ಮೈಸೂರು: ಮಂಡಲ್ ವರದಿಯ ಶಿಫಾರಸ್ಸಿನಂತೆ ಹಿಂದುಳಿದ ವರ್ಗಗಕ್ಕೆ ಶೇ.೨೮ರಷ್ಟು ಮತ್ತು ಪ್ರವರ್ಗ-೧ಕ್ಕೆ ಶೇ.೯ರಷ್ಟು ಮೀಸಲಾತಿಯನ್ನು ಹೆಚ್ಚಿಸುವಂತೆ ಆಗ್ರಹಿಸಿ ಹೋರಾಟ ರೂಪಿಸಲು ಡಿ.೫ರಂದು ದುಂಡು ಮೇಜಿನ ಸಭೆ ಆಯೋಜಿಸಲಾಗಿದೆ ಎಂದು ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಜಾಗೃತ ವೇದಿಕೆ ಆಗ್ರಹಿಸಿದೆ.
ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಈ ಕುರಿತು ವೇದಿಕೆಯ ರಾಜ್ಯಾಧ್ಯಕ್ಷ ಕೆ.ಎಸ್.ಶಿವರಾಮ್ ಮಾತನಾಡಿ, ಪ್ರಸ್ತುತ ಸಂವಿಧಾನದ ಆಶಯಕ್ಕೆ ವಿರುದ್ಧವಾಗಿ ತಳ ಸಮುದಾಯಗಳನ್ನು ಮೀಸಲಾತಿ ಪ್ರಮಾಣದಿಂದ ವಂಚಿಸುವ ಹುನ್ನಾರ ನಡೆಯುತ್ತಿದೆ. ಇದರ ಭಾಗವಾಗಿ ಕೇಂದ್ರ ಸರ್ಕಾರ ಸಂವಿಧಾನಕ್ಕೆ ೧೦೩ನೇಯ ತಿದ್ದುಪಡಿ ತಂದು ಶೇ.೪-೫ರಷ್ಟಿರುವ ಸಮುದಾಯಗಳಿಗೆ ಆರ್ಥಿಕವಾಗಿ ಹಿಂದುಳಿದಿರುವ ಕಾರಣ ನೀಡಿ ಶೇ.೧೦ರಷ್ಟು ಮೀಸಲಾತಿ ನೀಡಿದ್ದು, ಹಿಂದುಳಿದ ವರ್ಗಗಳಿಗೂ ಕೂಡ ಕಲ್ಪಿಸಬೇಕು. ಹೀಗಾಗಿ ಇತರ ಹಿಂದುಳಿದ ವರ್ಗಗಳಿಗೂ ಕೂಡ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ನಿಗದಿ ಪಡಿಸುವ ಕೋಟಾ ನಿಗದಿ ಪಡಿಸಬೇಕಾದ ಹೊಣೆ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಮೇಲಿದೆ ಎಂದರು.
ಸರ್ಕಾರ ಹಿಂದುಳಿದ ವರ್ಗಗಳ ಮೀಸಲಾತಿ ಪ್ರಮಾಣವನ್ನು ಎರಡು- ಎ ವರ್ಗಕ್ಕೆ ಶೇ. ೧೫ ರಿಂದ ೨೭ಕ್ಕೆ ಹೆಚ್ಚಿಸಬೇಕು. ಜೊತೆಗೆ ಪ್ರವರ್ಗ ಒಂದರ ಅಡಿಂಲ್ಲಿ ಬರುವ ಮೀಸಲಾತಿ ಪ್ರಮಾಣವನ್ನು ಶೇ.೪ರಿಂದ ೯ಕ್ಕೆ ಹೆಚ್ಚಿಸುವ ಮೂಲಕ ಸರ್ಕಾರ ಸಾಮಾಜಿಕ ನ್ಯಾಂ ಎತ್ತಿ ಹಿಡಿಂಬೇಕು. ಇಲ್ಲದಿದ್ದಲ್ಲಿ ವರ್ಗ ಸಂಘರ್ಷ ಉಂಟಾಗಲಿದೆ. ಈ ಹಿಂದೆ ಮೀಸಲಾತಿ ಂರಿಗೂ ನೀಡಬಾರದೆಂದು ಹೋರಾಟ, ಹಿಂಸಾಚಾರಕ್ಕೆ ಕಾರಣರಾದವರೇ ಈಗ ಮೀಸಳಾತಿ ಪಡೆಂಲು ಮುಗಿಬಿದ್ದು, ಪಡೆಂತ್ತಿರುವುದು ಖಂಡನೀಯ ಎಂದು ಕಿಡಿಕಾರಿದರು.
ಡಿ.೫ರಂಂದು ದುಂಡಿ ಮೇಜಿನ ಸಭೆ: ಈಗ ಎಲ್ಲರೂ ಮೀಸಲಾತಿ ಪರವೇ ಇದ್ದಾರೆ. ಅಂತೂ, ಇಂತೂ ಮೀಸಲಾತಿ ಎಲ್ಲರಿಗೂ ಬೇಕು ಎಂಬ ಕಾಲಘಟ್ಟದಲ್ಲಿ ನಾವಿzವೆ. ಇದನ್ನು ಸಮರ್ಥವಾಗಿ, ಸಂವಿಧಾನದ ಆಶಂಗಳಿಗೆ ಧಕ್ಕೆ ಬಾರದ ರೀತಿಂಲ್ಲಿ ಮೀಸಲಾತಿ ಜಾರಿಗೊಳಿಸುವ ಜವಾಬ್ದಾರಿ ಸರ್ಕಾರದ ಮೇಲಿದೆ. ಈ ನಿಟ್ಟಿನಲ್ಲಿ ಹಿಂದುಳಿದ ವರ್ಗಗಳ ಮೀಸಲಾತಿ ಹೆಚ್ಚಳಕ್ಕೆ ಡಿ.೫ರಂದು ಬೆಳಿಗ್ಗೆ ೧೧ಕ್ಕೆ ಜಲದರ್ಶಿನಿಯಲ್ಲಿ ದುಂಡು ಮೇಜಿನ ಸಭೆ ನಡೆಯಲಿದೆ. ಪಕ್ಷಾತೀತವಾದ ಸಭೆ ಇದಾಗಿದ್ದು, ವಿವಿಧ ಸಮುದಾಯದ ಸ್ವಾಮೀಜಿಗಳು, ಮುಖಂಡರು, ನಾಯಕರುಗಳು ಮುಂತಾದವರು ಪಾಲ್ಗೊಳ್ಳುವರು ಎಂದರು.
ಡಿ. ನಾಗಭೂಷಣ್, ಎನ್.ಆರ್. ನಾಗೇಶ್, ರವಿನಂದನ್, ಯೋಗೀಶ್ ಉಪ್ಪಾರ್, ಮೊಗಣ್ಣಾಚಾರ್, ಲೋಕೇಶ್‌ಕುಮಾರ್ ಮಾದಾಪುರ, ಹರೀಶ್ ಮೊಗಣ್ಣ, ಎಚ್. ಪ್ರಕಾಶ್ ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದರು.
ಮೈಸೂರಿನ ಜಿಲ್ಲಾ ಪತ್ರಕರ್ತರ ಭವನದಲ್ಲಿ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಜಾಗೃತ ವೇದಿಕೆ ವತಿಯಿಂದ ನಡೆದ ಪತ್ರಿಕಾಗೋಷ್ಠಿಯಲ್ಲಿ ವೇದಿಕೆ ಅಧ್ಯಕ್ಷ ಕೆ.ಎಸ್.ಶಿವರಾಮ್ ಮಾತನಾಡಿದರು.
ಮಂಡ್ಯ: ಚಲಿಸುತ್ತಿದ್ದ ಕಾರಿಗೆ ಮೊಟ್ಟೆ ಹೊಡೆದು ಚಾಲಕನ ಕಣ್ಣಿಗೆ ಕಾರದ ಪುಡಿ ಎರಚಿ ನಗದು ದರೋಡೆ ಮಾಡಿರುವ ಘಟನೆ ಮಂಡ್ಯ…
ಹೈದರಾಬಾದ್: ಸಂಧ್ಯಾ ಥಿಯೇಟರ್‌ನಲ್ಲಿ ಕಾಲ್ತುಳಿತ ಸಂಭವಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ತೆಲುಗು ನಟ ಅಲ್ಲು ಅರ್ಜುನ್‌ಗೆ ನೋಟಿಸ್ ನೀಡಲಾಗಿದೆ. ನಾಳೆ ಬೆಳಿಗ್ಗೆ 11…
ಬೆಂಗಳೂರು: ನಟ ಯಶ್ ಹಾಗೂ ಪತ್ನಿ ರಾಧಿಕಾ ಪಂಡಿತ್ ಅವರಿಂದು ಇತ್ತೀಚೆಗೆ ನಿಧನರಾಗಿದ್ದ ಮಾಜಿ ಸಿಎಂ ಎಸ್.ಎಂ.ಕೃಷ್ಣ ಅವರ ನಿವಾಸಕ್ಕೆ…
ಮುಂಬೈ: ಬಾಲಿವುಡ್‌ನ ಖ್ಯಾತ ನಿರ್ದೇಶಕ ಶ್ಯಾಮ್ ಬೆನಗಲ್ ಅವರಿಂದು ವಿಧಿವಶರಾಗಿದ್ದಾರೆ. ಅವರಿಗೆ 90 ವರ್ಷ ವಯಸ್ಸಾಗಿತ್ತು. ಕಳೆದ ಕೆಲ ತಿಂಗಳುಗಳಿಂದ…
ಜೈಪುರ: ಭಾರತದ ಸ್ಟಾರ್ ಬ್ಯಾಡ್ಮಿಂಟನ್ ಆಟಗಾರ್ತಿ ಪಿ.ವಿ.ಸಿಂಧು ಅವರು ಉದ್ಯಮಿಯೊಂದಿಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ರಾಜಸ್ಥಾನದ ಉದಯಪುರದಲ್ಲಿ ಅದ್ಧೂರಿಯಾಗಿ ನಡೆದ…
ಮೈಸೂರು: ರೈಲ್ವೆ ಇಲಾಖೆಯಲ್ಲಿ ಉದ್ಯೋಗ ಪಡೆಯಲು ಕನ್ನಡಿಗರು ನಿರಾಸಕ್ತಿ ತೋರುತ್ತಿದ್ದಾರೆ ಎಂದು ಕೇಂದ್ರ ಸಚಿವ ವಿ.ಸೋಮಣ್ಣ ಬೇಸರ ವ್ಯಕ್ತಪಡಿಸಿದ್ದಾರೆ. ಈ…