ಜಿಲ್ಲೆಗಳು

ಕೊಳ್ಳೇಗಾಲದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ

ಜಿಲ್ಲಾ ಕಸಾಪ ಕಾರ್ಯಕಾರಿಣಿ ಸಭೆಯಲ್ಲಿ ತೀರ್ಮಾನ

ಚಾಮರಾಜನಗರ: ಹನ್ನೇರಡನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಕೊಳ್ಳೇಗಾಲ ಪಟ್ಟಣದಲ್ಲಿ ಜನವರಿ ಕೊನೆಯ ವಾರ ಅಥವಾ ಫೆಬ್ರವರಿ ಮೊದಲ ವಾರದಲ್ಲಿ ನಡೆಸಲು ಸರ್ವಾನುಮತದಿಂದ ತೀರ್ಮಾನಿಸಲಾಯಿತು.
ನಗರದ ಜಿಲ್ಲಾ ಕಸಾಪ ಕಚೇರಿಯಲ್ಲಿ ಜಿಲ್ಲಾಧ್ಯಕ್ಷ ಎಂ ಶೈಲಕುಮಾರ್ ಅವರ ಅಧ್ಯಕ್ಷತೆಯಲ್ಲಿ ನಡೆದ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಈ ಬಗ್ಗೆ ಚರ್ಚಿಸಲಾಯಿತು.
ಈ ಸಂಬoಧ ಕೊಳ್ಳೇಗಾಲ ಕ್ಷೇತ್ರದ ಶಾಸಕರಾದ ಎನ್.ಮಹೇಶ್ ಅವರೊಂದಿಗೆ ಸಮ್ಮೇಳನ ನಡೆಸುವ ಕುರಿತು ಈಗಾಗಲೆ ಚರ್ಚಿಸಲಾಗಿದೆ. ಉಳಿದಂತೆ ಅಲ್ಲಿನ ನಗರಸಭೆ, ತಾಲ್ಲೂಕು ಪಂಚಾಯಿತಿ ಅಧ್ಯಕ್ಷರು, ಜನಪ್ರತಿನಿಧಿಗಳು, ಅಧಿಕಾರಿಗಳು, ಸಾಹಿತ್ಯ ಹಾಗೂ ಕನ್ನಡಪರ ಸಂಘ ಸಂಸ್ಥೆಗಳ ಮುಖಂಡರ ಸಭೆ ಕರೆದು ಸ್ಥಳ, ದಿನಾಂಕ ಸೇರಿದಂತೆ ೨ ದಿನಗಳು ನಡೆಯುವ ಸಮ್ಮೇಳನದ ರೂಪುರೇಷೆಗಳನ್ನು ಚರ್ಚಿಸಲು ನಿರ್ಧರಿಸಲಾಯಿತು.
ಸಮಿತಿಯ ಮುಂದಿನ ಸಭೆಯಲ್ಲಿ ಸಮ್ಮೇಳನದ ಸರ್ವಾಧ್ಯಕ್ಷರು, ಉದ್ಘಾಟಕರು, ಅತಿಥಿಗಳು, ಇತರೆ ಅತಿಥಿಗಳನ್ನು ಆಯ್ಕೆ ಮಾಡುವ ಕುರಿತು ತೀರ್ಮಾನಿಸಲಾಯಿತು.
ಸಭೆಯಲ್ಲಿ ಕಸಾಪದ ಗೌರವ ಕಾರ್ಯದರ್ಶಿ ಮಹಾಲಿಂಗಗಿರ್ಗಿ, ನಾಗಲಕ್ಷ್ಮಿ. ಗೌರವ ಕೋಶಾಧ್ಯಕ್ಷ ನಿರಂಜನಕುಮಾರ್. ಗೌರವಾಧ್ಯಕ್ಷ ಎ.ಎಂ.ನಾಗಮಲ್ಲಪ್ಪ, ಸಂಘ ಸಂಸ್ಥೆಗಳ ಪ್ರತಿನಿಧಿ ಸೋಮಶೇಖರ ಬಿಸಲ್ವಾಡಿ, ವಿವಿಧ ತಾಲ್ಲೂಕುಗಳ ಅಧ್ಯಕ್ಷರಾದ ಸುರೇಶ್ ಋಗ್ವೇದಿ, ನಾಗರಾಜು ಕೊಂಗರಳ್ಳಿ, ಯರಿಯೂರು ನಾಗೇಂದ್ರ, ಬಿ.ಟಿ.ಜಗತ್‌ಪ್ರಕಾಶ್, ಉಪಾಧ್ಯಕ್ಷರಾದ ಆರ್.ಡಿ. ನಾಗರಾಜು, ಆರ್.ಎಚ್.ನಂಜುoಡಸ್ವಾಮಿ, ಮಹಿಳಾ ಸದಸ್ಯರಾದ ಗುರುಲಿಂಗಮ್ಮ ನಾಗೇಂದ್ರ, ಮಂಜುಳಾ ನಾಗರಾಜು ಭಾಗವಹಿಸಿದ್ದರು.

andolanait

Recent Posts

ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಒ

ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…

4 mins ago

ಅರ್ಥಪೂರ್ಣವಾಗಿ ಕನ್ನಡ ರಾಜ್ಯೋತ್ಸವ ಆಚರಣೆ – ಡಾ. ಪಿ ಶಿವರಾಜ್

ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…

32 mins ago

ನಗರದ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ: ಜಿ ಟಿ ದೇವೇಗೌಡ

ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…

2 hours ago

ಹನೂರು: ಗುಂಡಿಮಯವಾದ ರಸ್ತೆ, ಸಾಮಾಜಿಕ ಜಾಲತಾಣ ಮೂಲಕ ಯುವಕ ವ್ಯಂಗ್ಯ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…

2 hours ago

ಇಶಾ ಫೌಂಡೇಶನ್‌ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂಕೋರ್ಟ್‌

ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್‌ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್‌ವಾಶ್‌ ಮಾಡಲಾಗಿದೆ ಎಂಬ…

3 hours ago

ಮಡಿಕೇರಿ: ಮಗನಿಂದಲೇ ತಂದೆಯ ಹತ್ಯೆ..

ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…

4 hours ago