ಮಡಿಕೇರಿ : ನಗರದ ಓಂಕಾರ್ ಸ್ನೇಹಿತರ ಬಳಗದ ವತಿಯಿಂದ ಪುನೀತ್ ರಾಜ್‍ಕುಮಾರ್ ಗೆ ಪುಷ್ಪ ನಮನ ಸಲ್ಲಿಸುವ ಮೂಲಕ 67ನೇ ಕನ್ನಡ ರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.
ನಗರದ ಆಂಜನೇಯ ದೇವಾಲಯದ ಬಳಿಯ ಓಂಕಾರ್ ಆಟೋ ರಿಕ್ಷಾ ನಿಲ್ದಾಣದಲ್ಲಿ ಗ್ರಾಮಾಂತರ ವೃತ್ತ ನಿರೀಕ್ಷಕ ಅನೂಪ್ ಮಾದಪ್ಪ ಧ್ವಜಾರೋಹಣ ನೆರವೇರಿಸಿದರು.
ನಂತರ ಸ್ನೇಹಿತ ಬಳಗದಿಂದ ಆಂಜನೇಯ ದೇವಾಲಯದಲ್ಲಿ ಪುನೀತ್ ರಾಜ್‍ಕುಮಾರ್ ಅವರ ಹೆಸರಿನಲ್ಲಿ ವಿಶೇಷ ಪೂಜೆ ಸಲ್ಲಿಸಿ ಸಿಹಿ ಹಂಚಿದರು.
ಇದೇ ಸಂದರ್ಭ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಪುನೀತ್ ಭಾವಚಿತ್ರಕ್ಕೆ ಪುಷ್ಪರ್ಚನೆ ಮಾಡಿದರು.





