ಜಿಲ್ಲೆಗಳು

ಕಪಿಲಾ ನದಿಗೆ ಮತ್ತೊಂದು ಸೇತುವೆ

ಹದಿನಾರು-ನಂಜನಗೂಡು-ಸರಗೂರು ರಸ್ತೆ ಸಂಪರ್ಕ

೨೭ ಕೋಟಿ ರೂ. ಅಂದಾಜು ವೆಚ್ಚ: ಸಂಪುಟ ಒಪ್ಪಿಗೆ

ಬೆಂಗಳೂರು: ಮೈಸೂರು ಜಿಲ್ಲೆ, ನಂಜನಗೂಡು ತಾಲ್ಲೂಕಿನ ಮೈಸೂರು- ಹದಿನಾರು (ರಾಜ್ಯ ಹೆದ್ದಾರಿಯಾಗಿ ಮೇಲರ್ಜೆಗೇರಿಸಲಾಗಿದೆ) ಹಾಗೂ ಶಿರ-ನಂಜನಗೂಡು ರಸ್ತೆ (ರಾಜ್ಯ ಹೆದ್ದಾರಿ-೮೪)ಗೆ ಸಂಪರ್ಕಿಸಲು ಹದಿನಾರು ಮತ್ತು ಸರಗೂರು ರಸ್ತೆಯ ಮಾರ್ಗವಾಗಿ ಕಬಿನಿ ನದಿಗೆ ಅಡ್ಡಲಾಗಿ ರೂ. ೨೭ ಕೋಟಿಗಳ ಅಂದಾಜು ಮೊತ್ತದಲ್ಲಿ ಸೇತುವೆ ನಿರ್ಮಾಣದ  ಕಾಮಗಾರಿಗೆ ರಾಜ್ಯ ಸಚಿವ ಸಂಪುಟ ಆಡಳಿತಾತ್ಮಕ ಅನುಮೋದನೆ ನೀಡಿದೆ.
ಗುರುವಾರ ನಡೆದ ಸಂಪುಟ ಸಭೆಯ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಸಿ. ಮಾಧುಸ್ವಾಮಿ ಮಾಹಿತಿ ನೀಡಿದರು.
ರಾಜ್ಯದ ವಿವಿಧ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ೩೯ ಮೊಕದ್ದಮೆಗಳನ್ನು ಹಿಂಪಡೆಯಲು ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ. ಹಿಂಪಡೆದುಕೊಂಡ ಮೊಕದ್ದಮೆಗಳು ಗಂಭೀರ ಸ್ವರೂಪದ್ದಲ್ಲ, ಜನ ಪರ ಹೋರಾಟದಲ್ಲಿ ಪಾಲ್ಗೊಂಡವರ ವಿರುದ್ಧ ದಾಖಲಾಗಿದ್ದ ಸಾಮಾನ್ಯ ಪ್ರಕರಣಗಳಾಗಿವೆ ಎಂದು ಸ್ಪಷ್ಟಪಡಿಸಿದರು.
ಒಟ್ಟು ೪೧ ಪ್ರಕರಣಗಳಲ್ಲಿ ೨ ಪ್ರಕರಣಗಳು ಜನ ಪ್ರತಿನಿಧಿ ಕಾಯ್ದೆ ವ್ಯಾಪ್ತಿಯಲ್ಲಿ ಇರುವುದರಿಂದ ಅವನ್ನು ವಾಪಸ್ ಪಡೆಯುತ್ತಿಲ್ಲ ಎಂದು ತಿಳಿಸಿದರು.
ಆಜಾದಿ ಕಾ ಅಮೃತ್ ಮಹೋತ್ಸವ ಆಚರಣೆಯ ಅಂಗವಾಗಿ ಭಾರತ ಸರ್ಕಾರವು ನಿಗದಿಪಡಿಸಿರುವ ವಾರ್ಗಸೂಚಿಗಳನ್ವಯ ಒಟ್ಟು ೪೨ ಅರ್ಹ ನಿರ್ದಿಷ್ಟ ವರ್ಗದ ಶಿಕ್ಷಾ ಬಂದಿಗಳನ್ನು ೨೬ನೇ ಜನವರಿ ೨೦೨೩ರ ಗಣರಾಜ್ಯೋತ್ಸವದ ಪ್ರಯುಕ್ತ ಎರಡನೇ ಹಂತದಲ್ಲಿ ವಿಶೇಷ  ಮಾಫ್ಬಿತಿಯೊಂದಿಗೆ ಬಿಡುಗಡೆಗೆ ಮಾಡಲು ರಾಜ್ಯಪಾಲರಿಗೆ ಶಿಫಾರಸು ಮಾಡಲು ನಿರ್ಧರಿಸಲಾಗಿದೆ ಎಂದರು.

ಸಂಪುಟ ಸಭೆಯಲ್ಲಿ ಕೈಗೊಂಡ ಇತರ ನಿರ್ಧಾರಗಳು
* ವಿವಿಧ ಠಾಣೆಗಳಲ್ಲಿ ದಾಖಲಾಗಿರುವ ೩೯ ಮೊಕದ್ದಮೆಗಳು ರದ್ದು
* ಕರ್ನಾಟಕ ಯುವ ನೀತಿ-೨೦೨೨ ಕ್ಕೆ ಅನುಮೋದನೆ.
* ಬೀದಿ ಬದಿ ವ್ಯಾಪಾರಿಗಳಿಗೆ ಸಾಲ ನೀಡುವ ಯೋಜನೆಯಲ್ಲಿ ನೋಂದಣಿ ಶುಲ್ಕ ರಿಯಾಯಿತಿ
* ೨೦+೧ ಕುರಿ/ಮೇಕೆ ಘಟಕಗಳನ್ನು ಅರ್ಹ ಕುರಿಗಾಹಿಗಳಿಗೆ ರೂ. ೧,೭೫,೦೦೦/- ೨೦,೦೦೦ ಘಟಕ ವೆಚ್ಚ ಸೇರಿದಂತೆ ಒಟ್ಟಾರೆ ರೂ ೩೫೪.೫೦ ಕೋಟಿಗಳ ವೆಚ್ಚದಲ್ಲಿ ‘‘ಅಮೃತ ಸ್ವಾಭಿಮಾನಿ ಕುರಿಗಾಹಿ ಯೋಜನೆಯನ್ನು ಅನುಷ್ಠಾನಗೊಳಿಸುವುದಕ್ಕಾಗಿ ತಾತ್ವಿಕ ಆಡಳಿತಾತ್ಮಕ ಆದೇಶಕ್ಕೆ ಘಟನೋತ್ತರ ಅನುಮೋದನೆ.
* ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳು (ಒಲಿಂಪಿಕ್ಸ್, ೨೦೨೨ ಣ ಪ್ಯಾರಾಲಿಂಪಿಕ್ಸ್, ಏಷ್ಯನ್ ಗೇಮ್ಸ್ ಮತ್ತು ಕಾಮನ್‌ವೆಲ್ತ್ ಗೇಮ್ಸ್‌ಗಳಲ್ಲಿ ಪದಕ ವಿಜೇತರಾದ ವ್ಯಕ್ತಿಗಳನ್ನು ಕೆಲವು ಹುದ್ದೆಗಳಿಗೆ ಮಾಡುವ ನೇಮಕಾತಿ) (ವಿಶೇಷ) ನಿಯಮಗಳು, ೨೦೨೨‘ಕ್ಕೆ ಅನುಮೋದನೆ. ಸಿ ಮತ್ತು ಡಿ ಕೆಟಗರಿ ಹುದ್ದೆ.

andolanait

Recent Posts

ವರ್ತಕರಿಗೆ ಹಬ್ಬದ ನಿರಾಳತೆ: ದೀಪಾವಳಿ ನಂತರಕ್ಕೆ UPI ಮರ್ಚೆಂಟ್‌ ಶುಲ್ಕ ಜಾರಿ ಮುಂದೂಡಿಕೆ

ನವದೆಹಲಿ: ವರ್ತಕರಿಗೆ ದೀಪಾವಳಿ ಸಂದರ್ಭದಲ್ಲಿ ತಾತ್ಕಾಲಿಕ ನಿರಾಳತೆ ಸಿಕ್ಕಿದೆ. ಅಕ್ಟೋಬರ್‌ 15ರಿಂದ ಜಾರಿಯಾಗಬೇಕಿದ್ದ ಆಯ್ದ UPI ಮರ್ಚೆಂಟ್‌ ಪಾವತಿಗಳ ಮೇಲಿನ…

15 hours ago

ಸ್ಟಿಂಗ್ ಆಪರೇಷನ್ ಬಗ್ಗೆ ಕುಮಾರಸ್ವಾಮಿಯನ್ನೇ ಕೇಳಿ: ಸಚಿವ ಪುಟ್ಟರಂಗಶೆಟ್ಟಿ

ಮೈಸೂರು: ರಾಜ್ಯದಲ್ಲಿ ಸದ್ದು ಮಾಡುತ್ತಿರುವ ಸ್ಟಿಂಗ್ ಆಪರೇಷನ್ ವಿಚಾರಕ್ಕೆ ಸಂಬಂಧಿಸಿದಂತೆ ಪುಟ್ಟರಂಗಶೆಟ್ಟಿ ಮೈಸೂರಿನಲ್ಲಿ ಪ್ರತಿಕ್ರಿಯಿಸಿದ್ದಾರೆ. “ಸ್ಟಿಂಗ್ ಆಪರೇಷನ್ ಅಂದರೇನು ಎಂಬುದು…

16 hours ago

ಸ್ಟಿಂಗ್ ಆಪರೇಷನ್ ಆರೋಪ: ಸಾಕ್ಷಿ ಬಿಡುಗಡೆಗೆ ಶಾಸಕ ತನ್ವೀರ್ ಸೇಠ್ ಒತ್ತಾಯ

ಮೈಸೂರು: ಸ್ಟಿಂಗ್ ಆಪರೇಷನ್ ಬಗ್ಗೆ ದಿನಕ್ಕೊಂದು ಹೇಳಿಕೆ ನೀಡುವ ಬದಲು, ದಾಖಲೆಗಳಿದ್ದರೆ ಬಿಡುಗಡೆ ಮಾಡಲಿ ಎಂದು ಶಾಸಕ ತನ್ವೀರ್ ಸೇಠ್…

16 hours ago

ಅಪಪ್ರಚಾರ ನೋಡ್ಕೊಂಡು ಸುಮ್ಮನಿರಲು ಆಗುತ್ತಾ? ತಂದೆಯವರ ತೇಜೋವಧೆಗೆ ಷಡ್ಯಂತ್ರ ನಡೆಯುತ್ತಿದೆ: ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ

ಮೈಸೂರು: ಅಪಪ್ರಚಾರ ನೋಡ್ಕೊಂಡು ಸುಮ್ಮನಿರಲು ಆಗುತ್ತಾ? ತಂದೆಯವರ ತೇಜೋವಧೆಗೆ ಷಡ್ಯಂತ್ರ ನಡೆಯುತ್ತಿದೆ: ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ಮೈಸೂರು: ಮಾಜಿ ಮುಖ್ಯಮಂತ್ರಿ…

17 hours ago

ಕಾಡಾನೆ ದಾಳಿ: ರೈತ ಸಾವು

ನಂಜನಗೂಡು: ಜಮೀನಿಗೆ ರಾತ್ರಿ ಕಾವಲು ಕಾಯಲು ತೆರಳಿದ್ದ ರೈತ, ಬೆಳಿಗ್ಗೆ ಮನೆಗೆ ಮರಳುವಾಗ ಕಾಡಾನೆ ದಾಳಿಗೆ ಬಲಿಯಾಗಿದ್ದಾರೆ. ನಂಜನಗೂಡು ತಾಲ್ಲೂಕಿನ…

17 hours ago

ಓದುಗರ ಪತ್ರ: ರಾಜಕಾರಣಿಗಳದ್ದು ‘ಆಚಾರವಿಲ್ಲದ ನಾಲಿಗೆ’ ಆಗಬಾರದಲ್ಲವೇ?

ಕೆಲವು ಜನಪ್ರತಿನಿಧಿಗಳೂ ಸೇರಿದಂತ ಹಲವು ರಾಜಕಾರಣಿಗಳು ಸಾರ್ವಜನಿಕ ವೇದಿಕೆಗಳಲ್ಲಿ ಹಾಗೂ ಇತರ ಸಭೆ-ಸಮಾರಂಭಗಳಲ್ಲಿ ಪ್ರಜ್ಞಾವಂತರೇನೂ ಸಾಮಾನ್ಯ ಜನರಿಗೂ ಮುಜುಗರವಾಗುವಂತಹ ಮಾತುಗಳನ್ನು…

20 hours ago