ಜಿಲ್ಲೆಗಳು

ದಬ್ಬಡ್ಕ ಅರಣ್ಯದಲ್ಲಿ ಕಡವೆ ಬೇಟೆ : ಇಬ್ಬರ ಬಂಧನ

ಮಡಿಕೇರಿ: ದಬ್ಬಡ್ಕ ಅರಣ್ಯದಲ್ಲಿ ಕಡವೆ ಬೇಟೆಯಾಡಿ ಮಾಂಸ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಸಂಪಾಜೆ ವಲಯ ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಮಾಲು ಸಹಿತ ಬಂಧಿಸಿದ್ದಾರೆ. 

ದಬ್ಬಡ್ಕ ಗ್ರಾಮ ನಿವಾಸಿಗಳಾದ ಕೃಷ್ಣಪ್ಪ(47) ಹಾಗೂ ಪುರುಷೋತ್ತಮ ಕೆ.ಎಸ್.(48) ಎಂಬುವವರೇ ಬಂಧಿತ ಆರೋಪಿಗಳಾಗಿದ್ದಾರೆ.

ಬಂಧಿತರಿAದ ಸುಮಾರು 100 ಕೆ.ಜಿ ಕಡವೆ ಮಾಂಸ, ಕತ್ತಿ, ಟಾರ್ಪಲ್ ಮತ್ತಿತ್ತರ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ. ವನ್ಯ ಜೀವಿ ಸಂರಕ್ಷಣಾ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ಆರೋಪಿಗಳನ್ನು ನ್ಯಾಯಾಂಗ ವಶಕ್ಕೆ ಒಪ್ಪಿಸಲಾಗಿದೆ.

ಮಡಿಕೇರಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಎ.ಟಿ.ಪೂವಯ್ಯ ಹಾಗೂ ಸಂಪಾಜೆ ವಲಯ ಅರಣ್ಯಾಧಿಕಾರಿ ಮಧುಸೂದನ್ ಎಂ.ಕೆ. ಮಾರ್ಗದರ್ಶನದಲ್ಲಿ ಅರಣ್ಯ ರಕ್ಷಕರಾದ ಕಾರ್ತಿಕ್, ವೀಕ್ಷಕರಾದ ಕೂಸಪ್ಪ, ಮನೋಜ್ ಕುಮಾರ್ ಕಾರ್ಯಾಚರಣೆ ನಡೆಸಿದರು.

andolana

Recent Posts

ವಿಷ ಕುಡಿದು ವ್ಯಕ್ತಿ ಆತ್ಮಹತ್ಯೆ: ಗರಿಕೆ ಖಂಡಿ ಅರಣ್ಯದಲ್ಲಿ ಶವ ಪತ್ತೆ

ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…

10 hours ago

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಭೇಟಿಯಾದ ಮಾಜಿ ಸಿಎಂ ಸಿದ್ದರಾಮಯ್ಯ

ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…

10 hours ago

ಶ್ರಾವಣ ಮಾಸದ ಕೊನೆಯ ದಿನದ 108 ಕುಂಭಾಭಿಷೇಕ: ಮಲೆ ಮಹದೇಶ್ವರ ಕ್ಷೇತ್ರದಲ್ಲಿ ಭಕ್ತಿ ವೈಭವ

ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…

12 hours ago

ಹನೂರು| ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ: ಮೂವರು ಯುವಕರು ದುರ್ಮರಣ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…

12 hours ago

ಓದುಗರ ಪತ್ರ: ದಸರಾ ಚಿತ್ರೋತ್ಸವ ಮುಂದುವರಿಯಲಿ

ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…

17 hours ago

ಓದುಗರ ಪತ್ರ: ಫಿಲಂ ಸಿಟಿ ಯೋಜನೆ ಆದಷ್ಟು ಬೇಗ ಕಾರ್ಯರೂಪಕ್ಕೆ ಬರಲಿ

ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…

17 hours ago