ಮೈಸೂರು: ಕರ್ನಾಟಕ ರಾಜ್ಯ ಸರ್ಕಾರಿ ಎನ್‌ಪಿಎಸ್ ನೌಕರರ ಸಂಘದವರ ವತಿಯಿಂದ ಇಂದು ನೂತನ ಪಿಂಚಣಿ ಯೋಜನೆಯನ್ನು ರದ್ದುಗೊಳಿಸಿ ಹಳೆಯ ಪಿಂಚಣಿ ವ್ಯವಸ್ಥೆಯನ್ನು ಜಾರಿಗೊಳಿಸುವಂತೆ ಆಗ್ರಹಿಸಿ ನಗರದ ಕೋಟೆ ಆಂಜನೇಯಸ್ವಾಮಿ ದೇವಸ್ಥಾನದ ಬಳಿ ಪಾದಯಾತ್ರೆಯನ್ನು ಹೊರಟು ದೇವರಾಜ ಅರಸು ರಸ್ತೆಯ ಮೂಲಕ ಜಿಲ್ಲಾಧಿಕಾರಿ ಕಚೇರಿಗೆ ತಲುಪಿ ಮನವಿಯನ್ನು ಸಲ್ಲಿಸಿದರು.
ಪ್ರತಿಭಟನೆಯಲ್ಲಿ ವಿಧಾನಪರಿಷತ್ ಸದಸ್ಯ ಸಿ.ಎನ್.ಮಂಜೇಗೌಡ, ಮಾಜಿ ಸದಸ್ಯ ಕೆ.ಟಿ.ಶ್ರೀಕಂಠೇಗೌಡ ಅವರು ಹೋರಾಟವನ್ನು ಬೆಂಬಲಿಸಿದರು. ಎನ್‌ಪಿಎಸ್ ನೌಕರರ ಸಂಘದ ರಾಜ್ಯಾಧ್ಯಕ್ಷ ಶಾಂತಾರಾಂ, ಜಿಲ್ಲಾಧ್ಯಕ್ಷ ಎಸ್.ಆರ್. ಮಂಜುನಾಥ್, ಪದಾಧಿಕಾರಿಗಳಾದ ಶಿವಕುಮಾರ್, ಯಶ್ವಂತ್, ಶ್ರೀಧರ್, ಮುರಳಿಕೃಷ್ಣ, ಚಲುವರಾಜು, ರೇವಣ್ಣ, ಎಂ.ಎಂ. ಮಹದೇವ್ ಮೊದಲಾದವರು ಪಾಲ್ಗೊಂಡಿದ್ದರು.





