ಕೆ. ಆರ್ ನಗರದ ಮುಳ್ಳೂರು ರಸ್ತೆಯಲ್ಲಿ ಕಾಣಿಸಿಕೊಂಡ ಚಿರತೆ ಸೆರೆ
ಮೈಸೂರು: ಜಿಲ್ಲೆಯ ಕೃಷ್ಣರಾಜನಗರ ತಾಲ್ಲೂಕಿನ ಮುಳ್ಳೂರು ರಸ್ತೆಯಲ್ಲಿ ಚಿರತೆಯೊಂದು ಬೈಕ್ ಸವಾರನ ಮೇಲೆ ದಾಳಿ ಮಾಡಿದೆ. ಈ ಚಿರತೆಯನ್ನು ಸೆರೆಹಿಡಿಯಲು ಅರಣ್ಯ ಇಲಾಖೆ ಯಶಸ್ವಿಯಾಗಿದೆ.
ಕಳೆದ ರಾತ್ರಿ ಪಟ್ಟಣದ ಸ್ಟೇಡಿಯಂ ಬಳಿ ಹಾಗೂ ಮುಳ್ಳೂರು ರಸ್ತೆಯಲ್ಲಿ ಕಾಣಿಸಿ ಕೊಂಡಿದ್ದ ಚಿರತೆಯನ್ನು ಸೆರೆ ಹಿಡಿಯಲು ಶುಕ್ರವಾರ ಬೆಳಗ್ಗೆ ಅರಣ್ಯ ಇಲಾಖೆ ಅಧಿಕಾರಿಗಳು ಬೋನು ಇರಿಸಿ ಕಾರ್ಯಾಚರಣೆ ನಡೆಸಿದ್ದರು.ಈ ವೇಳೆ ತಪ್ಪಿಸಿಕೊಳ್ಳಲು ಓಡುತ್ತಿದ್ದ ಚಿರತೆ ರಾಜ್ ಪ್ರಕಾಶ್ ವಿದ್ಯಾಸಂಸ್ಥೆಯ ಬಳಿ ಬೈಕ್ ನಲ್ಲಿ ಹೋಗುತ್ತಿದ್ದ ಸವಾರನ ಮೇಲೆ ಎರಗಿದೆ.
ಚಿರತೆ ದಾಳಿಗೆ ಹೆದರಿದ ಬೈಕ್ ಸವಾರ ದ್ವಿಚಕ್ರ ಸಮೇತ ರಸ್ತೆಗೆ ಉರುಳಿದ್ದು ಸಣ್ಣ ಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾನೆ. ಹುಣಸೂರು, ಮೈಸೂರು ಭಾಗದ ಅರಣ್ಯಾಧಿಕಾರಿಗಳು ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.
ಬೋನಿಗೆ ಬಿದ್ದ ಚಿರತೆಗೆ ಪಶುವೈದ್ಯ ಇಲಾಖೆಯ ಡಾ.ಮಂಜುನಾಥ್ ಅವರು ಅರಿವಳಿಕೆ ಚುಚ್ಚು ಮದ್ದು ನೀಡಿ ಸಾಗಾಟಕ್ಕೆ ಸಹಕರಿಸಿದರು.
ಮೈಸೂರು : ಜಿಲ್ಲೆಯ ಟಿ.ನರಸೀಪುರ ಪಟ್ಟಣದಲ್ಲಿ ಬೆಳ್ಳಂಬೆಳಿಗ್ಗೆಯೇ ಮಚ್ಚು ಲಾಂಗುಗಳಿಂದ ದುಷ್ಕರ್ಮಿಗಳು ಹಲ್ಲೆ ನಡೆಸಿ ವ್ಯಕ್ತಿಯೋರ್ವನನ್ನು ಹತ್ಯೆ ಮಾಡಿರುವ ಘಟನೆ…
ಕೋಲ್ಕತ್ತಾ : ಇಲ್ಲಿನ ವಿಮಾನ ನಿಲ್ದಾಣದಲ್ಲಿ ಫುಟ್ಬಾಲ್ ಮಾಂತ್ರಿಕ ಲಿಯೋನೆಲ್ ಮೆಸ್ಸಿ ಅವರನ್ನು ನೋಡಲು ಅಭಿಮಾನಿಗಳು ಅಪಾರ ಸಂಖ್ಯೆಯಲ್ಲಿ ಸೇರಿದ್ದರು.…
ನ್ಯೂಯಾರ್ಕ್ : ಭಾರತದ ಮೇಲೆ ಡೊನಾಲ್ಡ್ ಟ್ರಂಪ್ ಹೇರಿರುವ ಶೇ.50 ಪ್ರತಿಸುಂಕವನ್ನು ಅಂತ್ಯಗೊಳಿಸಲು ಅಮೆರಿಕದ ಮೂವರು ಸಂಸದರು ನಿಲುವಳಿ ಮಂಡಿಸಿದ್ದಾರೆ.…
ಹಾಸನ : ಕರ್ತವ್ಯದ ವೇಳೆ ಲಾರಿ ಡಿಕ್ಕಿಯಾಗಿ KSRTC ಬಸ್‌ನ ಚೆಕ್ಕಿಂಗ್ ಇನ್ಸ್ಪೆಕ್ಟರ್ ಮೃತಪಟ್ಟಿರುವ ಘಟನೆ ಹಾಸನ ಜಿಲ್ಲೆಯ ಆಲೂರು…
ಶೇ.30ರಷ್ಟು ಉತ್ಪಾದನೆ ಕುಸಿತ ; ಉತ್ತರ ಕೊಡಗಿನ ಭಾಗದಲ್ಲಿ ಹೆಚ್ಚಿನ ಬೆಳೆ ನಷ್ಟ ನವೀನ್ ಡಿಸೋಜ ಮಡಿಕೇರಿ: ಈ ಬಾರಿಯ…
ಭೇರ್ಯ ಮಹೇಶ್ ಕೆ.ಆರ್.ನಗರ : ಭತ್ತದ ನಾಡು ಎಂದೇ ಪ್ರಖ್ಯಾತಿ ಹೊಂದಿರುವ ಕೆ.ಆರ್.ನಗರ ಮತ್ತು ಸಾಲಿಗ್ರಾಮ ತಾಲ್ಲೂಕುಗಳಲ್ಲಿ ಇದೀಗ ಭತ್ತದ…