ಜಿಲ್ಲೆಗಳು

ಕರ್ನಾಟಕ ಜಾನಪದ ಪರಿಷತ್ತಿನ ಜಿಲ್ಲಾಧ್ಯಕ್ಷರಾಗಿ ಡಾ.ತಿಮ್ಮೇಗೌಡ ನೇಮಕ

ಮೈಸೂರು: ಮೈಸೂರಿನ ಎಸ್‌ಬಿಆರ್‌ಆರ್ ಮಹಾಜನ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥ ಡಾ.
ಎಚ್.ಆರ್. ತಿಮ್ಮೇಗೌಡ ಅವರನ್ನು ಕರ್ನಾಟಕ ಜಾನಪದ ಪರಿಷತ್ತಿನ (ಜಾನಪದ ಲೋಕ) ಮೈಸೂರು ಜಿಲ್ಲಾಧ್ಯಕ್ಷರನ್ನಾಗಿ ನೇಮಕ
ವಾಡಲಾಗಿದೆ. ಕಳೆದ ಮೂರು ದಶಕಗಳಿಂದ ಮಹಾಜನ ಕಾಲೇಜಿನಲ್ಲಿ ಕನ್ನಡ ಪ್ರಾಧ್ಯಾಪಕರಾಗಿ, ಸಂಘಟಕರಾಗಿ, ಮೈಸೂರು ವಿಶ್ವವಿದ್ಯಾನಿಲಯದ ಪದವಿ ಕನ್ನಡ ಅಧ್ಯಾಪಕರ ಸಂಘದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿರುವ ಇವರು ‘ಒಳದನಿ’,‘ಕೋಳಲದನಿ’, ‘ಸಂವೇದನೆ’, ‘ಭಾರತೀಯ ಕಾವ್ಯ ಮೀಮಾಂಸೆ-ಸಮೀಕ್ಷೆ ಒಂದು ಅವಲೋಕನ’,‘ಸಂಕ್ಷಿಪ್ತ ಶಬ್ದಮಣಿದರ್ಪಣ’, ‘ಕನ್ನಡ ಸಾಹಿತ್ಯದಲ್ಲಿ ಪ್ರಗತಿಶೀಲರ ಸಣ್ಣಕತೆಗಳು ಹಾಗೂ ಇನ್ನಿತರ ಕೃತಿಗಳನ್ನು ರಚಿಸಿ ಕನ್ನಡ ಸಾಹಿತ್ಯ ಸೇವೆಯಲ್ಲಿ ನಿರತರಾಗಿದ್ದಾರೆ. ಇವರಿಗೆ ‘ಉತ್ತಮ ಶಿಕ್ಷಕ ಪ್ರಶಸ್ತಿ’, ‘ಉತ್ತಮ ಎನ್.ಎಸ್.ಎಸ್. ಕಾರ್ಯಕ್ರಮ ಅಧಿಕಾರಿ ಪ್ರಶಸ್ತಿ’,‘ಪರಿಸರಮಿತ್ರ ಪ್ರಶಸ್ತಿ’ ಮತ್ತು ‘ಆದರ್ಶ ಗುರು ಪ್ರಶಸ್ತಿ’ಗಳು ಲಭಿಸಿದೆ ಎಂದು ತಿಳಿಸಲಾಗಿದೆ.

andolanait

Recent Posts

ನಾಳೆ ಸಂಜೆ ಬಿಜೆಪಿ ಶಾಸಕಾಂಗ ಪಕ್ಷದ ಸಭೆ

ಬೆಂಗಳೂರು: ವಿಧಾನಮಂಡಲ ಬಜೆಟ್‌ ಅಧಿವೇಶನದ ಹಿನ್ನೆಲೆಯಲ್ಲಿ ನಾಳೆ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಿಗದಿಯಾಗಿದೆ. ನಾಳೆ ಮಾರ್ಚ್.‌10ರಂದು ಸಂಜೆ ಬೆಂಗಳೂರಿನ…

44 mins ago

ಮಂಡ್ಯ| 2 ವರ್ಷದ ಮಗುವಿನ ಕತ್ತು ಹಿಸುಕಿ ದಂಪತಿ ಆತ್ಮಹತ್ಯೆ

ಮಂಡ್ಯ: ಜಿಲ್ಲೆಯ ಕೆ.ಆರ್‌.ಪೇಟೆಯ ಜಯನಗರದಲ್ಲಿ ದಾರುಣ ಘಟನೆಯೊಂದು ನಡೆದಿದ್ದು, ದಂಪತಿಗಳು ತಮ್ಮ ಎರಡು ವರ್ಷದ ಮಗುವಿನ ಕತ್ತು ಸೀಳಿ ತಾವೂ…

1 hour ago

ನಂಜನಗೂಡು| ಕಸುವಿನಹಳ್ಳಿ ಗ್ರಾಮದಲ್ಲಿ ಅದ್ಧೂರಿಯಾಗಿ ಜರುಗಿದ ಶ್ರೀ ನಾರಾಯಣಸ್ವಾಮಿ ದೇಗುಲದ ಜೀರ್ಣೋದ್ಧಾರ ಕಾರ್ಯಕ್ರಮ

ನಂಜನಗೂಡು: ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕಿನ ಕಸುವಿನಹಳ್ಳಿ ಗ್ರಾಮದಲ್ಲಿ ಇತಿಹಾಸ ಪ್ರಸಿದ್ಧ ಪುರಾತನ ಶ್ರೀ ನಾರಾಯಣಸ್ವಾಮಿ ದೇವಾಲಯದ ಜೀರ್ಣೋದ್ಧಾರ ಕಾರ್ಯಕ್ರಮವು…

1 hour ago

ಬಾಗಲಕೋಟೆ ಕ್ಷೇತ್ರದ ಉಪಚುನಾವಣೆ: ಕಾಂಗ್ರೆಸ್‌ ಉಸ್ತುವಾರಿ ಸಮಿತಿ ಪಟ್ಟಿ ಪ್ರಕಟ

ಬೆಂಗಳೂರು: ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಟೀಂ ರಚನೆ ಮಾಡಿದ್ದಾರೆ. ಉಪಚುನಾವಣೆಗೆ ಉಸ್ತುವಾರಿ ಸಮಿತಿ ರಚನೆ…

2 hours ago

ಆರ್‌ಎಸ್‌ಎಸ್‌ ಅನ್ನು ಯಾರೂ ಬ್ಯಾನ್‌ ಮಾಡಲು ಆಗಲ್ಲ: ಸಚಿವ ಸತೀಶ್‌ ಜಾರಕಿಹೊಳಿ

ಬೆಂಗಳೂರು: ಆರ್‌ಎಸ್‌ಎಸ್‌ ಮುಗಿಸುತ್ತೇವೆ ಎನ್ನುವವರು ಭ್ರಮೆಯಲ್ಲಿದ್ದಾರೆ. ನಮ್ಮ ಸಂಘಟನೆಯನ್ನು ಯಾರಿಂದಲೂ ನಿಲ್ಲಿಸಲು ಸಾಧ್ಯವಿಲ್ಲ ಎಂಬ ಕೇಂದ್ರದ ಮಾಜಿ ಸಚಿವ ಅನಂತ್‌…

2 hours ago

ಬಿಳಿಗಿರಿರಂಗನಬೆಟ್ಟ: ಬಂಡೆ ಮೇಲೆ ಚಿರತೆ ವಿಶ್ರಾಂತಿ: ವಿಡಿಯೋ ವೈರಲ್‌

ಚಾಮರಾಜನಗರ: ಗಡಿ ಜಿಲ್ಲೆ ಹಾಗೂ ಹುಲಿಗಳ ನಾಡು ಎಂದೇ ಪ್ರಸಿದ್ಧಿ ಪಡೆದಿರುವ ಚಾಮರಾಜನಗರದಲ್ಲಿ ಕಾಡು ಪ್ರಾಣಿಗಳು ಅತೀ ಹೆಚ್ಚಿನ ಸಂಖ್ಯೆಯಲ್ಲಿವೆ.…

3 hours ago