ಚಾಮರಾಜನಗರ: ಕಾಂಗ್ರೆಸ್ ಯುವ ನಾಯಕ ರಾಹುಲ್ ಗಾಂಧಿ ಕೈಗೊಂಡಿದ್ದ ಭಾರತ್ ಜೋಡೋ ಯಾತ್ರೆ ಕಾಶ್ಮೀರದಲ್ಲಿ ಮುಕ್ತಾಯಗೊಳ್ಳುತ್ತಿದ್ದು ಶ್ರೀನಗರದಲ್ಲಿ ರಾಹುಲ್ ಗಾಂಧಿ ರಾಷ್ಟ್ರಧ್ವಜಾರೋಹಣ ನೆರವೇರಿಸುತ್ತಿದ್ದಂತೆ ಜಿಲ್ಲಾ ಕಾಂಗ್ರೆಸ್ ಕಚೇರಿ ಮುಂದೆಯೂ ಸೋಮವಾರ ಧ್ವಜಾರೋಹಣ ನೆರವೇರಿಸಲಾಯಿತು.
ಸತ್ತಿ ರಸ್ತೆಯಲ್ಲಿರುವ ಪಕ್ಷದ ಕಚೇರಿಯ ಮುಂಭಾಗ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಪಿ.ಮರಿಸ್ವಾಮಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ ಗೌರವ ವಂದನೆ ಸ್ವೀಕರಿಸಿದರು.
ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಬಿ.ಕೆ. ರವಿಕುಮಾರ್, ಪ್ರಧಾನ ಕಾರ್ಯದರ್ಶಿ ಚಿಕ್ಕಮಹದೇವ್, ಬ್ಲಾಕ್ ಅಧ್ಯಕ್ಷರಾದ ಎ.ಎಸ್. ಗುರುಸ್ವಾಮಿ, ಮಹಮದ್ ಅಸ್ಗರ್,ಯುವ ಕಾಂಗ್ರೆಸ್ ಅಧ್ಯಕ್ಷ ಅಬ್ದುಲ್ ಅಜೀಜ್, ಎಪಿಎಂಸಿ ಮಾಜಿ ಅಧ್ಯಕ್ಷ ಡಿ. ನಾಗೇಂದ್ರ, ಚುಡಾ ಮಾಜಿ ಅಧ್ಯಕ್ಷ ಸುಹೇಲ್‌ಅಲಿಖಾನ್, ತಾ.ಪಂ. ಮಾಜಿ ಸದಸ್ಯರಾದ ಡಿ.ಪಿ.ಪ್ರಕಾಶ್, ಎಸ್. ರಾಜು, ಶಿವಸ್ವಾಮಿ, ನಾಗವಳ್ಳಿ ನಾಗಯ್ಯ, ಬಿಸಲವಾಡಿ ರವಿ, ಮುತ್ತಿಗೆ ಸ್ವಾಮಿ, ಚಿನ್ನಮ್ಮ, ಉೂಂಬ್ ಖಾನ್, ಎಎಚ್‌ಎನ್ ಖಾನ್, ಸೈಯದ್ ಜಬೀವುಲ್ಲ. ನಾಗಾರ್ಜುನ ಪ್ರಥ್ವಿ, ನಾಗುಮೋಹನ್, ಜಯರಾಜ್ ಮೊದಲಾದವರು ಇದ್ದರು.
ಜೋಡೊ ಯಾತ್ರೆ ಮುಕ್ತಾಯ; ಕಾಂಗ್ರೆಸ್ ಕಚೇರಿ ಬಳಿ ಧ್ವಜಾರೋಹಣ





