Mysore
18
broken clouds

Social Media

ಶನಿವಾರ, 27 ಡಿಸೆಂಬರ್ 2025
Light
Dark

ಕಂದಾಯ ಇಲಾಖೆ ವತಿಯಿಂದ ಸರ್ಕಾರದ ಸವಲತ್ತುಗಳ ಅರಿವು ಕಾರ್ಯಕ್ರಮ

ಹನೂರು : ಪಟ್ಟಣದ ಲೋಕೋಪಯೋಗಿ ವಸತಿ ಗೃಹದ ಸಭಾಂಗಣದಲ್ಲಿ ಕಾನೂನು ಸೇವೆಗಳ ಪ್ರಾಧಿಕಾರದ ಸಹಯೋಗದಲ್ಲಿ ಕಂದಾಯ ಇಲಾಖೆ ವತಿಯಿಂದ ಸಾರ್ವಜನಿಕರಿಗೆ ಸರ್ಕಾರದ ಸವಲತ್ತುಗಳ ಅರಿವು ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
ಕಾರ್ಯಕ್ರಮವನ್ನು ತಹಸೀಲ್ದಾರ್ ಆನಂದಯ್ಯ ಉದ್ಘಾಟಿಸಿ ಮಾತನಾಡಿ, ಕಂದಾಯ ಇಲಾಖೆಯಲ್ಲಿ ಸಾಮಾಜಿಕ ಭದ್ರತಾ ಯೋಜನೆಯಡಿ ಆರ್ಹ ಫಲಾನುಭವಿಗಳಿಗೆ ಪಿಂಚಣಿ ಸೌಲಭ್ಯ, ಜಾತಿ, ಆದಾಯ ಪ್ರಮಾಣ ಪತ್ರ, ವಾಸಸ್ಥಳ, ವಂಶವೃಕ್ಷ, ಭೂ ಹಿಡುವಳಿ, ವಿಧವಾ ಪ್ರಮಾಣ ಪತ್ರ, ಜೀವಂತ ದೃಢೀಕರಣ ಪತ್ರ, ವ್ಯವಸಾಯಗಾರರ ಪ್ರಮಾಣ ಪತ್ರ ಸೇರಿದಂತೆ ಇನ್ನಿತರೆ ಹಲವು ಪ್ರಮಾಣ ಪತ್ರಗಳ ಸೇವೆಯನ್ನು ಒದಗಿಸಲಾಗುತ್ತಿದೆ. ಅಲ್ಲದೇ ಪ್ರಕೃತಿ ವಿಕೋಪದಡಿ ಹಾನಿಯಾದ ಮನೆ, ಬೆಳೆಗಳಿಗೆ ವರದಿ ಆಧಾರದ ಮೇಲೆ ಪರಿಹಾರವನ್ನು ನೀಡಲಾಗುತ್ತಿದೆ. ಆದ್ದರಿಂದ ಪ್ರತಿಯೊಬ್ಬರೂ ಈ ಬಗ್ಗೆ ಮಾಹಿತಿ ಪಡೆದುಕೊಳ್ಳುವುದರ ಮೂಲಕ ಅಗತ್ಯ ದಾಖಲೆಗಳನ್ನು ಸಲ್ಲಿಸಿ ಸರ್ಕಾರದ ಸೌಲಭ್ಯಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ತಿಳಿಸಿದರು.
ಇದೇ ವೇಳೆ ಸಾಮಾಜಿಕ ಭದ್ರತಾ ಯೋಜನೆಯ ಫಲಾನುಭವಿಗಳಿಗೆ ಮಂಜೂರಾತಿ ಅದೇಶ ಪ್ರತಿಯನ್ನು ವಿತರಿಸಲಾಯಿತು.


ಈ ಸಂದರ್ಭದಲ್ಲಿ ಪಪಂ ಅಧ್ಯಕ್ಷೆ ಚಂದ್ರಮ್ಮ, ಉಪಾಧ್ಯಕ್ಷ ಗಿರೀಶ್, ಸದಸ್ಯರಾದ ಹರೀಶ್‍ಕುಮಾರ್, ಸೋಮಶೇಖರ್, ಮಹೇಶ್, ಆನಂದ್, ಮಮ್ತಾಜ್‍ಬಾನು, ಮಹೇಶ್‍ನಾಯ್ಕ, ಶಿರಸ್ತೇದಾರ್ ನಾಗೇಂದ್ರ, ಅರ್‍ಐ ಮಹದೇವಸ್ವಾಮಿ, ಗ್ರಾಮ ಲೆಕ್ಕಿಗ ಶೇಷಣ್ಣ ಹಾಗೂ ಇನ್ನಿತರರು ಉಪಸ್ಥಿತರಿದ್ದರು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!