Mysore
30
overcast clouds

Social Media

ಗುರುವಾರ, 01 ಅಕ್ಟೋಬರ್ 2026
Light
Dark

ಜನ ಸಂಕಲ್ಪಕ್ಕೆ ಅಭೂತಪೂರ್ವ ಬೆಂಬಲ : ಸಿಎಂ ಬೊಮ್ಮಾಯಿ

ಹುಬ್ಬಳ್ಳಿ: ರಾಜ್ಯದಲ್ಲಿ ಬಿಜೆಪಿಯ ಜನ ಸಂಕಲ್ಪ ಯಾತ್ರೆಗೆ ಅಭೂತಪೂರ್ವ ಬೆಂಬಲ ಸಿಗುತ್ತಿದೆ. ಡಿಸೆಂಬರ್‌ನಲ್ಲಿ ಯಾತ್ರೆಯನ್ನು ಮತ್ತಷ್ಟು ತೀವ್ರಗೊಳಿಸಿ ಜನರ ವಿಶ್ವಾಸ ಪಡೆಯುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ನಗರದ ವಿಮಾನ ನಿಲ್ದಾಣದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣಾ ವರ್ಷವಾಗಿರುವುದರಿಂದ ಯಾತ್ರೆಯೊಂದಿಗೆ  ಜನರ ಬಳಿಗೆ ಹೋಗುತ್ತಿದ್ದೇವೆ. ನಮ್ಮ ಜನ ಸಂಕಲ್ಪ ಯಾತ್ರೆಯು ಈಗಾಗಲೇ ಹೈದರಾಬಾದ್ ಕರ್ನಾಟಕ, ಮಧ್ಯ ಕರ್ನಾಟಕ ಹಾಗೂ ಮುಂಬೈ ಕರ್ನಾಟಕ ಭಾಗದಲ್ಲಿ ನಡೆದಿದೆ. ಜನರಿಂದಲೂ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ ಎಂದರು.
ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರದ ಯೋಜನೆಗಳನ್ನು ಜನರಿಗೆ ತಲುಪಿಸಿ, ಜನರ ವಿಶ್ವಾಸ ಗಳಿಸುವ ಕೆಲಸ ಮಾಡುತ್ತೇವೆ ಎಂದು ತಿಳಿಸಿದರು.
ಶಿರಾಳಕೊಪ್ಪದಲ್ಲಿ ಗೋಡೆಗಳ ಮೇಲೆ ಜಾಯಿನ್ ಪಿಎಫ್‌ಐ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ ಬೊಮ್ಮಾಯಿ, ಈ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದು, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಿದ್ದಾರೆ ಎಂದರು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!