ಜಿಲ್ಲೆಗಳು

30ರಂದು ಅಮಿತ್ ಶಾ ನೇತೃತ್ವದಲ್ಲಿ ಜನಸಂಕಲ್ಪ ಯಾತ್ರೆ

ಮಂಡ್ಯ: ಕೇಂದ್ರ ಗೃಹ ಸಚಿವ ಅಮಿತ್ ಶಾ ನೇತೃತ್ವದಲ್ಲಿ ಡಿ.30ರಂದು ನಗರದಲ್ಲಿ ಜನಸಂಕಲ್ಪಯಾತ್ರೆ ಮತ್ತು ಕಾರ್ಯಕರ್ತರ ಬೃಹತ್ ಸಮಾವೇಶ ನಡೆಯಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ ತಿಳಿಸಿದರು.

ಎಂಟತ್ತು ದಿನಗಳ ಹಿಂದೆ ಮದ್ದೂರು ಮತ್ತು ಪಾಂಡವಪುರದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರ ನೇತೃತ್ವದಲ್ಲಿ ಮೊದಲ ಹಂತದ ಜನಸಂಕಲ್ಪ ಯಾತ್ರೆ ನಡೆದಿತ್ತು. ಇದೀಗ 2ನೇ ಹಂತದ ಯಾತ್ರೆಗೆ ಅಮಿತ್ ಶಾ ಅವರೇ ಆಗಮಿಸುತ್ತಿದ್ದಾರೆ ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಅವರು ಹೇಳಿದರು.

ನಗರದ ವಿಶ್ವವಿದ್ಯಾನಿಲಯದ ಆವರಣದಲ್ಲಿ ಅಂದು ಮಧ್ಯಾಹ್ನ 1 ಗಂಟೆಗೆ ಆರಂಭಗೊಳ್ಳಲಿರುವ ಸಮಾವೇಶಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ನಳೀನ್‌ಕುಮಾರ್ ಕಟೀಲು, ಸಚಿವರಾದ ಡಾ.ಸಿ.ಎನ್.ಅಶ್ವತ್ಥನಾರಾಯಣ, ಆರ್.ಅಶೋಕ್, ಎಸ್.ಟಿ.ಸೋಮಶೇಖರ್, ವಿ.ಸೋಮಣ್ಣ ಸೇರಿದಂತೆ ಸಂಪುಟದ ಹಲವು ಸಚಿವರು ಆಗಮಿಸುವರು ಎಂದು ತಿಳಿಸಿದರು.

ಒಂದು ಲಕ್ಷಕ್ಕೂ ಹೆಚ್ಚು ಮಂದಿ ಬಿಜೆಪಿ ಕಾರ್ಯಕರ್ತರು ಸೇರುವ ನಿರೀಕ್ಷೆಯಿದೆ. ಹಳೇ ಮೈಸೂರು ಭಾಗದ ಎಲ್ಲ ಜಿಲ್ಲೆಗಳಿಂದಲೂ ಪಕ್ಷದ ಪದಾಧಿಕಾರಿಗಳು, ಮುಖಂಡರು ಮತ್ತು ಕಾರ್ಯಕರ್ತರು ಭಾಗವಹಿಸುವರು. ಯಾತ್ರೆಯನ್ನು ಯಶಸ್ವಿಗೊಳಿಸಲು ಬಿಜೆಪಿ ವಿವಿಧ ಮೋರ್ಚಾಗಳು, ಮಂಡಲಗಳ ಪದಾಧಿಕಾರಿಗಳಿಗೆ ಜವಾಬ್ದಾರಿ ನೀಡಲಾಗಿದೆ ಎಂದರು.
ಜನಸಂಕಲ್ಪ ಯಾತ್ರೆಯ  ಜತೆಗೆ ಮದ್ದೂರು ತಾಲ್ಲೂಕು ಗೆಜ್ಜಲಗೆರೆ ಮನ್‌ಮುಲ್ ಆವರಣದಲ್ಲಿ ನಿರ್ಮಿಸಿರುವ ಮೆಗಾ ಡೇರಿಯನ್ನು ಕೇಂದ್ರದ ಸಹಕಾರ ಸಚಿವ ಅಮಿತ್ ಶಾ ಅವರು ಲೋಕಾರ್ಪಣೆ ಮಾಡುವರು. ಇದಕ್ಕೂ ಎಲ್ಲ ತಯಾರಿ ನಡೆಯುತ್ತಿದೆ ಎಂದು ಹೇಳಿದರು

andolanait

Recent Posts

ಹನೂರು | ಮಳೆಯ ನೀರಿನಲ್ಲಿ ಕೊಚ್ಚಿ ಹೋಗಿ ಕಾರ್ಮಿಕ ಸಾವು

ಹನೂರು : ಕೆಲಸಕ್ಕೆ ಹೋಗಿ ವಾಪಸ್ ಬರುವಾಗ ಮಳೆಯ ನೀರಿನಲ್ಲಿ ಕೊಚ್ಚಿ ಹೋಗಿ ಗಾರೆ ಕಾರ್ಮಿಕರೊಬ್ಬರು ಮೃತಪಟ್ಟಿರುವ ಘಟನೆ ಹನೂರು…

15 seconds ago

ಗ್ರಾಮದ ಸ್ವಚ್ಛತೆ ನೋಡಿಕೊಳ್ಳುವವರೇ ಅನೈರ್ಮಲ್ಯಕ್ಕೆ ಕಾರಣ?

ನಂಜನಗೂಡು : ಗ್ರಾಮದ ಸ್ವಚ್ಛತೆಯ ಜವಾಬ್ದಾರಿ ಹೊತ್ತವರೇ ಪಂಚಾಯಿತಿ ಆವರಣವನ್ನೆ ಮೂತ್ರಾಲಯವಾಗಿಸಿ ಅನೈರ್ಮಲ್ಯಕ್ಕೆ ಕಾರಣರಾದರೆ ಬೇರೆಯವರಿಗೆ ಸ್ವಚ್ಚತೆ ಕಾಪಾಡುವ ಬಗ್ಗೆ…

1 hour ago

ಮಹಾಪ್ರವಾಹಕ್ಕೆ ನೇಪಾಳ ತತ್ತರ: ನಾಪತ್ತೆಯಾದವರ ಸಂಖ್ಯೆ 6100ಕ್ಕೆ ಏರಿಕೆ

ಕಠ್ಮಂಡು: ಮಹಾ ಪ್ರವಾಹಕ್ಕೆ ನೇಪಾಳ ತತ್ತರಿಸಿದೆ. ಪ್ರವಾಹ ಹಾಗೂ ಭೂಕುಸಿತದಿಂದ ನಾಪತ್ತೆಯಾದವರ ಸಂಖ್ಯೆ 6,100ಕ್ಕೆ ಏರಿಕೆಯಾಗಿದೆ. ಇದೀಗ ಹೈಡ್ರೋ ಪವರ್…

7 hours ago

ಓದುಗರ ಪತ್ರ: ಇನ್ಸ್‌ಪೆಕ್ಟರ್ ಧನಂಜಯರ ಹೇಳಿಕೆಯಲ್ಲಿ ತಪ್ಪಿಲ್ಲ

ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…

14 hours ago

ಓದುಗರ ಪತ್ರ: ದಸರಾ ಬಂದಾಗ ಮಾತ್ರ ಮೈಸೂರಿಗೆ ಸಿಂಗಾರ

ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…

14 hours ago

ಓದುಗರ ಪತ್ರ: ತ್ಯಾಜ್ಯದಿಂದ ವಿದ್ಯುತ್ ಉತ್ಪಾದನೆ ಕಡ್ಡಾಯವಾಗಲಿ

ರಾಜ್ಯದ ನಗರ ಪ್ರದೇಶಗಳಲ್ಲಿ ದಿನಂಪ್ರತಿ ಶೇ.೭೦ ಕ್ಕೂ ಹೆಚ್ಚು ಹಸಿ ತ್ಯಾಜ್ಯ ಸೃಷ್ಟಿಯಾಗುತ್ತಿದೆ. ಈ ತ್ಯಾಜ್ಯವನ್ನು ಸುಮ್ಮನೆ ಸುರಿಯುವ ಬದಲು…

14 hours ago