ಜಿಲ್ಲೆಗಳು

ಕನಕದಾಸರ ಜಯಂತಿ ಅಂಗವಾಗಿ ಶಾಸ್ತ್ರೀಯ ಸಂಗೀತ ಕಾರ್ಯಕ್ರಮ

ಮೈಸೂರು : ನಗರದ ದಸರಾ ವಸ್ತು ಪ್ರದರ್ಶನದಲ್ಲಿ ಇಂದು ಕನಕದಾಸರ 535ನೇ ಜಯಂತಿಯ ಅಂಗವಾಗಿ ಪಿ ಕಾಳಿಂಗರಾವ್ ಗಾನ ಮಂಟಪದಲ್ಲಿ ವಿದ್ವಾನ್ ರಘುರಾಮ್ ತಂಡದವರ ವತಿಯಿಂದ ಭಾವ ರಾಗ ತಾಳ ಶಾಸ್ತ್ರೀಯ ಸಂಗೀತ ಕಾರ್ಯಕ್ರಮ ನಡೆಯಿತು.

ಕರ್ನಾಟಕ ವಸ್ತುಪ್ರದರ್ಶನ‌ ಪ್ರಾಧಿಕಾರದ ಅಧ್ಯಕ್ಷರಾದ ಮಿರ್ಲೆ ಶ್ರೀನಿವಾಸ ಗೌಡರವರು ಕನಕದಾಸರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ನಂತರ ಕರ್ನಾಟಕ ವಸ್ತುಪ್ರದರ್ಶನ‌ ಪ್ರಾಧಿಕಾರದ ಅಧ್ಯಕ್ಷರಾದ ಮಿರ್ಲೆ ಶ್ರೀನಿವಾಸ ಗೌಡ ರವರು ಮಾತನಾಡಿ ಕನಕದಾಸರು ಭಕ್ತಿಪಂಥದ ಹರಿದಾದರಲ್ಲಿ ಒಬ್ಬರು, ಉಡುಪಿಯ ವ್ಯಾಸರಾಯರ ಶಿಷ್ಯರಾಗಿ ಕಾಗಿನೆಲೆ ಆದಿಕೇಶವ ಅಂಕಿತನಾಮದ ಮೂಲಕ ಸಮಾಜದ ಅಂಕುಡೊಂಕುಗಳನ್ನ ಸರಿಪಡಿಸಲು ತಮ್ಮ ಕೀರ್ತನೆಗಳ ಮೂಲಕ ಸಮಸಮಾಜವನ್ನ ನಿರ್ಮಿಸಿದ ಮಹಾನ್ ಸಂತ, ತತ್ವಜ್ಞಾನಿ, ಕವಿಗಳಾದ ಕನಕದಾಸರು 15-16ನೇ ಶತಮಾನದಲ್ಲಿ ಭಕ್ತಿಮಾರ್ಗವನ್ನ ಜನಸಮೂಹಕ್ಕೆ ಸಾರಿದರು, ಮಹಾಕಾವ್ಯಕೃತಿಗಳಾದ ಮೋಹನ ತರಂಗಿಣಿ, ರಾಮಧಾನ್ಯ ಚರಿತೆ, ನಳಚರಿತ್ರೆ ಹರಿಭಕ್ತಿಸಾಗರ, ನೃಸಿಂಸ್ತವ ಮತ್ತು 316ಕ್ಕೂ ಹೆಚ್ಚು ಕೀರ್ತನೆಗಳನ್ನ ರಚಿಸಿ ಕನ್ನಡ ಭಾಷೆ ಸಾಹಿತ್ಯ ಲೋಕವನ್ನ ಶ್ರೀಮಂತಗೊಳಿಸಿದ್ದಾರೆ ಎಂದರು.


ಸಂಗೀತ ಪಕ್ಕವಾದ್ಯದಲ್ಲಿ ತಬಲವಾದನದಲ್ಲಿ ವಿದ್ವಾನ್ ನಾಗರಾಜ್, ಕೀಬೋರ್ಡ್ ನಲ್ಲಿ ರವಿಶಂಕರ್, ರಿದಂ ಪ್ಯಾಡ್ ನಲ್ಲಿ ಶ್ರೀನಿವಾಸ್ ಸೇರಿದಂತೆ ಭಾವರಾಗತಾಳ ಸಂಗೀತ ಶಾಲೆಯ ಮಕ್ಕಳು ಭಾಗವಹಿಸಿದ್ದರು.

ಕರ್ನಾಟಕ ವಸ್ತುಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷರಾದ ಮಿರ್ಲೆ ಶ್ರೀನಿವಾಸಗೌಡ, ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಕೆ.ರುದ್ರೇಶ್, ಫನ್ ವರ್ಲ್ಡ್‌ ರೆಸಾರ್ಟ್ ಮುಖ್ಯಸ್ಥಸರಾದ ಮಲ್ಲಿಕಾರ್ಜುನ, ಕಾಯಕ ಯೋಗಿ ವಿಕಾಸ ವೇದಿಕೆ ಅಧ್ಯಕ್ಷರಾದ ಡಾ.‌ಮಾಲೇಗೌಡ, ಪ್ರಧಾನಕಾರ್ಯದರ್ಶಿ ಪುರುಷೋತ್ತಮ್ ಮರೀಗೌಡ, ನಿರ್ದೇಶಕರಾದ ರೇವಣ್ಣ, ನಿರೂಪಕ ಅಜಯ್ ಶಾಸ್ತ್ರಿ, ತಿಮ್ಮೇಗೌಡ, ಮಾದೇಸ್ವಾಮಿ, ಮಾದೇಶ್, ಡಾ.ಗೋಪಿ, ಪುರುಷೋತ್ತಮ್, ಬಸವಾರಜು ಉಪನ್ಯಾಸಕರಾದ ನಿಂಗಪ್ಪ ಇನ್ನಿತರರು ಇದ್ದರು

andolanait

Recent Posts

ಮೈಸೂರು ದಸರಾ | ಯುವ ಸಂಭ್ರಮ ಉದ್ಘಾಟನೆಗೆ ವಿಜಯಪ್ರಕಾಶ್‌

ಮೈಸೂರು : ದಸರಾ ಮಹೋತ್ಸವಕ್ಕೆ ಆರಂಭದ ಮುನ್ನುಡಿಯಂತಿರುವ ಯುವ ಸಂಭ್ರಮಕ್ಕೆ ಈ ಬಾರಿ ಮೈಸೂರಿನ ಮನೆ ಮಗ ಖ್ಯಾತ ಗಾಯಕ…

10 hours ago

ಕೊಡಗು: ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ

ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್‌ನಲ್ಲಿ ತೆರಳುತ್ತಿದ್ದ 60…

16 hours ago

ಓದುಗರ ಪತ್ರ: ಗ್ರಹಣ..!

ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…

19 hours ago

ಓದುಗರ ಪತ್ರ: ಪೆಟ್ರೋಲ್ ಬಂಕ್‌ಗಳಲ್ಲಿ ಮೋಸ: ಗರಿಷ್ಟ ಕ್ರಮ ಕೈಗೊಳ್ಳಲಿ

ರಾಜ್ಯದ ೮೦೫ ಪೆಟ್ರೋಲ್ ಬಂಕ್‌ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್‌ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…

19 hours ago

ಓದುಗರ ಪತ್ರ: ಉದ್ಯೋಗ ಸೃಷ್ಟಿ : ಫ್ಲಿಪ್‌ಕಾರ್ಟ್ ನಡೆ ಸ್ವಾಗತಾರ್ಹ

ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…

20 hours ago

ಸುಗಮ ಸಂಗೀತದ ಅದ್ಬುತ ಗಾಯಕ ಮಡಿಕೇರಿ ನಾಗೇಂದ್ರ

ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…

23 hours ago