ಜಿಲ್ಲೆಗಳು

ವಿಷಜಂತು ನಿವಾರಕನ ನೆರವಿಗೆ ನಿಂತ ಜನಧ್ವನಿ ಬಿ.ವೆಂಕಟೇಶ್

ಹನೂರು: ಮಲೆಮಹದೇಶ್ವರ ಬೆಟ್ಟದ ವಿಷಜಂತು ನಿವಾರಕನಿಗೆ ಬಿಜೆಪಿ ಜಿಲ್ಲಾ ಸಂಯೋಜಕ ಜನಧ್ವನಿ ಬಿ. ವೆಂಕಟೇಶ್ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಿ ಮಾನವೀಯತೆ ಮೆರೆದಿದ್ದಾರೆ.

ಮಲೆ ಮಾದೇಶ್ವರ ಬೆಟ್ಟದ ಕಾಡು ಹೊಲದ ನಿವಾಸಿ ಪುಟ್ಟ ತಂಬಡಿ ರವರು ಕಳೆದ 40 ವರ್ಷಗಳಿಂದ ವಿಷಜಂತುಗಳ ಕಡಿತಕ್ಕೆ ಉಚಿತ ಔಷಧ, ರೋಗಿಗಳಿಗೆ ಹೊಟ್ಟೆ ತುಂಬಾ ಊಟ ಹಾಕಿಸುತ್ತಿದ್ದರು. ಇದುವರೆಗೂ 270 ಮಂದಿಗೆ ಹಾವು ಚೇಳಿನ ಕಡಿತಕ್ಕೆ ಉಚಿತ ಚಿಕಿತ್ಸೆ ಕೊಟ್ಟಿದ್ದು ಎಲ್ಲರೂ ಗುಣಮುಖರಾಗಿ ತೆರಳಿದ್ದಾರೆ.  ಇವರು ಅಗತ್ಯ ನೆರವಿಗೆ ಮೊರೆ ಇಟ್ಟಿದ್ದರು.

ಈ ಸಂಬಂಧ, ಆಗಸ್ಟ್ 13ರಂದು ಆಂದೋಲನ ಪತ್ರಿಕೆಯಲ್ಲಿ “ವಿಷಜಂತು ನಿವಾರಕನಿಗೆ ಬೇಕಿದೆ ನೆರವು ಎಂಬ” ಶೀರ್ಷಿಕೆಯಡಿ ವರದಿ ಪ್ರಕಟಿಸಲಾಗಿತ್ತು.

ಆಂದೋಲನ ಪತ್ರಿಕಾ ವರದಿಗೆ ಸ್ಪಂದಿಸಿದ ಬಿಜೆಪಿ ಜಿಲ್ಲಾ ಸಂಯೋಜಕ ಜನಧ್ವನಿ ವೆಂಕಟೇಶ್ ಅವರು ಮಲೆಮಹದೇಶ್ವರ ಬೆಟ್ಟದ ಪುಟ್ಟ ತಂಬಡಿ ರವರಿಗೆ  50 ಸಾವಿರ ಮೌಲ್ಯದ ಎರಡು ಮಂಚ, ಎರಡು ಹಾಸಿಗೆ  10 ಚೇರ್, ನೆಲಕ್ಕೆ ಟೈಲ್ಸ್ ಗಳನ್ನು ಕೊಡಿಸುವ ಮೂಲಕ ಹನೂರು ವಿಧಾನಸಭಾ ಕ್ಷೇತ್ರದಲ್ಲಿ ಮತ್ತೊಮ್ಮೆ ಮನೆಮಾತಾಗಿದ್ದಾರೆ.

andolanait

Recent Posts

ಓದುಗರ ಪತ್ರ: ರೈಲು ನಿಲ್ದಾಣದಲ್ಲಿ ಪ್ರೀಪೇಯ್ಡ್  ಆಟೋ ಕೌಂಟರ್ ಆರಂಭಿಸಿ

ಮೈಸೂರು ರೈಲು ನಿಲ್ದಾಣದಲ್ಲಿ ದಿನದ ೨೪ ಗಂಟೆಯೂ ಕಾರ್ಯನಿರ್ವಹಿಸುವ ಪ್ರೀಪೇಯ್ಡ್ ಆಟೋ ಕೌಂಟರ್ ಇಲ್ಲದೆ ಬೆಳಗಿನ ಜಾವ ಬೇರೆ ಊರುಗಳಿಂದ…

2 hours ago

ಓದುಗರ ಪತ್ರ: ನ್ಯಾಯಾಂಗದ ಬಗ್ಗೆ ಗೌರವ ಮೂಡಿಸಿ

ಕೇಂದ್ರೀಯ ಪಠ್ಯಕ್ರಮದ (ಎನ್ ಸಿಇಆರ್ ಟಿ) ೮ನೇ ತರಗತಿಯ ಪಠ್ಯ ಪುಸ್ತಕದಲ್ಲಿ ನಮ್ಮ ದೇಶದ ನ್ಯಾಯಾಂಗ ವ್ಯವಸ್ಥೆಯಲ್ಲೂ ಭ್ರಷ್ಟಾಚಾರ ಇದೆ…

2 hours ago

ಓದುಗರ ಪತ್ರ: ಅಂಬೇಡ್ಕರ್ ಸಮುದಾಯ ಭವನ ಅಭಿವೃದ್ಧಿಪಡಿಸಿ

ನಂಜನಗೂಡು ತಾಲ್ಲೂಕಿನ ಬದನವಾಳು ಗ್ರಾಮದ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ ಡಾ.ಬಿ .ಆರ್.ಅಂಬೇಡ್ಕರ್ ಸಮುದಾಯ ಭವನವನ್ನು ಅಂದಿನ ಸಚಿವರಾಗಿದ್ದ ಶ್ರೀನಿವಾಸ ಪ್ರಸಾದ್…

2 hours ago

ಓದುಗರ ಪತ್ರ: ಹೆಚ್ಚಿನ ಬಸ್ ಸೌಲಭ್ಯ ಕಲ್ಪಿಸಿ

ಸರಗೂರು ತಾಲ್ಲೂಕಿನ ಮುಳ್ಳೂರು, ಚಾಮಲಾಪುರ, ಕುಂದೂರು, ಕಲ್ಲಂಬಾಳು, ನಂಜೀಪುರ, ಕಟ್ಟೆಹುಣಸೂರು ಈ ಗ್ರಾಮಗಳ ಮಾರ್ಗವಾಗಿ ಹೆಚ್ಚಿನ ಸರ್ಕಾರಿ ಬಸ್ಸುಗಳ ಸಂಚಾರವಿಲ್ಲದೆ…

2 hours ago

ದಿ ಕೇರಳ ಸ್ಟೋರಿ-2 : ಸತ್ಯ V/S ಅಜೆಂಡಾ..!

ವಿವಾದಾಸ್ಪದ ‘ದಿ ಕೇರಳ ಸ್ಟೋರಿ-೨ ಗೋಸ್ ಬಿಯಾಂಡ್’ ಚಲನಚಿತ್ರ ಪ್ರದರ್ಶನಕ್ಕೆ ಕೇರಳದ ಹೈಕೋರ್ಟ್‌ನ ವಿಭಾಗೀಯ ಪೀಠ ಶುಕ್ರವಾರ ಹಸಿರು ನಿಶಾನೆ…

2 hours ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ: ಕಾವೇರುತ್ತಿರುವ ತಮಿಳುನಾಡು ವಿಧಾನಸಭೆ ಚುನಾವಣೆ

ತಮಿಳುನಾಡಿನಲ್ಲಿ ಬೇಸಿಗೆಯ ಸುಡು ಬಿಸಿಲಿಸಿನ ನಡುವೆ ವಿಧಾನಸಭೆಯ ಚುನಾವಣೆಯ ಕಾವು ದಿನೇ ದಿನೇ ಏರುತ್ತಿದೆ. ಚುನಾವಣೆಯು ಏಪ್ರಿಲ್ ಕೊನೆಯ ವಾರದೊಳಗೆ…

2 hours ago