ನಂಜನಗೂಡು, ಚಾಮುಂಡಿ ಬೆಟ್ಟದಲ್ಲಿ ಎಚ್ ಡಿಕೆ ವಿಶೇಷ ಪೂಜೆ
ಮೈಸೂರು: ಜೆಡಿಎಸ್‌ನ ಪಂಚರತ್ನ ಯಾತ್ರೆ ಕೋಲಾರ ಜಿಲ್ಲೆಯ ಮುಳಬಾಗಲು ಪಟ್ಟಣದಿಂದ ಶುಕ್ರವಾರದಿಂದ ಮತ್ತೆ ಚಾಲನೆ ಪಡೆದಿದೆ. ಇದಕ್ಕೂ ಮುನ್ನ ಮಾಜಿ ಮುಖ್ಯಮಂತ್ರಿ ಎಚ್. ಡಿ ಕುಮಾರಸ್ವಾಮಿ ಅವರು ನಂಜನಗೂಡಿನ ಶ್ರೀಕಂಠೇಶ್ವರ ಮತ್ತು ಮೈಸೂರಿನ ಚಾಮುಂಡೇಶ್ವರಿ ದೇಗುಲಗಳಿಗೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ.
ನೀರಾವರಿ ವಿಚಾರವಾಗಿ ತೊಂದರೆಯಾಗಿದೆ ಎಂದರು.
ಮೇಕೆದಾಟು ಯೋಜನೆಗೆ ಮೂರುವರೆ ವರ್ಷದ ಹಿಂದೆಯೇ ಡಿಪಿಆರ್ ಕಳುಹಿಸಲಾಗಿದೆ. ಕೇಂದ್ರ ಸರ್ಕಾರ ಈವರೆಗೂ ಯಾವುದೇ ತೀರ್ಮಾನ ಕೈಗೊಂಡಿಲ್ಲ. ತುಂಗಭದ್ರ, ಕೃಷ್ಣ ನೀರಾವರಿ ಯೋಜನೆಗಳನ್ನು ಮೇಲ್ದರ್ಜೆಗೆ ಏರಿಸುವ ಯೋಜನೆಗೆ ಶೀಘ್ರದಲ್ಲೇ ಚಾಲನೆ ಕೊಡುತ್ತೇವೆ ಎಂದು ರಾಜ್ಯ ಸರ್ಕಾರ ಹೇಳುತ್ತಲೇ ಬಂದಿದೆ. ಆದರೆ, ಯಾವುದೇ ತೀರ್ಮಾನ ಕೈಗೊಂಡಿಲ್ಲ ಎಂದರು.
ಚಾಮುಂಡೇಶ್ವರಿಯಲ್ಲೇ ಸಮಾರೋಪ
ಚಾಮುಂಡೇಶ್ವರಿ ಕ್ಷೇತ್ರದಲ್ಲೇ ಪಂಚರತ್ನ ಯಾತ್ರೆಯ ಸಮಾರೋಪ ಸಮಾರಂಭ ಮಾಡುತ್ತೇವೆ. ಮಾರ್ಚ್‌ನಲ್ಲಿ ದೊಡ್ಡ ಮಟ್ಟದಲ್ಲಿ ಕಾರ್ಯಕ್ರಮ ಮಾಡುತ್ತೇವೆ.123 ಸ್ಥಾನ ಗೆಲುವಿನ ಗುರಿ ಇಟ್ಟುಕೊಂಡು ನಾವು ಹೊರಟಿದ್ದೇವೆ ಎಂದು ಹೇಳಿದರು.
ರಾಜಕಾರಣದಲ್ಲಿ ಏನೂ ಹೇಳಲಾಗದು. ಮುಂದಿನ ದಿನಗಳಲ್ಲಿ ರಾಜಕೀಯ ಸಮೀಕರಣ ಆಗಬಹುದು. ಕಾಂಗ್ರೆಸ್ ಮತ್ತು ಬಿಜೆಪಿಯಲ್ಲಿ ಜನತಾ ಪರಿವಾರದಿಂದ ಹೋದವರೇ ಹೆಚ್ಚು ಇದ್ದಾರೆ. ಅವರ ಮನಪರಿವರ್ತನೆಯಾಗಿ ಮತ್ತೆ ಪಕ್ಷಕ್ಕೆ ಬರಬಹುದು. ಬಂದಾಗ ಏನು ತೀರ್ಮಾನ ಮಾಡಬೇಕು ನೋಡೋಣ ಎಂದು ನುಡಿದರು.
ಖಾಸಗಿ ಕಂಪನಿ ಮುಂದಿಟ್ಟುಕೊಂಡು ಮತದಾರರ ಡೇಟಾ ಕಳವು ಆರೋಪಕ್ಕೆ ಉತ್ತರಿಸಿದ ಸಂಗ್ರಹ ಮಾಡುತ್ತಿರುವ ವಿಚಾರಕ್ಕೆ ಸಂಬಂಧಿ ಮಾತನಾಡಿದ ಅವರು, ಇದರಲ್ಲಿ ಕೆಲವು ತಪ್ಪುಗಳು ಆಗಿವೆ. ಸರ್ಕಾರದ ಅಧಿಕಾರಿಗಳು ಇದರಲ್ಲಿ ಭಾಗಿಯಾಗಿದ್ದಾರೆ. ಡೇಟಾ ಸಂಗ್ರಹ ಮಾಡುವ ಸಿಬ್ಬಂದಿಗಳು ಸರ್ಕಾರಿ ನೌಕರರು ಎಂದು ಹೇಳಿಕೊಂಡು ಮನೆಗಳಿಗೆ ಭೇಟಿ ಕೊಟ್ಟಿರುವ ಮಾಹಿತಿ ಇದೆ ಎಂದರು.
ಸರ್ಕಾರದ ನಡವಳಿಕೆ ಪ್ರತಿಯೊಬ್ಬರಿಗೂ ಸಂಶಯ ಮೂಡುತ್ತದೆ. ಇದರಿಂದ ಬಿಜೆಪಿಯವರು ದೊಡ್ಡ ಸಾಧನೆ ಮಾಡುತ್ತಾರೆ ಎಂಬ ಗಾಬರಿ ನನಗೆ ಇಲ್ಲ. ಈ ಬಾರಿ ಬಿಜೆಪಿ ಏನೇ ಮಾಡಿದರೂ ಪ್ರಯೋಜನವಾಗುವುದಿಲ್ಲ. ನಾಡಿನ ಜನರು ಬೇಸತ್ತು ಹೋಗಿದ್ದಾರೆ. ಈ ಬಾರಿ ಕುತಂತ್ರದಿಂದ ಅಧಿಕಾರ ಹಿಡಿಯಲು ಸಾಧ್ಯವಿಲ್ಲ ಎಂದರು.
ಪೂಜೆ ಸಲ್ಲಿಕೆ ವೇಳೆ ಮಾಜಿ ಸಚಿವರಾದ ಜಿ.ಟಿ.ದೇವೇಗೌಡ, ಬಂಡೆಪ್ಪ ಕಾಶಂಪುರ್, ಸಿ.ಎಸ್.ಪುಟ್ಟರಾಜು, ಎಂಎಲ್‌ಸಿ ಸಿಎನ್. ಮಂಜೇಗೌಡ ಸೇರಿದಂತೆ ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.
ಏನನ್ನಾದರೂ ಕಟ್ಟಲಿ, ನೆರಳು ನೀಡಲಿ..
ಮೈಸೂರಿನ ಬಸ್ ನಿಲ್ದಾಣ ವಿವಾದ ಕುರಿತು ಮಾತನಾಡಿದ ಅವರು, ನನಗೆ ಕಿರುಕುಳವಾಗುತ್ತಿದೆ ಎಂದು ಬಿಜೆಪಿ ಶಾಸಕರೇ ಕಣ್ಣೀರಿಟ್ಟರೆ ಅವರಿಗೆ ಮತ ಕೊಟ್ಟ ಜನರ ಗತಿ ಏನು?, ಗುಂಬಜ್ ಆದರೂ ಮಸೀದಿಯನ್ನಾದರೂ ಮಾಡಿ, ಗೋಪುರವನ್ನಾದರೂ ಮಾಡಿ. ಜನರಿಗೆ ನೆರಳು ಕೊಡಿ. ಕೆಡಹುವ ಕೆಲಸ ಮಾಡಬೇಡಿ ಎಂದು ಸಲಹೆ ನೀಡಿದರು.
ಕೋಲ್ಕತ್ತಾ : ಇಲ್ಲಿನ ವಿಮಾನ ನಿಲ್ದಾಣದಲ್ಲಿ ಫುಟ್ಬಾಲ್ ಮಾಂತ್ರಿಕ ಲಿಯೋನೆಲ್ ಮೆಸ್ಸಿ ಅವರನ್ನು ನೋಡಲು ಅಭಿಮಾನಿಗಳು ಅಪಾರ ಸಂಖ್ಯೆಯಲ್ಲಿ ಸೇರಿದ್ದರು.…
ನ್ಯೂಯಾರ್ಕ್ : ಭಾರತದ ಮೇಲೆ ಡೊನಾಲ್ಡ್ ಟ್ರಂಪ್ ಹೇರಿರುವ ಶೇ.50 ಪ್ರತಿಸುಂಕವನ್ನು ಅಂತ್ಯಗೊಳಿಸಲು ಅಮೆರಿಕದ ಮೂವರು ಸಂಸದರು ನಿಲುವಳಿ ಮಂಡಿಸಿದ್ದಾರೆ.…
ಹಾಸನ : ಕರ್ತವ್ಯದ ವೇಳೆ ಲಾರಿ ಡಿಕ್ಕಿಯಾಗಿ KSRTC ಬಸ್‌ನ ಚೆಕ್ಕಿಂಗ್ ಇನ್ಸ್ಪೆಕ್ಟರ್ ಮೃತಪಟ್ಟಿರುವ ಘಟನೆ ಹಾಸನ ಜಿಲ್ಲೆಯ ಆಲೂರು…
ಶೇ.30ರಷ್ಟು ಉತ್ಪಾದನೆ ಕುಸಿತ ; ಉತ್ತರ ಕೊಡಗಿನ ಭಾಗದಲ್ಲಿ ಹೆಚ್ಚಿನ ಬೆಳೆ ನಷ್ಟ ನವೀನ್ ಡಿಸೋಜ ಮಡಿಕೇರಿ: ಈ ಬಾರಿಯ…
ಭೇರ್ಯ ಮಹೇಶ್ ಕೆ.ಆರ್.ನಗರ : ಭತ್ತದ ನಾಡು ಎಂದೇ ಪ್ರಖ್ಯಾತಿ ಹೊಂದಿರುವ ಕೆ.ಆರ್.ನಗರ ಮತ್ತು ಸಾಲಿಗ್ರಾಮ ತಾಲ್ಲೂಕುಗಳಲ್ಲಿ ಇದೀಗ ಭತ್ತದ…
ದೊಡ್ಡ ಕವಲಂದೆ : ಗಬ್ಬೆದ್ದು ನಾರುತ್ತಿರುವ ಚರಂಡಿಯ ಕೊಳಚೆ ನೀರಿನಿಂದ ಗ್ರಾಮ ಸ್ಥರಿಗೆ ಸಾಂಕ್ರಾಮಿಕ ರೋಗಗಳು ಹರಡು ತ್ತಿದ್ದು, ಗ್ರಾಮ…