ಹುಬ್ಬಳ್ಳಿ: ರಾಜ್ಯದಲ್ಲಿ ಬಿಜೆಪಿಯ ಜನ ಸಂಕಲ್ಪ ಯಾತ್ರೆಗೆ ಅಭೂತಪೂರ್ವ ಬೆಂಬಲ ಸಿಗುತ್ತಿದೆ. ಡಿಸೆಂಬರ್‌ನಲ್ಲಿ ಯಾತ್ರೆಯನ್ನು ಮತ್ತಷ್ಟು ತೀವ್ರಗೊಳಿಸಿ ಜನರ ವಿಶ್ವಾಸ ಪಡೆಯುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ನಗರದ ವಿಮಾನ ನಿಲ್ದಾಣದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣಾ ವರ್ಷವಾಗಿರುವುದರಿಂದ ಯಾತ್ರೆಯೊಂದಿಗೆ ಜನರ ಬಳಿಗೆ ಹೋಗುತ್ತಿದ್ದೇವೆ. ನಮ್ಮ ಜನ ಸಂಕಲ್ಪ ಯಾತ್ರೆಯು ಈಗಾಗಲೇ ಹೈದರಾಬಾದ್ ಕರ್ನಾಟಕ, ಮಧ್ಯ ಕರ್ನಾಟಕ ಹಾಗೂ ಮುಂಬೈ ಕರ್ನಾಟಕ ಭಾಗದಲ್ಲಿ ನಡೆದಿದೆ. ಜನರಿಂದಲೂ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ ಎಂದರು.
ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರದ ಯೋಜನೆಗಳನ್ನು ಜನರಿಗೆ ತಲುಪಿಸಿ, ಜನರ ವಿಶ್ವಾಸ ಗಳಿಸುವ ಕೆಲಸ ಮಾಡುತ್ತೇವೆ ಎಂದು ತಿಳಿಸಿದರು.
ಶಿರಾಳಕೊಪ್ಪದಲ್ಲಿ ಗೋಡೆಗಳ ಮೇಲೆ ಜಾಯಿನ್ ಪಿಎಫ್‌ಐ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ ಬೊಮ್ಮಾಯಿ, ಈ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದು, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಿದ್ದಾರೆ ಎಂದರು.
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…
ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…
ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…
ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…
ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…