ಜಿಲ್ಲೆಗಳು

ಗಿರಿಜನ ಕರಿಯಪ್ಪ ಹತ್ಯೆ : ಜಾಮೀನು ಅರ್ಜಿ ವಜಾ

ಮೈಸೂರು: ಎಚ್.ಡಿ.ಕೋಟೆ ತಾಲ್ಲೂಕಿನ ಹೊಸಹಳ್ಳಿ ಹಾಡಿಯ ಗಿರಿಜನ ವ್ಯಕ್ತಿ ಕರಿಯಪ್ಪ ಹತ್ಯೆ ಆರೋಪಿಗಳ ಜಾಮೀನು ಅರ್ಜಿಯನ್ನು ೬ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತಿರಸ್ಕರಿಸಿದೆ.

ಅ.೧೨ರಂದು ಗಿರಿಜನ ವ್ಯಕ್ತಿ ಅರಣ್ಯ ಇಲಾಖೆ ಕಸ್ಟಡಿಯಲ್ಲಿ ಮೃತಪಟ್ಟ ಪ್ರಕರಣದಲ್ಲಿ ಬಂಡೀಪುರ ರಾಷ್ಟ್ರೀಯ ಉದ್ಯಾನವನದ ಎನ್.ಬೇಗೂರು ವಲಯ ಅರಣ್ಯಾಧಿಕಾರಿ ಸೇರಿ ೧೭ ಮಂದಿ ಆರೋಪಿಗಳು ಜಾಮೀನು ನೀಡುವಂತೆ ಎರಡು ಅರ್ಜಿಗಳನ್ನು ಸಲ್ಲಿಸಿದ್ದರು. ಈ ಸಂಬಂಧ ವಿಚಾರಣೆ ನಡೆಸಿದ ನ್ಯಾಯಾಧೀಶರು ವಾದ-ಪ್ರತಿವಾದಗಳನ್ನು ಆಲಿಸಿ ಬುಧವಾರ ೧೭ ಆರೋಪಿಗಳ ಜಾಮೀನು ಅರ್ಜಿಯನ್ನು ವಜಾಗೊಳಿಸಿದರು.ಪ್ರಕರಣವನ್ನು ಈಗಾಗಲೇ ಸಿಐಡಿಗೆ ವಹಿಸಲಾಗಿದ್ದು, ಸಿಐಡಿ ಡಿವೈಎಸ್ಪಿ ಗೋಪಾಲಕೃಷ್ಣ ನೇತೃತ್ವದ ತಂಡ ತನಿಖೆ ಆರಂಭಿಸಿ ಸುಮಾರು ೧೯ ದಿನಗಳಾಗಿವೆ.

andolanait

Recent Posts

ಲೆವಿಸ್ಟಾ ಕೊಡವ ಹಾಕಿ ಚಾಂಪಿಯನ್ಸ್‌ ಟ್ರೋಫಿಗೆ ಚಾಲನೆ

ಮಡಿಕೇರಿ: ಪಾಂಡಂಡ ಕುಟ್ಟಪ್ಪ ಅವರ ಕನಸಿನ ಕೂಸಾದ ಕೊಡವ ಕೌಟುಂಬಿಕ ಹಾಕಿ ಉತ್ಸವದ ಬೆಳ್ಳಿ ಮಹೋತ್ಸವವನ್ನು ಆಚರಿಸಿಕೊಂಡ ಹಿನ್ನೆಲೆಯಲ್ಲಿ ಕೊಡವ…

1 hour ago

ಹಲವು ಹೊಸ ದಾಖಲೆಗಳಿಗೆ ಷರಾ ಬರೆದ 2025

ಗಿರೀಶ್‌ ಹುಣಸೂರು  ೨೦೨೫ನೇ ಸಾಲಿನಲ್ಲಿ ದೇಶ, ರಾಜ್ಯದಲ್ಲಿ ಹಲವು ದಾಖಲೆಗಳಿಗೆ ಸಾಕ್ಷಿಯಾಗಿದೆ. ಭಾರತ ಮೂಲದ ಶುಭಾಂಶು ಶುಕ್ಲಾ ಬಾಹ್ಯಾಕಾಶದಲ್ಲಿ ೧೮…

1 hour ago

ಸಫಾರಿ ನಿರ್ಬಂಧ: ಮೈಸೂರಿನತ್ತ ಪ್ರವಾಸಿಗರ ದಂಡು

ಕೆ.ಬಿ.ರಮೇಶನಾಯಕ ಮೈಸೂರು: ಮಾನವ-ವನ್ಯಜೀವಿಗಳ ಸಂಘರ್ಷವನ್ನು ತಡೆಯಲು ಬಂಡೀಪುರ, ನಾಗರ ಹೊಳೆ ಅಭಯಾರಣ್ಯ ಪ್ರದೇಶದಲ್ಲಿ ಸಫಾರಿಗೆ ನಿರ್ಬಂಧ ವಿಧಿಸಿರುವುದರ ನಡುವೆಯೂ ಕ್ರಿಸ್ಮಸ್,…

1 hour ago

ಸಿಲಿಂಡರ್ ಸ್ಪೋಟ ಪ್ರಕರಣ : ಸಾವಿನ ಸಂಖ್ಯೆ 3ಕ್ಕೆ ಏರಿಕೆ

ಮೈಸೂರು : ಮೈಸೂರು ಅರಮನೆ ಮುಂಭಾಗ ನಿನ್ನೆ ಸಂಜೆ ನಡೆದಿದ್ದ ಹೀಲಿಯಂ ಸ್ಫೋಟ ಪ್ರಕರಣದಲ್ಲಿ ಸಾವಿನ ಸಂಖ್ಯೆ ಇದೀಗ ಮೂರಕ್ಕೆ…

9 hours ago

ಮರ್ಯಾದೆಗೇಡು ಹತ್ಯೆ ವಿರೋಧಿಸಿ ಸಹಿ ಸಂಗ್ರಹ

ಮೈಸೂರು : ಹುಬ್ಬಳ್ಳಿಯಲ್ಲಿ ನಡೆದ ಮರ್ಯಾದಗೇಡು ಹತ್ಯೆ ವಿರೋಧಿಸಿ ಮತ್ತು ಮರ್ಯಾದೆಗೇಡು ಹತ್ಯೆ ತಡೆಗೆ ಕಠಿಣ ಕಾಯಿದೆ ರೂಪಿಸಬೇಕು ಎಂದು…

14 hours ago

ಕೆ.ಆರ್.ಆಸ್ಪತ್ರೆ ಶೆಡ್ ನಲ್ಲಿ ಬೆಂಕಿ : ಹಾಸಿಗೆಗಳು ಬೆಂಕಿಗಾಹುತಿ

ಮೈಸೂರು : ಇಲ್ಲಿನ ಕೆ.ಆರ್. ಆಸ್ಪತ್ರೆಯ ಶೆಡ್ ನಲ್ಲಿ ಬೆಂಕಿ ಕಾಣಿಸಿಕೊಂಡು ಆಸ್ಪತ್ರೆಯ ಹಾಸಿಗೆಗಳು ಬೆಂಕಿಗಾಹುತಿಯಾಗಿವೆ. ಆಸ್ಪತ್ರೆಯ ಚೆಲುವಾಂಬ ವಾರ್ಡ್…

14 hours ago