Mysore
20
overcast clouds

Social Media

ಶನಿವಾರ, 19 ಅಕ್ಟೋಬರ್ 2024
Light
Dark

ಹಳ್ಳಕ್ಕೆ ಉರುಳಿದ ಸಾರಿಗೆ ಬಸ್: ಪ್ರಾಣಾಪಾಯದಿಂದ ಪ್ರಯಾಣಿಕರು ಪಾರು

ಮುರುಕನಹಳ್ಳಿ ಬಳಿ ಚಾಲಕನ ನಿಯಂತ್ರಣ ತಪ್ಪಿ ಅವಘಡ 

ಕೆ.ಆರ್.ಪೇಟೆ: ಸಾರಿಗೆ ಬಸ್ಸೊಂದು ಶುಕ್ರವಾರ ಬೆಳಿಗ್ಗೆ ೬ ಗಂಟೆಯ ವೇಳೆ ತಾಲ್ಲೂಕಿನ ಮುರುಕನಹಳ್ಳಿ ಸೇತುವೆಯ ತಿರುವಿನಲ್ಲಿ ಮಗುಚಿ ಬಿದ್ದು ಸುಮಾರು ೩೦ಕ್ಕೂ ಹೆಚ್ಚು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿರುವ ಘಟನೆ ಸಂಭವಿಸಿದೆ.
ಕೆ.ಆರ್.ಪೇಟೆ ಗ್ರಾಮಾಂತರ ಠಾಣಾ ವ್ಯಾಪ್ತಿಯ ಮುರುಕನಹಳ್ಳಿ ಗ್ರಾಮದ ಬಳಿ ಸಾರುಗೆ ಬಸ್(ಕೆಎ-೦೯ ಇ-೫೨೮೨) ಗದಗದಿಂದ-ಮೈಸೂರಿನ ಕಡೆಗೆ ಹೋಗುತ್ತಿದ್ದಾಗ ಮರುಕನಹಳ್ಳಿ ಕ್ರಾಸ್ ಬಳಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಉರುಳಿ ಬಿದ್ದಿದೆ. ಪರಿಣಾಮ ಬಸ್ಸಿನಲ್ಲಿದ್ದ ಪ್ರಯಾಣಿಕರು, ಚಾಲಕ, ನಿರ್ವಾಹಕ ಸೇರಿದಂತೆ ಸುಮಾರು ೩೦ ಮಂದಿಗೆ ಸಣ್ಣಪುಟ್ಡ ಗಾಯಗಳಾಗಿವೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಅಥವಾ ಗಂಭೀರ ಸ್ವರೂಪದ ಗಾಯಗಳಾಗಿಲ್ಲ. ಗಾಯಗೊಂಡವರನ್ನು ಕೆ.ಆರ್.ಪೇಟೆಯ ದುಂಡಶೆಟ್ಟಿ ಲಕ್ಷ್ಮಮ್ಮ ಸ್ಮಾರಕ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಘಟನೆಯ ವಿಚಾರ ತಿಳಿದ ತಕ್ಷಣ ಗ್ರಾಮಾಂತರ ಠಾಣೆಯ ಎಸ್‌ಐ ಪ್ರಮೋದ್ ಸ್ಥಳಕ್ಕೆ ತೆರಳಿ ಮಹಜರು ನಡೆಸಿ, ಮುಂದಿನ ಕ್ರಮ ಕೈಗೊಂಡಿದ್ದಾರೆ.
ಪದೇ ಪದೇ ಅಪಘಾತ:
ಸದರಿ ಸ್ಥಳವು ಹೆಚ್ಚು ಅಪಾಯಕಾರಿಯಾದ ತಿರುವಿನಿಂದ ಕೂಡಿದ ಸ್ಥಳವಾಗಿದೆ. ಇಲ್ಲಿ ರಸ್ತೆಯ ಇಕ್ಕೆಲಗಳಲ್ಲಿ ಸುರಕ್ಷ ಗೋಡೆಯನ್ನು ನಿರ್ಮಿಸುವ ಮೂಲಕ ಅಪಘಾತ ಹಾಗೂ ಅಮೂಲ್ಯ ಜೀವಗಳನ್ನು ಉಳಿಸಬೇಕು ಎಂದು ತಾಲ್ಲೂಕು ಜಯಕರ್ನಾಟಕ ಸಂಘಟನೆಯ ಅಧ್ಯಕ್ಷ ಸೋಮಶೇಖರ್ ಹಾಗೂ ಕಾರ್ಯಾಧ್ಯಕ್ಷ ಎಸ್.ರವಿ ಅವರುಗಳು ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳನ್ನು ಆಗ್ರಹಿಸಿದ್ದಾರೆ.

 

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ