ಜಿಲ್ಲೆಗಳು

ಕಂದಾಯ ಇಲಾಖೆ ವತಿಯಿಂದ ಸರ್ಕಾರದ ಸವಲತ್ತುಗಳ ಅರಿವು ಕಾರ್ಯಕ್ರಮ

ಹನೂರು : ಪಟ್ಟಣದ ಲೋಕೋಪಯೋಗಿ ವಸತಿ ಗೃಹದ ಸಭಾಂಗಣದಲ್ಲಿ ಕಾನೂನು ಸೇವೆಗಳ ಪ್ರಾಧಿಕಾರದ ಸಹಯೋಗದಲ್ಲಿ ಕಂದಾಯ ಇಲಾಖೆ ವತಿಯಿಂದ ಸಾರ್ವಜನಿಕರಿಗೆ ಸರ್ಕಾರದ ಸವಲತ್ತುಗಳ ಅರಿವು ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
ಕಾರ್ಯಕ್ರಮವನ್ನು ತಹಸೀಲ್ದಾರ್ ಆನಂದಯ್ಯ ಉದ್ಘಾಟಿಸಿ ಮಾತನಾಡಿ, ಕಂದಾಯ ಇಲಾಖೆಯಲ್ಲಿ ಸಾಮಾಜಿಕ ಭದ್ರತಾ ಯೋಜನೆಯಡಿ ಆರ್ಹ ಫಲಾನುಭವಿಗಳಿಗೆ ಪಿಂಚಣಿ ಸೌಲಭ್ಯ, ಜಾತಿ, ಆದಾಯ ಪ್ರಮಾಣ ಪತ್ರ, ವಾಸಸ್ಥಳ, ವಂಶವೃಕ್ಷ, ಭೂ ಹಿಡುವಳಿ, ವಿಧವಾ ಪ್ರಮಾಣ ಪತ್ರ, ಜೀವಂತ ದೃಢೀಕರಣ ಪತ್ರ, ವ್ಯವಸಾಯಗಾರರ ಪ್ರಮಾಣ ಪತ್ರ ಸೇರಿದಂತೆ ಇನ್ನಿತರೆ ಹಲವು ಪ್ರಮಾಣ ಪತ್ರಗಳ ಸೇವೆಯನ್ನು ಒದಗಿಸಲಾಗುತ್ತಿದೆ. ಅಲ್ಲದೇ ಪ್ರಕೃತಿ ವಿಕೋಪದಡಿ ಹಾನಿಯಾದ ಮನೆ, ಬೆಳೆಗಳಿಗೆ ವರದಿ ಆಧಾರದ ಮೇಲೆ ಪರಿಹಾರವನ್ನು ನೀಡಲಾಗುತ್ತಿದೆ. ಆದ್ದರಿಂದ ಪ್ರತಿಯೊಬ್ಬರೂ ಈ ಬಗ್ಗೆ ಮಾಹಿತಿ ಪಡೆದುಕೊಳ್ಳುವುದರ ಮೂಲಕ ಅಗತ್ಯ ದಾಖಲೆಗಳನ್ನು ಸಲ್ಲಿಸಿ ಸರ್ಕಾರದ ಸೌಲಭ್ಯಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ತಿಳಿಸಿದರು.
ಇದೇ ವೇಳೆ ಸಾಮಾಜಿಕ ಭದ್ರತಾ ಯೋಜನೆಯ ಫಲಾನುಭವಿಗಳಿಗೆ ಮಂಜೂರಾತಿ ಅದೇಶ ಪ್ರತಿಯನ್ನು ವಿತರಿಸಲಾಯಿತು.


ಈ ಸಂದರ್ಭದಲ್ಲಿ ಪಪಂ ಅಧ್ಯಕ್ಷೆ ಚಂದ್ರಮ್ಮ, ಉಪಾಧ್ಯಕ್ಷ ಗಿರೀಶ್, ಸದಸ್ಯರಾದ ಹರೀಶ್‍ಕುಮಾರ್, ಸೋಮಶೇಖರ್, ಮಹೇಶ್, ಆನಂದ್, ಮಮ್ತಾಜ್‍ಬಾನು, ಮಹೇಶ್‍ನಾಯ್ಕ, ಶಿರಸ್ತೇದಾರ್ ನಾಗೇಂದ್ರ, ಅರ್‍ಐ ಮಹದೇವಸ್ವಾಮಿ, ಗ್ರಾಮ ಲೆಕ್ಕಿಗ ಶೇಷಣ್ಣ ಹಾಗೂ ಇನ್ನಿತರರು ಉಪಸ್ಥಿತರಿದ್ದರು.

andolanait

Recent Posts

ಆಂಧ್ರ ಕರಾವಳಿಗೆ ಅರ್ನಾಬ್ ಚಂಡಮಾರುತ ಭೀತಿ: ಅ.28ರಂದು ಕರಾವಳಿ ದಾಟುವ ಸಾಧ್ಯತೆ!

ನವದೆಹಲಿ: ಬಂಗಾಳಕೊಲ್ಲಿಯಲ್ಲಿ ತೀವ್ರಗೊಂಡಿರುವ ಅರ್ನಾಬ್ ಚಂಡಮಾರುತ ನಾಳೆ, ಅಕ್ಟೋಬರ್ 28ರ ಪೂರ್ವಾಹ್ನ ಆಂಧ್ರಪ್ರದೇಶದ ಕರಾವಳಿ ದಾಟುವ ಸಾಧ್ಯತೆಯಿದೆ. ಬಾಪಟ್ಲಾ ಮತ್ತು…

5 hours ago

ಕರ್ನಾಟಕದ ಎಸ್‌ಐಆರ್‌ ಅಂತಿಮ ಮತದಾರರ ಪಟ್ಟಿ ಪ್ರಕಟ

ಬೆಂಗಳೂರು: ಕರ್ನಾಟಕದಲ್ಲಿ ವಿಶೇಷ ತೀವ್ರ ಪರಿಷ್ಕರಣೆ, ಅಂದರೆ ಎಸ್‌ಐಆರ್‌ ಬಳಿಕ ಅಂತಿಮ ಮತದಾರರ ಪಟ್ಟಿ ಪ್ರಕಟವಾಗಿದೆ. ಮುಖ್ಯ ಚುನಾವಣಾಧಿಕಾರಿ ಅನ್ಬುಕುಮಾರ್‌…

5 hours ago

ಎಸ್‌ಐಆರ್‌ ಅಂತಿಮ ಪಟ್ಟಿಯಲ್ಲಿ ಹೆಸರಿಲ್ಲವೇ? ಸೇರ್ಪಡೆಗೆ ಅರ್ಜಿ ಸಲ್ಲಿಸಲು ಅವಕಾಶ

ಬೆಂಗಳೂರು: ಎಸ್‌ಐಆರ್‌ ಅಂತಿಮ ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರಿಲ್ಲವೇ? ಹೆಸರು ಸೇರ್ಪಡೆಗೆ ಅರ್ಜಿ ಸಲ್ಲಿಸಲು ಅವಕಾಶವಿದೆ. ನಿರಂತರ ನವೀಕರಣ ವ್ಯವಸ್ಥೆಯಡಿ…

6 hours ago

ಡಿಸಿಎಂ ಪರಮೇಶ್ವರ್‌ ಆಸ್ಪತ್ರೆಗೆ ದಾಖಲು

ಬೆಂಗಳೂರು: ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಡಿಸಿಎಂ ಡಾ. ಜಿ. ಪರಮೇಶ್ವರ್ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಐಸಿಯುನಲ್ಲಿ ಅವರಿಗೆ…

7 hours ago

ಓದುಗರ ಪತ್ರ: ಕಾಯಲಿ ಉದ್ಯೋಗ ಹಕ್ಕನು!

ಖಾಸಗಿ ಕಂಪೆನಿಗಳು ಕನ್ನಡಿಗರನು ಕಡೆಗಣಿಸಿದರೆ ಸೂಕ್ತಕ್ರಮ ಕೈಗೊಳ್ಳುವುದಾಗಿ ಖಡಕ್ ಎಚ್ಚರಿಸಿದ್ದಾರೆ ಸಿಎಂ ಕನ್ನಡಿಗರ ಹಕ್ಕು ಅವಕಾಶ ಕಾಯುವುದಾಗಿಯೂ ಘೋಷಿಸಿದ್ದಾರೆ! ಹೆಮ್ಮೆ…

11 hours ago

ಓದುಗರ ಪತ್ರ: ದಸರಾ ಆಚರಣೆ: ತಜ್ಞರ ಸಮಿತಿ ರಚಿಸಲಿ

ಇತ್ತೀಚೆಗೆ ಯಶಸ್ವಿಯಾಗಿ ಮುಕ್ತಾಯಗೊಂಡ ಈ ವರ್ಷದ ದಸರಾ ಮಹೋತ್ಸವದ ಬಗ್ಗೆ ನಾನಾ ರೀತಿಯ ಟೀಕೆ ಟಿಪ್ಪಣಿಗಳು ವ್ಯಕ್ತವಾಗುತ್ತಿವೆ. ಮುಖ್ಯವಾಗಿ ದಲಿತ…

11 hours ago