ಭಾರತ ಕಮ್ಯುನಿಸ್ಟ್ ಪಕ್ಷದ ವತಿಯಿಂದ ಪ್ರತಿಭಟನೆ
ಮೈಸೂರು: ಬಲವಂತ ಭೂಸ್ವಾಧೀನ ನಿಲ್ಲಬೇಕು, ಉದ್ಯೋಗ ಖಾತ್ರಿ ಕೂಲಿಯನ್ನು ಹೆಚ್ಚಿಸಬೇಕು ಎಂಬುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಭಾರತ ಕಮ್ಯುನಿಸ್ಟ್ ಪಕ್ಷದ ವತಿಯಿಂದ ಪ್ರತಿಭಟನೆ ನಡೆಯಿತು.
ಶನಿವಾರ ನಗರದ ದೊಡ್ಡ ಗಡಿಯಾರ ವೃತ್ತದ ಬಳಿಯಿರುವ ಗಾಂಧಿ ಪ್ರತಿಮೆ ಮುಂದೆ ಜಮಾವಣೆಗೊಂಡ ಭಾರತ ಕಮ್ಯುನಿಸ್ಟ್ ಪಕ್ಷದ ಕಾರ್ಯಕರ್ತರು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವಿರುದ್ಧ ಘೋಷಣೆಗಳನ್ನು ಕೂಗಿದರು.ರೈತರು, ಕೂಲಿಕಾರರು, ಮಹಿಳೆಯರ ಖಾಸಗಿ ಸಾಲವೂ ಸೇರಿದಂತೆ ಎಲ್ಲ ಸಾಲವನ್ನೂ ಮನ್ನಾ ಮಾಡಬೇಕು ಮತ್ತು ಋಣ ಮುಕ್ತ ಕಾ್ಂದೆು ಜಾರಿಗೊಳಿಸಬೇಕು. ರೈತರ ಬೆಳೆಗೆ ಬೆಂಬಲ ಬೆಲೆ ಖಾತರಿ ಕಾ್ಂದೆು ಜಾರಿಗೊಳಿಸಬೇಕು. ನಿವೇಶನ ಹಾಗೂ ಮನೆ ರಹಿತ ಬಡವರಿಗೆ ಹಿತ್ತಲು ಹಾಗೂ ನಿವೇಶನ ಸಹಿತ ಪಕ್ಕಾ ಮನೆ ಒದಗಿಸಬೇಕು ಎಂದು ಆಗ್ರಹಿಸಿದರು.
ದಲಿತರು ಮತ್ತು ಉಳುವವರಿಗೆ ಭೂಮಿ ನೀಡುವಂತೆ ಭೂ ಸುಧಾರಣಾ ಕಾ್ಂದೆು ಜಾರಿಯಾಗಬೇಕು. ಬಗರ್ ಹುಕುಂ ಹಾಗೂ ಅರಣ್ಯ ಭೂಮಿ ಸಾಗುವಳಿದಾರರಾದ ಬಡವರಿಗೆ ಹಕ್ಕುಪತ್ರ ನೀಡಬೇಕು. ಭೂ ಸ್ವಾಧೀನ ಮಾಡಿ ಕೈಗಾರಿಕೆ ಸ್ಥಾಪಿಸದ ಜಮೀನುಗಳನ್ನು ರೈತರಿಗೆ ವಾಪಸ್ ಕೊಡಿಸಬೇಕು ಎಂದು ಒತ್ತಾಯಿಸಿದರು. ಪ್ರತಿ ಭೂ ಸಂತ್ರಸ್ತರಿಗೆ ಮಾಸಿಕ ತಲಾ ೨೦ ಸಾವಿರ ರೂ. ಉದ್ಯೋಗ ಪರಿಹಾರ ಒದಗಿಸಬೇಕು. ಉದ್ಯೋಗ ಖಾತ್ರಿ ಯೋಜನೆಯನ್ನು ನಗರ ಪ್ರದೇಶಕ್ಕೂ ವಿಸ್ತರಿಸಿ ಕೂಲಿಯನ್ನು ೪೭೫ ರೂ. ಗಳಿಗೆ ಹೆಚ್ಚಿಸಿ ಬಾಕಿ ವೇತನ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದರು. ಜಿಲ್ಲಾ ಕಾರ್ಯದರ್ಶಿ ಜಗದೀಶ್ ಸೂರ್ಯ, ಜಿಲ್ಲಾ ಸಮಿತಿ ಸದಸ್ಯ ಕೆ.ಬಸವರಾಜ್, ಎನ್.ವಿಜಯ್ ಕುಮಾರ್, ಜಿ.ಜಯರಾಂ, ಸ್ಥಳೀಯ ಸಮಿತಿ ಕಾರ್ಯದರ್ಶಿ ಜಿ.ರಾಜೇಂದ್ರ, ಸದಸ್ಯರಾದ ಅಣ್ಣಪ್ಪ, ಸುಬ್ರಹ್ಮಣ್ಯ, ಬಸವಯ್ಯ, ಕೃಷ್ಣ ಮೂರ್ತಿ, ಬಲರಾಂ ವಿದ್ಯಾರ್ಥಿ ಮುಖಂಡರಾದ ವಿಜಯ್, ಕವಿತ, ಶಿವು, ಯತೀಶ್, ದರ್ಶನ್, ರೈತ ಮುಖಂಡರಾದ ಚಂದ್ರಶೇಖರ್, ಸಿದ್ದಯ್ಯ, ಶಾಕುಂತಲ, ಈಶ್ವರ್, ಮುಂತಾದವರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
`ಹೊಸ ತಲೆಮಾರಿನ ಸಾಹಿತ್ಯ' ಕುರಿತ ವಿಚಾರಗೋಷ್ಠಿಯಲ್ಲಿ ವಿಮರ್ಶಕ ವಿಕ್ರಂ ವಿಸಾಜಿ ಅಭಿಮತ • ಜಿ.ತಂಗಂ ಗೋಪಿನಾಥಂ ಮಂಡ್ಯ: ಹೊಸ ತಲೆಮಾರಿನ…
ಮೈಸೂರು: ಮಾಗಿ ಉತ್ಸವದ ಅಂಗವಾಗಿ ಜಗತ್ಪ್ರಸಿದ್ಧ ಮೈಸೂರು ಅರಮನೆ ಆವರಣದಲ್ಲಿ ಇಂದು ಸಂಜೆ ಖ್ಯಾತ ಗಾಯಕ ವಿಜಯ್ ಪ್ರಕಾಶ್ ಅವರು…
ಚಾಮರಾಜನಗರ: ಬಿಆರ್‌ಟಿ ಹುಲಿ ಸಂರಕ್ಷಿತಾರಣ್ಯದಲ್ಲಿ ಪಶು ವೈದ್ಯರ ಕೊರತೆ ಎದ್ದು ಕಾಣುತ್ತಿದ್ದು, ಹೊರಗುತ್ತಿಗೆ ಆಧಾರದಲ್ಲಿ ವೈದ್ಯರ ಹುದ್ದೆಯ ನೇಮಕಾತಿಗೂ ಜಾಹೀರಾತು…
ಬೆಂಗಳೂರು: ರಾಜ್ಯದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪದಿಂದ ಹಣ್ಣುಗಳ ರಾಣಿ ಎಂದು ಕರೆಯಿಸಿಕೊಳ್ಳುವ ಮಾವಿಗೆ ಅನೇಕ ರೋಗಗಳು ಕಾಣಿಸಿಕೊಂಡಿದ್ದು, ರೈತರಿಗೆ ಇಳುವರಿ…
ಗುಂಡ್ಲುಪೇಟೆ: ಗಡಿ ಜಿಲ್ಲೆ ಚಾಮರಾಜನಗರದ ಗುಂಡ್ಲುಪೇಟೆ ತಾಲ್ಲೂಕಿನಲ್ಲಿರುವ ರಾಷ್ಟ್ರೀಯ ಉದ್ಯಾನವನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಕುಂದಕೆರೆ ವಲಯದ ಚಿಕ್ಕ…