ಮೈಸೂರು : ಕೆ ಎಂ ಪಿ ಕೆ ಚಾರಿಟಬಲ್ ಟ್ರಸ್ಟ್ ವತಿಯಿಂದ ಕನ್ನಡ ರಾಜ್ಯೋತ್ಸವ ಹಾಗೂ ದೀಪಾವಳಿ ಅಂಗವಾಗಿ ಡಿ ದೇವರಾಜ ಅರಸು ರಸ್ತೆ ವಿನೋಬ ರಸ್ತೆ ಶಿವರಾಂಪೇಟೆ ಸುತ್ತಮುತ್ತಲ ಅಂಗಡಿ ಮುಂಗಟ್ಟುಗಳಿಗೆ ತೆರಳಿ ಗುಲಾಬಿ ಹೂವನ್ನು ನೀಡಿ ಕನ್ನಡ ಪದಗಳನ್ನು ಸರಿಯಾದ ರೀತಿಯಲ್ಲಿ ಬಳಸುವಂತೆ ಅಭಿಯಾನ ನಡೆಸಲಾಯಿತು.
ಇತ್ತೀಚೆಗೆ ಸ್ಥಳೀಯ ಹಬ್ಬಗಳ ಹೆಸರನ್ನು ಅಪಭ್ರಂಶ ಗೊಳಿಸುತ್ತಿರುವ ಉದಾಹರಣೆಗಳು ಹೆಚ್ಚುತ್ತಿವೆ. ಇತ್ತೀಚಿನ ದಿನಗಳಲ್ಲಿ ದೀಪಾವಳಿಯನ್ನು ದಿವಾಳಿ ಎಂದು ಶುಭ ಕೋರುವುದು ಹಾಗೆಯೇ ದಸರಾವನ್ನು ದುಸ್ಸೆರಾ ಎಂದು ತಪ್ಪಾಗಿ ಶುಭಕೋರುತ್ತಿರುವ ಅನ್ಯ ಭಾಷೆ ಶೈಲಿಯಲ್ಲಿ ಪದಬಳಕೆ ಶುಭ ಕೋರುವುದು ಖಂಡನೀಯ ಅದರ ಅರ್ಥವೇ ಬೇರೆಯಿರುತ್ತದೆ, ಹಾಗಾಗಿ ನಮ್ಮ ಕೆಎಂಪಿಕೆ ಚಾರಿಟಬಲ್ ಟ್ರಸ್ಟ್ ನ ವತಿಯಿಂದ ಎಲ್ಲಾ ಅಂಗಡಿ ಮುಂಗಟ್ಟುಗಳಿಗೆ ತೆರಳಿ ಗುಲಾಬಿ ನೀಡಿ ಈ ಮನವಿ ಮಾಡಿಕೊಳ್ಳಲಾಯಿತು.
ಕೆಲವು ಅಂಗಡಿ ಮುಂಗಟ್ಟುಗಳಲ್ಲಿ ದೀಪಾವಳಿಯನ್ನು ದಿವಾಳಿಯೆಂದು ಬರೆದು ಶುಭಕೋರುತ್ತಿರುವದನ್ನು ಖಂಡಿಸಿ ಅವರಿಗೆ ತಿಳಿಹೇಳಿ ದಯಮಾಡಿ ಕನ್ನಡವನ್ನು ಸರಿಯಾಗಿ ಪ್ರಯೋಗಿಸಿ ಗೌರವಿಸಿ ಎಂದು ಮನವಿ ಮಾಡಿಕೊಂಡರು ನಂತರ ಮಾತನಾಡಿದ ಕೆಎಂಪಿಕೆ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ವಿಕ್ರಂ ಅಯ್ಯಂಗಾರ್ ದೀಪಾವಳಿ ದಿವಾಳಿ”ಯಾಗದಿರಲಿ.ಹಬ್ಬದ ದಿನಗಳು ಹತ್ತಿರ ಬರುತ್ತಿದ್ದಂತೆ ಗ್ರಾಹಕರಿಗೆ ಶುಭಾಶಯ ತಿಳಿಸಲು ಹಲವಾರು ಉದ್ದಿಮೆಗಳು ಕನ್ನಡಿಗರಿಗೆ ಉತ್ತರ ಭಾರತದ ಭಾಷೆಯಲ್ಲೇ ‘ದಿವಾಳಿ ‘ಹಬ್ಬದ ಶುಭಾಶಯಗಳನ್ನು ತಿಳಿಸುತ್ತವೆ. ಬ್ಯಾಂಕ್‍ಗಳು .ಅದರಲ್ಲೂ ಕರ್ನಾಟಕದಲ್ಲಿಯೇ ಹುಟ್ಟಿ ಬೆಳೆದ ಬ್ಯಾಂಕ್‍ಗಳು .ದಿವಾಳಿ ಹಬ್ಬದ ಶುಭಾಶಯಗಳು ಎಂದು ಗ್ರಾಹಕರಿಗೆ ತಿಳಿಸುತ್ತಿರುವುದು ನೋಡಿದರೆ. ಕನ್ನಡದ ಬಗ್ಗೆ ಇವರಿಗೆಷ್ಟು ಅಭಿಮಾನವಿದೆ ಮಾಹಿತಿಯಿದೆ ಎಂಬುದರ ಬಗ್ಗೆ ಸಂದೇಹ ವ್ಯಕ್ತವಾಗುತ್ತದೆ ಎಂದರು.
ಕನ್ನಡದಲ್ಲಿ ದಿವಾಳಿ ಎಂದರೆ ಎಲ್ಲವನ್ನೂ ಕಳೆದುಕೊಳ್ಳುವುದು ಎಂದರ್ಥವಿದೆ .’ದಿವಾಳಿ ಹಬ್ಬ’ ಎಂದರೆ ಕನ್ನಡಿಗರು ಏನೆಂದು ತಿಳಿದುಕೊಳ್ಳಬೇಕು? ಅದರಲ್ಲೂ ಕನ್ನಡಿಗರು ಹಣ ಇಟ್ಟಿರುವ ಬ್ಯಾಂಕುಗಳೇ ಹೀಗೆ ಹಾರೈಸಿದರೆ! ಕನ್ನಡಿಗರಿಗೆ ಪರಿಚಯವಿರುವ ಹೆಸರುಗಳನ್ನೇ ಬಳಸಲು ತೊಂದರೆ ಏನು ?
ಈ ಬಗ್ಗೆ ಕನ್ನಡ ಪ್ರಾಧಿಕಾರವು ಕ್ರಮ ಕೈಗೊಳ್ಳಲಿ ಎಂದು ಹೇಳಿದರು.
ಶೇ.30ರಷ್ಟು ಉತ್ಪಾದನೆ ಕುಸಿತ ; ಉತ್ತರ ಕೊಡಗಿನ ಭಾಗದಲ್ಲಿ ಹೆಚ್ಚಿನ ಬೆಳೆ ನಷ್ಟ ನವೀನ್ ಡಿಸೋಜ ಮಡಿಕೇರಿ: ಈ ಬಾರಿಯ…
ಭೇರ್ಯ ಮಹೇಶ್ ಕೆ.ಆರ್.ನಗರ : ಭತ್ತದ ನಾಡು ಎಂದೇ ಪ್ರಖ್ಯಾತಿ ಹೊಂದಿರುವ ಕೆ.ಆರ್.ನಗರ ಮತ್ತು ಸಾಲಿಗ್ರಾಮ ತಾಲ್ಲೂಕುಗಳಲ್ಲಿ ಇದೀಗ ಭತ್ತದ…
ದೊಡ್ಡ ಕವಲಂದೆ : ಗಬ್ಬೆದ್ದು ನಾರುತ್ತಿರುವ ಚರಂಡಿಯ ಕೊಳಚೆ ನೀರಿನಿಂದ ಗ್ರಾಮ ಸ್ಥರಿಗೆ ಸಾಂಕ್ರಾಮಿಕ ರೋಗಗಳು ಹರಡು ತ್ತಿದ್ದು, ಗ್ರಾಮ…
ಸರಗೂರು : ಪಟ್ಟಣ ಪಂಚಾಯಿತಿ ವ್ಯಾಪ್ತಿ ಯಲ್ಲಿ ಬೀದಿ ನಾಯಿಗಳ ಹಾವಳಿಯಿಂದ ಜನ ಸಾಮಾನ್ಯರು ತತ್ತರಿಸಿ ಆತಂಕದಲ್ಲಿದ್ದರೂ ನಿಯಂ ತ್ರಣ…
ನುರಿತ ತಜ್ಞರ ತಂಡದಿಂದ ಕೆರೆ ಸ್ವಚ್ಛತೆ ಆರಂಭಿಸಲು ತಯಾರಿ ಮೈಸೂರು : ಪ್ರವಾಸಿಗರು ಹಾಗೂ ವಾಯುವಿಹಾರಿಗಳ ನೆಚ್ಚಿನ ತಾಣವಾದ ಕುಕ್ಕರಹಳ್ಳಿ…
ಮೈಸೂರು ನಗರದ ಪ್ರತಿಯೊಂದೂ ವಾರ್ಡ್‌ನ ಪ್ರತಿ ಮಾರ್ಗದಲ್ಲೂ ಮೈಸೂರು ಮಹಾ ನಗರ ಪಾಲಿಕೆಯಿಂದ ವಾರ್ಡ್ ಸಂಖ್ಯೆ, ವಾರ್ಡ್‌ನ್ನು ಪ್ರತಿನಿಧಿಸುವ ಪಾಲಿಕೆ…