿದಂತೆ ಇನ್ನಿತರರು ಹಾಜರಿದ್ದರು

andolanait

Recent Posts

ಇನ್ಮುಂದೆ ಭೀಮನ ಹತ್ತಿರ ಹೋಗಿ ವೀಡಿಯೋ, ಫೋಟೋ ತೆಗೆದರೆ ಬೀಳುತ್ತೆ ಕೇಸ್‌

ಹಾಸನ: ಹಾಸನ ಜಿಲ್ಲೆಯ ಮಲೆನಾಡು ಭಾಗದ ಗ್ರಾಮಗಳಿಗೆ ಕಾಡಾನೆ ಭೀಮು ಎಂಟ್ರಿ ಕೊಡುತ್ತಿದೆ. ಶಾಂತ ಸ್ವಭಾವದ ಭೀಮನನ್ನು ನೋಡಲು ಜನರು…

26 mins ago

ಕೇರಳ ಸಿಎಂ ಪಿಣರಾಯಿ ವಿಜಯನ್‌ಗೆ ಡಿಸಿಎಂ ಡಿ.ಕೆ.ಶಿವಕುಮಾರ್‌ ತಿರುಗೇಟು

ಬೆಂಗಳೂರು: ಇಲ್ಲಿನ ಯಲಹಂಕ, ಫಕೀರ್‌ ಕಾಲೋನಿ ಹಾಗೂ ವಸೀಮ್‌ ಲೇಔಟ್‌ನಲ್ಲಿರುವ ಮುಸ್ಲಿಂ ವಸತಿಗಳ ತೆರವು ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಬುಲ್ಡೋಜರ್‌…

53 mins ago

ಪೈರಸಿ ಬಗ್ಗೆ ಮತ್ತೊಮ್ಮೆ ಖಡಕ್‌ ಪ್ರತಿಕ್ರಿಯೆ ನೀಡಿದ ಕಿಚ್ಚ ಸುದೀಪ್‌

ಬೆಂಗಳೂರು: ನಟ ಕಿಚ್ಚ ಸುದೀಪ್‌ ಅಭಿನಯದ ಮಾರ್ಕ್‌ ರಾಜ್ಯಾದ್ಯಂತ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಈ ನಡುವೆ ಮಾರ್ಕ್‌ ಚಿತ್ರಕ್ಕೂ ಪೈರಸಿ…

1 hour ago

ಜೆಡಿಎಸ್‌ ಜೊತೆ ಮೈತ್ರಿ ವಿಚಾರ: ವರಿಷ್ಠರ ತೀರ್ಮಾನಕ್ಕೆ ಬದ್ಧ ಎಂದ ವಿಜಯೇಂದ್ರ

ಬೆಂಗಳೂರು: ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಬಿಜೆಪಿ ಜೊತೆ ಜೆಡಿಎಸ್‌ ಮೈತ್ರಿ ಕಷ್ಟ ಎಂದು ಮಾಜಿ ಎಚ್‌ಡಿಡಿ ಹೇಳಿಕೆ ಕುರಿತು ಬಿಜೆಪಿ…

2 hours ago

ಹೆಸರುಘಟ್ಟ ನೈಸರ್ಗಿಕ ಹುಲ್ಲುಗಾವಲು ಸಂರಕ್ಷಣೆಗೆ ಈಶ್ವರ ಖಂಡ್ರೆ ಸೂಚನೆ

ಬೆಂಗಳೂರು: ಸರ್ಕಾರ ಕೆಲವು ತಿಂಗಳ ಹಿಂದೆ ಸಂರಕ್ಷಿತ ಹುಲ್ಲುಗಾವಲು ಎಂದು ಘೋಷಿಸಿರುವ ಹೆಸರುಘಟ್ಟ ಕೆರೆ ಸೇರಿದಂತೆ 5678 ಎಕರೆ ಹುಲ್ಲುಗಾವಲು…

3 hours ago

ಕಾಸರಗೋಡು| ಹಳಿ ದಾಟುವಾಗ ರೈಲು ರಿಕ್ಕಿ: ಕೊಡಗು ಮೂಲದ ಯುವಕ ಸಾವು

ಕಾಸರಗೋಡು: ಹಳಿ ದಾಟುವಾಗ ಯುವಕ ಸಾವನ್ನಪ್ಪಿರುವ ಘಟನೆ ಕಾಸರಗೋಡು ನಿಲ್ದಾಣದಲ್ಲಿ ನಡೆದಿದೆ. ಕೊಡಗು ಜಿಲ್ಲೆ ಗೋಣಿಮಾಗೂರಿನ ಸೋಮವಾರಪುರದ ಚೆನ್ನಯ್ಯ ಅವರ…

3 hours ago