Mysore
18
clear sky

Social Media

ಸೋಮವಾರ, 29 ಡಿಸೆಂಬರ್ 2025
Light
Dark

ಜಾ.ದಳ ತೊರೆದು ಕಾಂಗ್ರೆಸ್ ಗೆ ಸೇರ್ಪಡೆ

ಹನೂರು : ಕಳೆದ 15 ವರ್ಷಗಳಿಂದ ಶಾಸಕನಾಗಿ ನಿಮ್ಮ ಸೇವೆ ಮಾಡುತ್ತಾ ಬಂದಿದ್ದೇನೆ, ಮುಂದಿನ ದಿನಗಳಲ್ಲಿಯೂ ನಿಮ್ಮ ಸೇವೆ ಮಾಡಲು ನಿಮ್ಮೆಲ್ಲರ ಸಹಕಾರ ಅಗತ್ಯ ಎಂದು ಶಾಸಕ ಆರ್ ನರೇಂದ್ರ ತಿಳಿಸಿದರು.

ಪಟ್ಟಣದ ಕಾಂಗ್ರೆಸ್ ಕಚೇರಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಹನೂರು ಕ್ಷೇತ್ರಕ್ಕೆ ನಾಲ್ಕು ಸಾವಿರ ಕೋಟಿ ಅನುದಾನ ತಂದು ಸಮುದಾಯ ಭವನ, ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣ, ಬಹುಗ್ರಾಮ ಕುಡಿಯುವ ನೀರಿನ ಯೋಜನೆ, ಕೆರೆ ತುಂಬಿಸುವ ಯೋಜನೆ ಕೇಶಿಫ್ ಯೋಜನೆ ಸೇರಿದಂತೆ ಹತ್ತಾರು ಬೃಹತ್ ಕಾಮಗಾರಿಗಳಿಗೆ ಅನುದಾನದ ತಂದು ಕೆಲವು ಕಾಮಗಾರಿಗಳು ಮುಗಿದಿದ್ದು ಇನ್ನೂ ಕೆಲವು ಕಾಮಗಾರಿಗಳು ಪ್ರಗತಿಯಲ್ಲಿವೆ ಉಳಿದಿರುವ ಕಾಮಗಾರಿಗಳನ್ನು ಮುಗಿಸಲು ಕ್ಷೇತ್ರದ ಮತದಾರರು ನನ್ನ ಕೈ ಬಲ ಪಡಿಸಬೇಕೆಂದು ಮನವಿ ಮಾಡಿದರು.

ನಮ್ಮ ಮನೆತನ ಹಾಗೂ ನಮ್ಮ ಅಭಿವೃದ್ಧಿ ಕಾರ್ಯಗಳನ್ನು ಮೆಚ್ಚಿ ಜಾದಳ ಪಕ್ಷದಿಂದ ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗುತ್ತಿರುವುದು ಸಂತಸದ ವಿಚಾರ. ಮುಂದಿನ ದಿನಗಳಲ್ಲಿ ಸ್ಥಳೀಯ ನಾಯಕರಲ್ಲಿ ಭಿನ್ನಾಭಿಪ್ರಾಯ ಉಂಟಾಗಿ ಪಕ್ಷ ತೊರೆದಿದ್ದಾರೆ ಮುಂದಿನ ದಿನಗಳಲ್ಲಿ ಅವರನ್ನು ಸಹ ಪಕ್ಷಕ್ಕೆ ಕರೆತರುವ ನಿಟ್ಟಿನಲ್ಲಿ ಕ್ರಮವಹಿಸಿ ಸಂಘಟನೆಗೆ ಹೊತ್ತು ನೀಡಲಾಗುವುದು ಎಂದು ತಿಳಿಸಿದರು.

ಗಾಜನೂರು ಸಮೀಪದ ಕರಿ ಬೇವಿನ ದೊಡ್ಡಿ ಗ್ರಾಮದ ಮುಖಂಡರುಗಳಾದ ದೊಡ್ಡ ಮರಿ ಗೌಡ, ಗೋವಿಂದ, ಮಾದೇಗೌಡ, ಪೂಜಾರಿಗೌಡ, ಭದ್ರೆಗೌಡ, ಪಳನಿಯಪ್ಪ, ಜೋಗಿ ಗೌಡ, ಮಹದೇವ ತಂಬಡಿ, ಕೃಷ್ಣಮೂರ್ತಿ, ಶಿವರಾಜು, ರವಿಕುಮಾರ್, ವೆಂಕಟರಾಜು, ಸಿದ್ದು, ಕೃಷ್ಣೇಗೌಡ, ಬಸವಣ್ಣ ವೆಂಟರಾಜು, ಮುರುಗೇಶ್ ಜಾದಳ ತೊರೆದು ಕಾಂಗ್ರೆಸ್ ಸೇರ್ಪಡೆಗೊಂಡರು.

ಈ ಸಂದರ್ಭದಲ್ಲಿ ಪಪಂ ಉಪಾಧ್ಯಕ್ಷ ಗಿರೀಶ್, ಜಿಪಂ ಮಾಜಿ ಸದಸ್ಯ ಬಸವರಾಜು, ದಿನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಮುರುಗೇಶ್ ಮುಖಂಡರಾದ ಮಾದೇಶ್, ಉದ್ದನೂರು ಸಿದ್ದರಾಜು, ರಾಜು, ರಾಜೇಶ್ ಇನ್ನಿತರರು ಹಾಜರಿದ್ದರು

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!