ಜಿಲ್ಲೆಗಳು

ಹೈನುಗಾರಿಕೆ ಉದ್ಯಮಕ್ಕೆ ಮುದ್ದೆಚರ್ಮದ ರೋಗದ ಭೀತಿ

ಅವಳಿ ತಾಲ್ಲೂಕುಗಳ ಹಲವು ಹಳ್ಳಿಗಳಲ್ಲಿ ಜಾನುವಾರುಗಳಿಗೆ ರೋಗ; ರೈತರಲ್ಲಿ ಆತಂಕ

ಭೇರ್ಯ ಮಹೇಶ್
ಕೆ.ಆರ್.ನಗರ: ಹೈನುಗಾರಿಕೆ ಉದ್ಯಮಕ್ಕೆ ಮುದ್ದೆ ಚರ್ಮ ರೋಗದ ಭೀತಿ ಎದುರಾಗಿದ್ದು, ಈಗಾಗಲೇ ಕೆ.ಆರ್.ನಗರ ಮತ್ತು ಸಾಲಿಗ್ರಾಮ ಅವಳಿ ತಾಲ್ಲೂಕುಗಳ ಕೆಲವು ಹಳ್ಳಿಗಳಲ್ಲಿ ಅಲ್ಲಿಲ್ಲಿ ಪಶುಗಳಿಗೆ ಮುದ್ದೆ ಚರ್ಮದ ರೋಗದ ವೈರಸ್ ಕಾಣಿಸಿಕೊಂಡಿದೆ.

ಮುದ್ದೆ ಚರ್ಮ ರೋಗದ ಲಕ್ಷಣಗಳು: ಮಳೆಗಾಲ ಮತ್ತು ಬೇಸಿಗೆಯಲ್ಲಿ ಅತಿ ಹೆಚ್ಚಾಗಿ ಕಂಡುಬರುವ ಮುದ್ದೆ ಚರ್ಮ ರೋಗವು ಪಶುಗಳಿಗೆ ಕ್ಯಾಪ್ರಿ ಪಾಕ್ಸ್ ಎಂಬ ವೈರಸ್‌ನಿಂದ ಬರುತ್ತದೆ. ಈ ರೋಗ ಎತ್ತು, ಆಕಳು, ಎಮ್ಮೆ ಮತ್ತು ಕರುಗಳಲ್ಲಿ ಮಾತ್ರ ಕಾಣಿಸುತ್ತದೆ. ಈ ವೈರಾಣು ನೊಣ, ಸೊಳ್ಳೆ ಹಾಗೂ ಉಣ್ಣೆ ಕಚ್ಚುವ ಮೂಲಕ ಒಂದು ಜಾನುವಾರುವಿನಿಂದ ಇನ್ನೊಂದು ಜಾನುವಾರುಗೆ ಹರಡುತ್ತದೆ. ಮಿಶ್ರತಳಿಗಳು ಹಾಗೂ ಹೆಚ್ಚು ಹಾಲು ಕೊಡುವ ಆಕಳು ಮತ್ತು ಕರುಗಳಿಗೆ ಅತಿ ಹೆಚ್ಚಾಗಿ ಈ ರೋಗ ಬಾಧಿಸುತ್ತದೆ. ಈ ರೋಗಕ್ಕೆ ಜಾನುವಾರುಗಳು ತುತ್ತಾದರೆ ಹಾಲಿನ ಇಳುವರಿ ಕಡಿಮೆ ಆಗುತ್ತದೆ. ಲಂಪಿ ಸ್ಕಿನ್ ಡಿಸೀಸ್ ಎಂದು ಕರೆಯಲ್ಪಡುವ ಈ ವೈರಸ್ ರೋಗ ಅತಿ ವೇಗವಾಗಿ ಒಂದು ಜಾನುವಾರುಗಳಿಂದ ಇನ್ನೊಂದಕ್ಕೆ ಹರಡುತ್ತದೆ.
ಜ್ವರ, ಚರ್ಮದ ಮೇಲೆ ಗಡ್ಡೆ : ೨ ರಿಂದ ೩ ದಿನಗಳವರೆಗೆ ಸಾಧಾರಣ ಜ್ವರ ಪಶುಗಳಿಗೆ ಕಾಣಿಸಿಕೊಳ್ಳುತ್ತದೆ. ಜಾನುವಾರುಗಳ ಚರ್ಮದ ಮೇಲೆ ಚಿಕ್ಕ ಗಡ್ಡೆಗಳಾಗುತ್ತದೆ. ಗಂಟು ಕಟ್ಟುತ್ತದೆ. ರೂಪಾಯಿ ನಾಣ್ಯದಷ್ಟು ಚರ್ಮದ ಮೇಲೆ ಹುಣ್ಣು ಬೀಳುವುದು ಈ ಕಾಯಿಲೆಯ ಮುಖ್ಯ ಲಕ್ಷಣಗಳಾಗಿವೆ. ಬಾಯಿ ಹಾಗೂ ಉಸಿರಾಟದ ನಾಳದಲ್ಲಿ ಗಾಯಗಳಾಗಬಹುದು, ಜಾನುವಾರು ಬಡಕಲಾಗುವುದು ಮತ್ತು ಗರ್ಭ ಧರಿಸಿದ ದನಗಳಲ್ಲಿ ಗರ್ಭಪಾತವಾಗಬಹುದು. ಚಿಕಿತ್ಸೆ ನಿರ್ಲಕ್ಷಿಸಿದಲ್ಲಿ ಜಾನುವಾರಗಳು ಸಾವನ್ನಪ್ಪಬಹುದು.
ಬೇವಿನ ಎಲೆಗಳ ಹೊಗೆಯಿಂದ ಸೊಳ್ಳೆಗಳ ಕಡಿತವನ್ನು ನಿಯಂತ್ರಿಸಬೇಕು. ಒಂದು ಗ್ರಾಮದಿಂದ ಮತ್ತೊಂದು ಗ್ರಾಮಕ್ಕೆ ರೋಗ ಬಂದಂತಹ ಪ್ರದೇಶದಿಂದ ಯಾವುದೇ ಜಾನುವಾರುಗಳ ಮಾರಾಟ /ಖರೀದಿ ಮಾಡಬಾರದು. ಜಾನುವಾರುಗಳನ್ನು ಕಟ್ಟುವಂತಹ ಸ್ಥಳ, ಹಗ್ಗ, ಸರಪಳಿ ಅಥವಾ ಇತ್ಯಾದಿ ವಸ್ತುಗಳನ್ನು ಕ್ರಿಮಿನಾಶಕಗಳಿಂದ ಸ್ವಚ್ಛಗೊಳಿಸಬೇಕು. ಮುದ್ದೆ ರೋಗದ ಲಕ್ಷಣಗಳು ಕಂಡ ಕೂಡಲೇ ಸಮೀಪದ ಪಶು ವೈದ್ಯಾಧಿಕಾರಿಗಳ ಗಮನಕ್ಕೆ ತಂದು ಚಿಕಿತ್ಸೆ ಕೊಡಿಸಬೇಕು. ಈ ಕಾಯಿಲೆಗೆ ಲಕ್ಷಣದ ಅನುಗುಣವಾಗಿ ಔಷಧ ಲಭ್ಯವಿದ್ದು, ಸಾವಿನ ಪ್ರಮಾಣ ಕಡಿಮೆ ಇರುತ್ತದೆ. ಆದರೂ ಮುಂಜಾಗ್ರತೆಗಾಗಿ ಜಾನುವಾರುಗಳಿಗೆ ತಮ್ಮ ಸಮೀಪದ ಪಶು ಚಿಕಿತ್ಸಾ ಕೇಂದ್ರದಿಂದ ಸೂಕ್ತ ಚಿಕಿತ್ಸೆ ಪಡೆಯಬೇಕು.


ಪಶುಗಳಿಗೆ ವೈರಸ್‌ನಿಂದ ಬರುವ ಇದು ಸಾಂಕ್ರಾಮಿಕ ರೋಗವಾಗಿದೆ. ಮುದ್ದೆ ಚರ್ಮ ವೈರಸ್ ರೋಗದಿಂದ ಪಶುಗಳನ್ನು ಕಾಪಾಡಿಕೊಳ್ಳಲು ರೈತರಿಗೆ ಅಗತ್ಯ ಸಲಹೆಗಳನ್ನು ನೀಡಲಾಗಿದೆ. ಭೇರ್ಯ ಭಾಗದಲ್ಲಿ ಒಂದು ಪಶು ಸಾವನ್ನಪ್ಪಿದೆ. ಈ ಬಗ್ಗೆ ಸರ್ಕಾರಕ್ಕೆ ವರದಿ ಸಲ್ಲಿಸಲಾಗಿದೆ. ರೈತರು ಮುಂಜಾಗ್ರತಾ ಹಾಗೂ ಹತೋಟಿ ಕ್ರಮಗಳನ್ನು ಕೈಗೊಳ್ಳಬೇಕು.
–ಡಾ.ಮಂಜುನಾಥ್, ಸಹಾಯಕ ನಿರ್ದೇಶಕರು, ಪಶುಸಂಗೋಪನೆ ಇಲಾಖೆ.ಕೆ.ಆರ್.ನಗರ.


ಈಗಾಗಲೇ ಭೇರ್ಯ, ಬಟಿಗನಹಳ್ಳಿ, ಸುಗ್ಗನಹಳ್ಳಿ, ಹರಂಬಳ್ಳಿ, ಹಾಗೂ ಸಾಲಿಗ್ರಾಮ, ಅಂಕನಹಳ್ಳಿ ಗ್ರಾಮದಲ್ಲಿ ಚರ್ಮ ರೋಗ ಕಾಣಿಸಿ ಕೊಂಡಿದ್ದು, ಈಗಾಗಲೇ ಲಸಿಕೆ ಹಾಕಲಾಗುತ್ತಿದೆ. ರೈತರರಾಗಲಿ ಅಥವಾ ಹೈನುಗಾರಿಕೆ ಮಾಡುವ ಹಾಲು ಉತ್ಪಾದಕರು ಪಶುವೈದ್ಯರು ನೀಡುವ ಸಲಹೆ, ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸಿ, ಯಾವುದೇ ಆತಂಕ ಬೇಡ.
–ಡಾ.ಹರೀಶ್, ಪಶುವೈದ್ಯರು. ಪಶುವೈದ್ಯ ಕೇಂದ್ರ ಭೇರ್ಯ


ಮುದ್ದೆ ಚರ್ಮ ರೋಗ ಬಂದಿರುವ ಜಾನುವಾರುಗಳನ್ನು ಉಳಿದ ಆರೋಗ್ಯವಂತಹ ಜಾನುವಾರುಗಳಿಂದ ಬೇರ್ಪಡಿಸಬೇಕು. ಜಾನುವಾರುಗಳ ಮೈ ಮೇಲೆ ಚಿಕ್ಕ-ಚಿಕ್ಕ ಗಡ್ಡೆಗಳು ಕಾಣಿಸಿಕೊಂಡಿದ್ದರೆ ದನದ ಕೊಟ್ಟಿಗೆಯಲ್ಲಿ ಕಟ್ಟದೆ ಹೊರಗಡೆ ಕಟ್ಟಬೇಕು. ನೊಣ, ಸೊಳ್ಳೆ ಹಾಗೂ ಉಣ್ಣೆಗಳ ಸಂಖ್ಯೆಯನ್ನು ಕಡಿಮೆ ಮಾಡಬೇಕು. ನೊಣ ಹಾಗೂ ಸೊಳ್ಳೆಗಳು ಬೆಳಗಿನ ಜಾವ ಹಾಗೂ ಸಾಯಂಕಾಲದ ಸಮಯದಲ್ಲಿ ಜಾನುವಾರುಗಳಿಗೆ ಅತಿಯಾಗಿ ಕಚ್ಚುತ್ತವೆ. ದಪ್ಪನೆಯ ಸೊಳ್ಳೆ ಪರದೆಯ ಒಳಗಡೆ ಜಾನುವಾರುಗಳನ್ನು ಕಟ್ಟಬೇಕು.

andolanait

Recent Posts

ಸಿಇಸಿ ಜ್ಞಾನೇಶ್​ ಕುಮಾರ್​ರನ್ನು ಹುದ್ದೆಯಿಂದ ಕೆಳಗಿಳಿಸುವ ನಿರ್ಣಯ; ಕೇರಳಂ ವಿಧಾನಸಭೆಯಲ್ಲಿ ಪಾಸ್​​

ಕೇರಳಂ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಹುದ್ದೆಯಿಂದ ಕೆಳಗಿಳಿಸುವಂತೆ ಆಗ್ರಹಿಸಿ ಕೇರಳಂ ವಿಧಾನಸಭೆಯಲ್ಲಿ ನಿರ್ಣಯ ಅಂಗೀಕರಿಸಲಾಗಿದೆ. ಎಸ್‌ಐಆರ್‌…

17 hours ago

ಧನಂಜಯ ಆನೆಯ ಹೆಗಲಿಗೆ ಶ್ರೀರಂಗಪಟ್ಟಣ ದಸರಾ ಜವಾಬ್ದಾರಿ

ಶ್ರೀರಂಗಪಟ್ಟಣ: ಇಲ್ಲಿ ನಡೆಯುವ ದಸರಾ ಮಹೋತ್ಸವದಲ್ಲಿ ಭಾಗವಹಿಸುವ ಆನೆಗಳನ್ನು ಆಯ್ಕೆ ಮಾಡಲಾಗಿದೆ. ಧನಂಜಯ, ಲಕ್ಷ್ಮಿ ಹಾಗೂ ರೂಪ ಆನೆಗಳು ಈ…

19 hours ago

ದಸರಾ ಗಜಪಡೆಗೆ 3ನೇ ಹಂತದ ಕುಶಾಲತೋಪು ಸಿಡಿಸುವ ತಾಲೀಮು ಯಶಸ್ವಿ

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ 2026ರ ಸಿದ್ಧತೆಗಳು ಬಿರುಸುಗೊಂಡಿವೆ. ದಸರಾ ಗಜಪಡೆ ಹಾಗೂ ಅಶ್ವಪಡೆಗೆ ನಡೆದ ಮೂರನೇ ಹಂತದ ಕುಶಾಲತೋಪು…

19 hours ago

ಸತ್ಯಕ್ಕೆ ಅಂತಿಮ ಗೆಲುವಾಗಲಿದೆ: ರಾಹುಲ್‌ ಗಾಂಧಿ

ನವದೆಹಲಿ: ಸತ್ಯಕ್ಕೆ ಅಂತಿಮ ಗೆಲುವಾಗಲಿದೆ. ಈ ಹೋರಾಟದಿಂದ ಯಾವುದೇ ಕಾರಣಕ್ಕೂ ಹಿಂಜರಿಯುವುದಿಲ್ಲ” ಎಂದು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್…

19 hours ago

ತಾಯಿ ಜೊತೆ ಸುತ್ತೂರು ಮಠಕ್ಕೆ ಭೇಟಿ ನೀಡಿದ ನಟ ಪ್ರಭುದೇವ್

ಮೈಸೂರು: ಬಹುಭಾಷಾ ನಟ ಪ್ರಭುದೇವ್‌ ಅವರು ತಮ್ಮ ತಾಯಿಯೊಂದಿಗೆ ಸುತ್ತೂರು ಮಠಕ್ಕೆ ಭೇಟಿ ನೀಡಿ ಶ್ರೀಗಳ ದರ್ಶನ ಪಡೆದರು. ನಾಳೆ…

19 hours ago

ಹೆಣ ಹಾಕಬೇಕಿದ್ದು ತೋಪಿನಲ್ಲಿ; ಬಿಸಾಕಿದ್ದು…?

ವರದಿ ರೂಪ: ರವಿಚಂದ್ರ ಚಿಕ್ಕೆಂಪಿಹುಂಡಿ ಮಾಗಡಿ ರಸ್ತೆಯಲ್ಲಿತ್ತು ದೊಡ್ಡ ಮೋರಿ, ಮರಗಳ ತೋಪು, ಸುತ್ತಲೂ ಕತ್ತಲಿನಿಂದ ಕೂಡಿದ್ದ ನಿರ್ಜನ ಪ್ರದೇಶ…

23 hours ago