ಮಂಡ್ಯ: ಕೇಂದ್ರ ಗೃಹ ಸಚಿವ ಅಮಿತ್ ಶಾ ನೇತೃತ್ವದಲ್ಲಿ ಡಿ.30ರಂದು ನಗರದಲ್ಲಿ ಜನಸಂಕಲ್ಪಯಾತ್ರೆ ಮತ್ತು ಕಾರ್ಯಕರ್ತರ ಬೃಹತ್ ಸಮಾವೇಶ ನಡೆಯಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ ತಿಳಿಸಿದರು.
ಎಂಟತ್ತು ದಿನಗಳ ಹಿಂದೆ ಮದ್ದೂರು ಮತ್ತು ಪಾಂಡವಪುರದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರ ನೇತೃತ್ವದಲ್ಲಿ ಮೊದಲ ಹಂತದ ಜನಸಂಕಲ್ಪ ಯಾತ್ರೆ ನಡೆದಿತ್ತು. ಇದೀಗ 2ನೇ ಹಂತದ ಯಾತ್ರೆಗೆ ಅಮಿತ್ ಶಾ ಅವರೇ ಆಗಮಿಸುತ್ತಿದ್ದಾರೆ ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಅವರು ಹೇಳಿದರು.
ನಗರದ ವಿಶ್ವವಿದ್ಯಾನಿಲಯದ ಆವರಣದಲ್ಲಿ ಅಂದು ಮಧ್ಯಾಹ್ನ 1 ಗಂಟೆಗೆ ಆರಂಭಗೊಳ್ಳಲಿರುವ ಸಮಾವೇಶಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ನಳೀನ್‌ಕುಮಾರ್ ಕಟೀಲು, ಸಚಿವರಾದ ಡಾ.ಸಿ.ಎನ್.ಅಶ್ವತ್ಥನಾರಾಯಣ, ಆರ್.ಅಶೋಕ್, ಎಸ್.ಟಿ.ಸೋಮಶೇಖರ್, ವಿ.ಸೋಮಣ್ಣ ಸೇರಿದಂತೆ ಸಂಪುಟದ ಹಲವು ಸಚಿವರು ಆಗಮಿಸುವರು ಎಂದು ತಿಳಿಸಿದರು.
ಒಂದು ಲಕ್ಷಕ್ಕೂ ಹೆಚ್ಚು ಮಂದಿ ಬಿಜೆಪಿ ಕಾರ್ಯಕರ್ತರು ಸೇರುವ ನಿರೀಕ್ಷೆಯಿದೆ. ಹಳೇ ಮೈಸೂರು ಭಾಗದ ಎಲ್ಲ ಜಿಲ್ಲೆಗಳಿಂದಲೂ ಪಕ್ಷದ ಪದಾಧಿಕಾರಿಗಳು, ಮುಖಂಡರು ಮತ್ತು ಕಾರ್ಯಕರ್ತರು ಭಾಗವಹಿಸುವರು. ಯಾತ್ರೆಯನ್ನು ಯಶಸ್ವಿಗೊಳಿಸಲು ಬಿಜೆಪಿ ವಿವಿಧ ಮೋರ್ಚಾಗಳು, ಮಂಡಲಗಳ ಪದಾಧಿಕಾರಿಗಳಿಗೆ ಜವಾಬ್ದಾರಿ ನೀಡಲಾಗಿದೆ ಎಂದರು.
ಜನಸಂಕಲ್ಪ ಯಾತ್ರೆಯ ಜತೆಗೆ ಮದ್ದೂರು ತಾಲ್ಲೂಕು ಗೆಜ್ಜಲಗೆರೆ ಮನ್‌ಮುಲ್ ಆವರಣದಲ್ಲಿ ನಿರ್ಮಿಸಿರುವ ಮೆಗಾ ಡೇರಿಯನ್ನು ಕೇಂದ್ರದ ಸಹಕಾರ ಸಚಿವ ಅಮಿತ್ ಶಾ ಅವರು ಲೋಕಾರ್ಪಣೆ ಮಾಡುವರು. ಇದಕ್ಕೂ ಎಲ್ಲ ತಯಾರಿ ನಡೆಯುತ್ತಿದೆ ಎಂದು ಹೇಳಿದರು
ಟೆಹರಾನ್: ಇರಾನ್ ಮೇಲೆ ಜಂಟಿಯಾಗಿ ಇಸ್ರೇಲ್ ಮತ್ತು ಅಮೇರಿಕಾ ದಾಳಿ ನಡೆಸಿದೆ. ದಾಳಿಯ ಪರಿಣಾಮ ಇರಾನ್ ದೇಶದ ಸರ್ವೋಚ್ಚ ನಾಯಕ…
ಮೈಸೂರು ರೈಲು ನಿಲ್ದಾಣದಲ್ಲಿ ದಿನದ ೨೪ ಗಂಟೆಯೂ ಕಾರ್ಯನಿರ್ವಹಿಸುವ ಪ್ರೀಪೇಯ್ಡ್ ಆಟೋ ಕೌಂಟರ್ ಇಲ್ಲದೆ ಬೆಳಗಿನ ಜಾವ ಬೇರೆ ಊರುಗಳಿಂದ…
ಕೇಂದ್ರೀಯ ಪಠ್ಯಕ್ರಮದ (ಎನ್ ಸಿಇಆರ್ ಟಿ) ೮ನೇ ತರಗತಿಯ ಪಠ್ಯ ಪುಸ್ತಕದಲ್ಲಿ ನಮ್ಮ ದೇಶದ ನ್ಯಾಯಾಂಗ ವ್ಯವಸ್ಥೆಯಲ್ಲೂ ಭ್ರಷ್ಟಾಚಾರ ಇದೆ…
ನಂಜನಗೂಡು ತಾಲ್ಲೂಕಿನ ಬದನವಾಳು ಗ್ರಾಮದ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ ಡಾ.ಬಿ .ಆರ್.ಅಂಬೇಡ್ಕರ್ ಸಮುದಾಯ ಭವನವನ್ನು ಅಂದಿನ ಸಚಿವರಾಗಿದ್ದ ಶ್ರೀನಿವಾಸ ಪ್ರಸಾದ್…
ಸರಗೂರು ತಾಲ್ಲೂಕಿನ ಮುಳ್ಳೂರು, ಚಾಮಲಾಪುರ, ಕುಂದೂರು, ಕಲ್ಲಂಬಾಳು, ನಂಜೀಪುರ, ಕಟ್ಟೆಹುಣಸೂರು ಈ ಗ್ರಾಮಗಳ ಮಾರ್ಗವಾಗಿ ಹೆಚ್ಚಿನ ಸರ್ಕಾರಿ ಬಸ್ಸುಗಳ ಸಂಚಾರವಿಲ್ಲದೆ…
ವಿವಾದಾಸ್ಪದ ‘ದಿ ಕೇರಳ ಸ್ಟೋರಿ-೨ ಗೋಸ್ ಬಿಯಾಂಡ್’ ಚಲನಚಿತ್ರ ಪ್ರದರ್ಶನಕ್ಕೆ ಕೇರಳದ ಹೈಕೋರ್ಟ್‌ನ ವಿಭಾಗೀಯ ಪೀಠ ಶುಕ್ರವಾರ ಹಸಿರು ನಿಶಾನೆ…