ಹನೂರು: ಮೈಸೂರು ಜಿಲ್ಲೆ ಹೆಗ್ಗಡೆ ದೇವನ ಕೋಟೆ ತಾಲೂಕಿನ ಜೇನು ಕುರುಬ ಸಮುದಾಯದ ಕರಿಯಪ್ಪ ನನ್ನು ಜಿಂಕೆ ಮಾಂಸ ದ ಕೇಸಿನಲ್ಲಿ ವಿಚಾರಣೆ ನಡೆಸುವ ನೆಪದಲ್ಲಿ ಅಮಾನುಷವಾಗಿ ಹೊಡೆದು ಸಾಯಿಸಿದ ಪ್ರಕರಣದಲ್ಲಿ ಸತ್ಯ ಸತ್ಯತೆ ಕಂಡುಹಿಡಿಯಲು ಪ್ರಕರಣವನ್ನು ಉನ್ನತ ಮಟ್ಟದ ತನಿಖೆಗೆ ಒಪ್ಪಿಸಬೇಕೆಂದು ರಾಜ್ಯ ಮೂಲ ಆದಿವಾಸಿ ವೇದಿಕೆ ಕಾರ್ಯದರ್ಶಿ ಮುತ್ತಯ್ಯ ಸರಕಾರವನ್ನು ಒತ್ತಾಯಿಸಿದ್ದಾರೆ.
ರಾಜ್ಯದ ವಿವಿಧ ಭಾಗಗಳಲ್ಲಿ ನಿರಂತರವಾಗಿ ಅರಣ್ಯಾಧಿಕಾರಿಗಳು ಆದಿವಾಸಿಗಳನ್ನು ಅಮಾನವೀಯವಾಗಿ ನಡೆಸಿ ಕೊಳ್ಳುತಿದ್ದು ಉದ್ದೇಶಪೂರ್ವಕವಾಗಿ ಕೇಸುಗಳನ್ನು ಹಾಕಿ ಬಂದಿಸಿ ಹಲ್ಲೆ ನಡೆಸಿ ಕೊಂದು ಹಾಕುವ ಅತಿರೇಕದ ನಡುವಳಿಕೆ ಯನ್ನ ಪ್ರದರ್ಶಿಸುತ್ತಿರುವ ಅಧಿಕಾರಿಗಳ ಮನ ಸ್ಥಿತಿಯನ್ನು ತೀವ್ರವಾಗಿ ಖಂಡಿಸುತ್ತೇವೆ ಎಂದು ತಿಳಿಸಿದ್ದಾರೆ.
ರಾಮನಗರದ ಬನ್ನೇರುಘಟ್ಟ ಅರಣ್ಯದಲ್ಲಿ ಆದಿವಾಸಿಗಳ ಮೇಲೆ ಹಲ್ಲೆ,ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ರಾಣಿ ಗೇಟ್ ಜೇನುಕುರುಬ ಸಮುದಾಯದ ಬಸವನ ಮೇಲೆ ಗುಂಡು ಹಾರಿಸಿದ ಪ್ರಕರಣ,ಮಂಗಳೂರಿನಲ್ಲಿ ಕೊರಗರ ಮೇಲೆ ನಡೆದ ಪೊಲೀಸ್ ದೌರ್ಜನ್ಯ ಪ್ರಕರಣ ಉದಾಹರಣೆ ಯಷ್ಟೇ,ಆದಿವಾಸಿಗಳ ಹಕ್ಕುಗಳು ಸರಕಾರಿ ಯಂತ್ರದಿಂದ ಎಗ್ಗಿಲ್ಲದೆ ದಮನ ವಾಗುತಿದ್ದು, ರಕ್ಷಣೆಯೇ ಇಲ್ಲವಾಗಿದೆ ಎಂದು ಅವರು ತಿಳಿಸಿದ್ದಾರೆ.
ಕರಿಯಪ್ಪ ಸಾವಿಗೆ ಕಾರಣರಾದ ಅರಣ್ಯ ಅಧಿಕಾರಿಗಳನ್ನು ತಕ್ಷಣ ಕೆಲಸದಿಂದ ವಜಾ ಮಾಡಬೇಕು ಹಾಗೂ ಕರಿಯಪ್ಪ ಕುಟುಂಬಕ್ಕೆ ಒಂದು ಕೋಟಿ ರೂಪಾಯಿ ಪರಿಹಾರ ನೀಡಬೇಕೆಂದು ಆಗ್ರಹಿಸಿದರು.
ಮೈಸೂರು: ಜಗತ್ಪ್ರಸಿದ್ಧ ಮೈಸೂರು ಅರಮನೆ ಆವರಣದಲ್ಲಿ ಜಗಮಗಿಸುವ ದೀಪಾಲಂಕಾರ, ಫಲಪುಷ್ಪ ಪ್ರದರ್ಶನದ ಸೊಬಗಿನ ಮಧ್ಯೆ ಪಾರಂಪರಿಕ ಪೊಲೀಸ್ ಬ್ಯಾಂಡ್‌ನ ಸದ್ದಿನೊಂದಿಗೆ…
ಕೊಳ್ಳೇಗಾಲ: ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಸಂಭವಿಸಿ ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ರಸ್ತೆಯಲ್ಲಿರುವ ಸಾಕಮ್ಮಾಸ್ ಕಾಫಿ ಪುಡಿ ಅಂಗಡಿ ಬುಧವಾರ ರಾತ್ರಿ ಸಂಪೂರ್ಣ…
ಮೈಸೂರು: ರಾಜ್ಯದ ವಿವಿಧೆಡೆ ಸೇವೆ ಸಲ್ಲಿಸುತ್ತಿದ್ದ 25 ಮಂದಿ ಐಪಿಎ ಅಧಿಕಾರಿಗಳನ್ನು ರಾಜ್ಯ ಸರ್ಕಾರ ವರ್ಗಾವಣೆಗೊಳಿಸಿ ಆದೇಶ ನೀಡಿದೆ. ಅವರಲ್ಲಿ…
ಕೊಡಗು: ಕರ್ನಾಟಕ ಸರ್ಕಾರದ ಆದೇಶದಂತೆ ಕೊಡಗಿನ ಪೊಲೀಸ್ ವರಿಷ್ಠಾಧಿಕಾರಿ ರಾಮರಾಜನ್ ಅವರನ್ನು ಬೆಳಗಾವಿ ಜಿಲ್ಲೆಗೆ ವರ್ಗಾವಣೆ ಮಾಡಲಾಗಿದೆ. ಖಾಲಿಯಾದ ಸ್ಥಳಕ್ಕೆ…
ಬೆಂಗಳೂರು: ಸಣ್ಣ ವಯಸ್ಸಿನಿಂದಲೇ ಬರವಣಿಗೆ ರೂಢಿಸಿಕೊಂಡು 9ನೇ ವಯಸ್ಸಿಗೆ 'ಟೇಲ್ಸ್ ಬೈ ಪರಿ' ಪುಸ್ತಕವನ್ನು ಬರೆದು ಹೆಸರು ಮಾಡಿರುವ ನಮ್ಮ…
ನವದೆಹಲಿ: ಕೋಗಿಲು ಲೇಔಟ್‌ನಲ್ಲಿ ಅಕ್ರಮ ನಿವಾಸಿಗಳಿಗೆ ಮನೆ ನೀಡುತ್ತಿದ್ದಾರೆ. ಇದು ರಾಜ್ಯ ಸರ್ಕಾರದ ದಡ್ಡತನದ ಪರಮಾವಧಿ ಎಂದು ಕೇಂದ್ರ ಸಚಿವ…