Mysore
26
haze

Social Media

ಶನಿವಾರ, 20 ಡಿಸೆಂಬರ್ 2025
Light
Dark

ಕರ್ನಾಟಕ ಜಾನಪದ ಪರಿಷತ್ತಿನ ಜಿಲ್ಲಾಧ್ಯಕ್ಷರಾಗಿ ಡಾ.ತಿಮ್ಮೇಗೌಡ ನೇಮಕ

ಮೈಸೂರು: ಮೈಸೂರಿನ ಎಸ್‌ಬಿಆರ್‌ಆರ್ ಮಹಾಜನ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥ ಡಾ.
ಎಚ್.ಆರ್. ತಿಮ್ಮೇಗೌಡ ಅವರನ್ನು ಕರ್ನಾಟಕ ಜಾನಪದ ಪರಿಷತ್ತಿನ (ಜಾನಪದ ಲೋಕ) ಮೈಸೂರು ಜಿಲ್ಲಾಧ್ಯಕ್ಷರನ್ನಾಗಿ ನೇಮಕ
ವಾಡಲಾಗಿದೆ. ಕಳೆದ ಮೂರು ದಶಕಗಳಿಂದ ಮಹಾಜನ ಕಾಲೇಜಿನಲ್ಲಿ ಕನ್ನಡ ಪ್ರಾಧ್ಯಾಪಕರಾಗಿ, ಸಂಘಟಕರಾಗಿ, ಮೈಸೂರು ವಿಶ್ವವಿದ್ಯಾನಿಲಯದ ಪದವಿ ಕನ್ನಡ ಅಧ್ಯಾಪಕರ ಸಂಘದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿರುವ ಇವರು ‘ಒಳದನಿ’,‘ಕೋಳಲದನಿ’, ‘ಸಂವೇದನೆ’, ‘ಭಾರತೀಯ ಕಾವ್ಯ ಮೀಮಾಂಸೆ-ಸಮೀಕ್ಷೆ ಒಂದು ಅವಲೋಕನ’,‘ಸಂಕ್ಷಿಪ್ತ ಶಬ್ದಮಣಿದರ್ಪಣ’, ‘ಕನ್ನಡ ಸಾಹಿತ್ಯದಲ್ಲಿ ಪ್ರಗತಿಶೀಲರ ಸಣ್ಣಕತೆಗಳು ಹಾಗೂ ಇನ್ನಿತರ ಕೃತಿಗಳನ್ನು ರಚಿಸಿ ಕನ್ನಡ ಸಾಹಿತ್ಯ ಸೇವೆಯಲ್ಲಿ ನಿರತರಾಗಿದ್ದಾರೆ. ಇವರಿಗೆ ‘ಉತ್ತಮ ಶಿಕ್ಷಕ ಪ್ರಶಸ್ತಿ’, ‘ಉತ್ತಮ ಎನ್.ಎಸ್.ಎಸ್. ಕಾರ್ಯಕ್ರಮ ಅಧಿಕಾರಿ ಪ್ರಶಸ್ತಿ’,‘ಪರಿಸರಮಿತ್ರ ಪ್ರಶಸ್ತಿ’ ಮತ್ತು ‘ಆದರ್ಶ ಗುರು ಪ್ರಶಸ್ತಿ’ಗಳು ಲಭಿಸಿದೆ ಎಂದು ತಿಳಿಸಲಾಗಿದೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!