ಮೈಸೂರು: ಸಂಪ್ರದಾಯದಂತೆ ಅಂಬಾವಿಲಾಸ ಅರಮನೆಯಲ್ಲಿ ಬುಧವಾರ ನಡೆದ ಪಾರಂಪರಿಕ ವಜ್ರಮುಷ್ಠಿ ಕಾಳಗ ಮೈ ನವಿರೇಳುವಂತೆ ಮಾಡಿತು. ಕಾತುರದಿಂದ ಗಂಟೆಗಟ್ಟಲೆ ಕಾದು ಕುಳಿತಿದ್ದವರಿಗೆ ಕಾಳಗವನ್ನು ಕಣ್ತುಂಬಿಕೊಂಡಿದ್ದು 15 ಸೆಕೆಂಡ್ ಮಾತ್ರ !
ರಾಜವಂಶಸ್ಥರಾದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಪಟ್ಟದ ಕತ್ತಿಗೆ ಪೂಜೆ ಸಲ್ಲಿಸಿದ ಕೂಡಲೇ ಕಾಳಗ ಪ್ರಾರಂಭಗೊಂಡಿತು.
ಚನ್ನಪಟ್ಟಣದ ಉಸ್ತಾದ್ ಪುರುಷೋತ್ತಮ್ ಜಟ್ಟಿ ಶಿಷ್ಯ ಮನೋಜ್ ಜಟ್ಟಿ ದುರಾಳಿ ಚಾಮರಾಜನಗರದ ಉಸ್ತಾದ್ ಬಂಗಾರ ಜಟ್ಟಿ ಶಿಷ್ಯ ಅಚ್ಯುತ್ ಜಟ್ಟಿಯ ತಲೆಭಾಗಕ್ಕೆ ವಜ್ರನಖ ದಿಂದ ಹೊಡೆದು ಕ್ಷಣಾರ್ಧದಲ್ಲೇ ರಕ್ತ ಚಿಮ್ಮಿಸುವ ಮೂಲಕ ಮುಕ್ತಾಯಗೊಂಡಿತು.
ಈ ಬಾರಿ ಮೈಸೂರಿನ ಉಸ್ತಾದ್ ಟೈಗರ್ ಬಾಲಾಜಿ ಅವರ ಮಗ ಮೈಸೂರಿನ ವಿಷ್ಣು ಜಟ್ಟಿ ಮತ್ತು ಬೆಂಗಳೂರಿನ ಉಸ್ತಾದ್ ಕೃಷ್ಣ ಶೆಟ್ಟಿ ಶಿಷ್ಯ ತಾರಾನಾಥ ಜೆಟ್ಟಿ ನಡುವೆ ಕಾಳಗ ನಡೆಯಿತು. ಎರಡನೇ ಜೋಡಿಯಾಗಿ ಚಾಮರಾಜನಗರದ ಉಸ್ತಾದ್ ಬಂಗಾರ ಜಟ್ಟಿ ಶಿಷ್ಯ ಅಚ್ಯುತ್ ಜಟ್ಟಿ ಮತ್ತು ಚನ್ನಪಟ್ಟಣದ ಉಸ್ತಾದ್ ಪುರುಷೋತ್ತಮ್ ಜಟ್ಟಿ ಶಿಷ್ಯ ಮನೋಹರ ಜಟ್ಟಿ ನಡುವೆ ಕಾಳಗ ಜರುಗಿತು.ಇದಕ್ಕೂ ಮೊದಲು ನಿಂಬುಜಾದೇವಿ ದೇವಸ್ಥಾನದ ಬಳಿ ಪೂಜೆ ಸಲ್ಲಿಸಿ ಮೆರವಣಿಗೆ ಮೂಲಕ ಜಟ್ಟಿಗಳನ್ನು ಕರೆ ತರಲಾಯಿತು. ಜಟ್ಟಿ ಕಾಳಗ ನಡೆಯುವಾಗ ರಾಜಮನೆತನದ ಕುಟುಂಬದವರು ಹಾಜರಿದ್ದು ವೀಕ್ಷಿಸಿದರು.
ಅಧಿಸೂಚನೆ ಹೊರಡಿಸಿದ ಕೇಂದ್ರ ಸರ್ಕಾರ ಮೈಸೂರು : ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ತಂಬಾಕು ಬೆಳೆಗಾರರ ಸಮಸ್ಯೆಗಳು ಹಾಗೂ ಮಾರಾಟ…
ಮೈಸೂರು : ಮೈಸೂರು ಅರಮನೆ ಮಂಡಳಿ ವತಿಯಿಂದ ಕ್ರಿಸ್‌ಮಸ್ ಹಾಗೂ ಹೊಸವರ್ಷದ ಪ್ರಯುಕ್ತ 10 ದಿನಗಳ ‘ಅರಮನೆ ಫಲಪುಷ್ಪ ಪ್ರದರ್ಶನ’…
ಹಲಗೂರು : ಎತ್ತಿನ ಗಾಡಿ ತೆರಳುತ್ತಿದ್ದ ವೇಳೆ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಎತ್ತು ಸ್ಥಳದಲ್ಲೇ ಮೃತಪಟ್ಟ ಘಟನೆ…
ಹಲಗೂರು : ಇಲ್ಲಿಗೆ ಸಮೀಪದ ಮುತ್ತತ್ತಿ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದ ವೇಳೆ ನೀರಿನ ಸೆಳೆತಕ್ಕೆ ಸಿಲುಕಿ ಯುವಕ ಮೃತಪಟ್ಟಿರುವ ಘಟನೆ…
ಭಾರತೀನಗರ : ಇಲ್ಲಿಗೆ ಸಮೀಪದ ಕೆ.ಶೆಟ್ಟಹಳ್ಳಿ ಗ್ರಾಮದಲ್ಲಿ ಪೊಲೀಸರ ಭದ್ರತೆಯೊಂದಿಗೆ ಗ್ರಾಮದ ಪರಿಶಿಷ್ಟ ಜಾನಾಂಗದ ಮಹಿಳೆಯರು, ಪುರುಷರು ದೇವಾಲಯಗಳಿಗೆ ಪ್ರವೇಶಿಸಿದರು.…
ಮೈಸೂರು : ಅಕ್ರಮವಾಗಿ ವಿದ್ಯುತ್ ಸಂಪರ್ಕ ಪಡೆದಿರುವ ಸಂಬಂಧ ಯಶಸ್ವಿ ಕಾರ್ಯಾಚರಣೆ ನಡೆಸಿದ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ(ಚಾವಿಸನಿನಿ)…