ಮೈಸೂರು: ಹುಣಸೂರಿನ ಚಿಕ್ಕ ಬೀಚನಹಳ್ಳಿಯಲ್ಲಿ ಮಹಿಳೆಯನ್ನು ಬಲಿ ಪಡೆದು, ಇಬ್ಬರನ್ನು ಗಾಯಗೊಳಿಸಿದ ವಕ್ರದಂತ ಆನೆಯನ್ನು ಅರಣ್ಯ ಇಲಾಖೆ ಸೆರೆ ಹಿಡಿದು ಹೆಚ್ಚಿನ ಅಪಾಯ ತಪ್ಪಿಸಿದೆ. ಈ ಪುಂಡಾನೆಯನ್ನು ಅರಣ್ಯ ಸಿಬ್ಬಂದಿ ಸಾಕಾನೆಗಳ ಸಹಾಯದಿಂದ ಸೆರೆ ಹಿಡಿದು ದುಬಾರೆ ಆನೆ ಕ್ಯಾಂಪಿನ ಕ್ರಾಲ್‌ನಲ್ಲಿ ಬಂಧಿಯಾಗಿಸಿ, ಗ್ರಾಮಸ್ಥರ ಆತಂಕವನ್ನು ದೂರ ಮಾಡಿದ್ದಾರೆ.
ಬಿಳಿಕೆರೆ ಬಳಿಯ ಅರಬಿತಿಟ್ಟು ಅರಣ್ಯ ಪ್ರದೇಶದಲ್ಲಿ ಬೀಡು ಬಿಟ್ಟಿರುವ ಎರಡು ಸಲಗಗಳ ಸೆರೆ ಹಿಡಿಯಲು ಅಭಿಮನ್ಯು, ಭೀಮಾ, ಮಹೇಂದ್ರ, ಗಣೇಶ ಮತ್ತು ಪ್ರಶಾಂತ ಸಾಕಾನೆಗಳೊಂದಿಗೆ ಮುಂಜಾನೆಯೇ ಆಗಮಿಸಿದ್ದ ಪ್ರಾದೇಶಿಕ ಅರಣ್ಯ ವಿಭಾಗದ ಡಿಸಿಎಫ್ ಹಾಗೂ ಎಲಿಫೆಂಟ್ ಟಾಸ್ಕ್ಪೋರ್ಸ್ನ ಮುಖ್ಯಸ್ಥೆ ಸೀಮಾ ನೇತೃತ್ವದ ತಂಡ. ತಕ್ಷಣವೇ ಸಾಕಾನೆಗಳೊಂದಿಗೆ ಸ್ಥಳಕ್ಕಾಗಮಿಸಿ ಪುಂಡಾನೆಯನ್ನು ಸೆರೆ ಹಿಡಿಯಲು ಮುಂದಾದರು.
ಈ ವೇಳೆ, ಅಕ್ಕ-ಪಕ್ಕದ ಗ್ರಾಮದ ಸಾವಿರಾರು ಮಂದಿ ಸ್ಥಳದಲ್ಲಿ ನೆರೆದು, ಸಲಗವನ್ನು ಅಟ್ಟಾಡಿಸುತ್ತಿದ್ದರು. ಗ್ರಾಮಸ್ಥರನ್ನು ಸಮಾಧಾನ ಪಡಿಸಿ ಆನೆ ಸೆರೆ ಹಿಡಿಯಲು ಕಾರ್ಯಚರಣೆ ಆರಂಭಿಸಿದರು.ಓಡಾಡಿಸಿದ ಪುಂಡಾನೆ : ಸಾಕಾನೆಗಳನ್ನು ಕಂಡ ಸಲಗ ಚಿಕ್ಕಬೀಚನಹಳ್ಳಿ, ದೊಡ್ಡಬೀಚನಹಳ್ಳಿ, ಹಳ್ಳದಮನುಗನಹಳ್ಳಿಯ ಜಮೀನುಗಳಲ್ಲಿ ಅಡ್ಡಾಡುತ್ತಾ ಆಟವಾಡಿಸಿತು. ಇತ್ತ ಜನರಂತೂ ಕೇಕೆ ಹಾಕುತ್ತಾ, ಮುನ್ನುಗ್ಗುತ್ತಿದ್ದರಿಂದ ಕಾರ್ಯಾಚರಣೆಗೆ ಅಡಚಣೆಯಾಗುತ್ತಿತ್ತು. ಅರಣ್ಯ ಸಿಬ್ಬಂದಿ ಅತ್ತಿಂದಿತ್ತ ಜನರ ನಡುವೆಯೇ ಓಡಾಡುತ್ತಲೇ ಅರವಳಿಕೆ ಚುಚ್ಚುಮದ್ದು ನೀಡುವ ಪ್ರಥಮ ಪ್ರಯತ್ನ ವಿಫಲವಾಯಿತಾದರೂ ಮಧ್ಯಾಹ್ನ ೨.೩೦ರ ವೇಳೆಗೆ ಎಚ್.ಡಿ.ಕೋಟೆ ತಾಲೂಕಿನ ಹಳ್ಳದ ಮನುಗನಹಳ್ಳಿಯ ವಾಸುರವರ ತೋಟದಲ್ಲಿ ಅರವಳಿಕೆ ಚುಚ್ಚುಮದ್ದಿನಿಂದ ಪ್ರಜ್ಞೆ ತಪ್ಪಿ ನೆಲಕ್ಕುರುಳಿತು.
ಶ್ರೀನಗರ: ಕಣಿವೆ ನಾಡು ಕಾಶ್ಮೀರದಲ್ಲಿ ಭಾರೀ ಹಿಮಪಾತ ಆಗುತ್ತಿದ್ದು, ಎಲ್ಲಾ ವಿಮಾನಗಳನ್ನು ರದ್ದುಗೊಳಿಸಲಾಗಿದೆ. ಹವಾಮಾನ ವೈಪರೀತ್ಯದ ಕಾರಣದಿಂದ ವಿಮಾನಗಳ ಹಾರಾಟವನ್ನು…
ನವದೆಹಲಿ: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಅಂತ್ಯಕ್ರಿಯೆ ವಿಚಾರದಲ್ಲಿ ಕೆಟ್ಟ ರಾಜಕೀಯ ಮಾಡಬೇಡಿ ಎಂದು ರಾಹುಲ್ ಗಾಂಧಿಗೆ ಬಿಜೆಪಿ…
ಹನೂರು: ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯೋರ್ವನನ್ನು ಬಂಧಿಸುವಲ್ಲಿ ಹನೂರು ಪೊಲೀಸರು ಯಶಸ್ವಿಯಾಗಿದ್ದಾರೆ. ಹನೂರು ತಾಲೂಕಿನ ಉದ್ದಟಿ ಗ್ರಾಮದ ಮನ್ನಾದ…
ಮೈಸೂರು: ನೂತನ ವರ್ಷವನ್ನು ಬರಮಾಡಿಕೊಳ್ಳಲು ಜನರು ಕಾತುರದಿಂದ ಕಾಯುತ್ತಿದ್ದು, ಸಾಂಸ್ಕೃತಿಕ ನಗರಿ ಮೈಸೂರಿನಲ್ಲೂ ಜನತೆ ಎಲ್ಲಾ ಸಿದ್ಧತೆ ಕೈಗೊಂಡಿದ್ದಾರೆ. ಹೊಸ…
ಮಂಡ್ಯ: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ವಿಧಿವಶರಾಗಿರುವ ಹಿನ್ನೆಲೆಯಲ್ಲಿ ಅವರಿಗೆ ರಾಜ್ಯದಾದ್ಯಂತ ಏಳು ದಿನಗಳ ಕಾಲ ಶೋಕಾಚರಣೆ ಮಾಡಲಾಗುತ್ತದೆ. ಈ…
ನವದೆಹಲಿ: ನಾಳೆ ಆಕಾಶವಾಣಿಯ ಮನ್ ಕಿ ಬಾತ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಆಲೋಚನೆಗಳ್ನು ಹಂಚಿಕೊಳ್ಳಲಿದ್ದಾರೆ. ನಾಳೆ ಬೆಳಿಗ್ಗೆ…